Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಡವರಿಗೆ ಸೂರು ಕಲ್ಪಿಸದಿದ್ದಲ್ಲಿ ಹೋರಾಟ ತೀವ್ರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಡವರಿಗೆ ಸೂರು ಕಲ್ಪಿಸದಿದ್ದಲ್ಲಿ ಹೋರಾಟ ತೀವ್ರ*

ಅಕ್ಟೋಬರ್ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.13 NEWS DESK : ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಲೈನ್ ಮನೆಗಳಲ್ಲಿ ವಾಸವಿರುವ ಭೂರಹಿತ ಪರಿಶಿಷ್ಟ ಕುಟುಂಬಗಳಿಗೆ ‘ಸೂರು’ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ ಅವರು, ಈಗಾಗಲೇ ಪರಿಶಿಷ್ಟರಿಗೆ ವಿತರಿಸಲೆಂದು ಕಾಯ್ದಿರಿಸಿದ ಸರಕಾರಿ ಜಾಗಗಳಲ್ಲಿ ಟೆಂಟ್‍ಗಳನ್ನು ನಿರ್ಮಿಸಿಕೊಂಡು ಸಂಕಷ್ಟದ ಬದುಕು ಸವೆಸುತ್ತಿರುವ ಪರಿಶಿಷ್ಟ ಕುಟುಂಬಗಳಿಗೆ ನಿವೇಶನ ಒದಗಿಸಲು ಕ್ರಮ ಕೈಗೊಳ್ಳಬೇಕು. ಇದಕ್ಕೆ ಬದಲಾಗಿ ಅವರನ್ನು ಸ್ಥಳದಿಂದ ಒಕ್ಕಲೆಬ್ಬಿಸುವ ಪ್ರಯತ್ನ ನಡೆಯುತ್ತಿದೆ. ಇದನ್ನು ಮುಂದುವರಿಸಿದಲ್ಲಿ ಸಂಘಟನೆಯ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ವಸತಿ ನಿವೇಶನಗಳಿಲ್ಲದ 6 ಸಾವಿರಕ್ಕೂ ಹೆಚ್ಚಿನ ಪರಿಶಿಷ್ಟ ಮಂದಿ ಇದ್ದು, ಸದರಿ ಫಲಾನುಭವಿಗಳಿಗೆ ವಿತರಿಸಲು ಲಭ್ಯವಿರುವ ಜಾಗವನ್ನು ನಿವೇಶನಗಳನ್ನಾಗಿ ಪರಿವರ್ತಿಸಿ ವಿತರಿಸಬೇಕು. ಈ ರೀತಿಯ ಕ್ರಮ ಕೈಗೊಳ್ಳದೆ ಅಲ್ಲಿ ಟೆಂಟ್ ನಿರ್ಮಿಸಿಕೊಂಡು ಬದುಕುತ್ತಿರುವ ಬಡವರನ್ನು ತೆರವುಗೊಳಿಸುವ ಪ್ರಯತ್ನ ನಡೆಯುತ್ತಿದೆ. ನಿವೇಶನ ರಹಿತರಿಗೆ ಅನ್ಯಾಯವಾಗುತ್ತಿರುವುದರಿಂದ ಪೊನ್ನಂಪೇಟೆ ತಾಲ್ಲೂಕಿಗೆ ಸಂಬಂಧಿಸಿದ ಐಟಿಡಿಪಿ ಅಧಿಕಾರಿ ಹಾಗೂ ತಹಶೀಲ್ದಾರ್ ಅವರನ್ನು ತಕ್ಷಣ ವರ್ಗಾಯಿಸಬೇಕೆಂದು ಆಗ್ರಹಿಸಿದರು. ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಅವರು ಮಾತನಾಡಿ, ಕಳೆದ ವಿಧಾನಸಭಾ ಚುಣಾವಣೆಯಲ್ಲಿ ದಲಿತ ಸಂಘರ್ಷ ಸಮಿತಿಯ ಬೆಂಬಲದಿಂದ ಜಿಲ್ಲೆಯಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ. ಅಧಿಕಾರ ಬಂದ ಬಳಿಕ ಇವರು ದಲಿತ ಸಂಘರ್ಷ ಸಮಿತಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ, ನಿಗಮ, ಮಂಡಳಿಗಳ ಆಯ್ಕೆಯ ಸಂದರ್ಭವು ನಮ್ಮನ್ನು ಪರಿಗಣಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮುಂದಿನ ಜಿಲ್ಲಾ ಪಂಚಾಯ್ತಿ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಗಳಲ್ಲಿ ದಸಂಸ ಬೆಂಬಲವಿಲ್ಲದೆ ಕಾಂಗ್ರೆಸ್ ಗೆದ್ದು ತೋರಿಸಲಿ ಎಂದು ಸವಾಲೆಸೆದರು. ಪೊನ್ನಂಪೇಟೆ ತಾಲ್ಲೂಕು ಸಂಚಾಲಕ ಹೆಚ್.ಆರ್.ಜಗದೀಶ್ ಅವರು ಮಾತನಾಡಿ, ಪೊನ್ನಂಪೇಟೆ ತಾಲ್ಲೂಕಿನ ಕುರ್ಚಿ ಗ್ರಾಮದಲ್ಲಿರುವ 5 ಏಕರೆ ಸರಕಾರಿ ಜಾಗದಲ್ಲಿ ಸುಮಾರು 97 ಬಡ ಕುಟುಂಬಗಳು ಗುಡಿಸಲು ಕಟ್ಟಿ ವಾಸಿಸುತ್ತಿದ್ದಾರೆ. ಗುಂಡತ್‍ಕೊಲ್ಲಿಯಲ್ಲಿ 20 ಕಟುಂಬಗಳು ಕಳೆದ ಮೂರು ನಾಲ್ಕು ದಶಕಗಳಿಂದ ವಾಸವಿದ್ದಾರೆ. ಈ ಕುಟುಂಬಗಳಿಗೆ ನಿವೇಶನ ಒದಗಿಸುವುದಕ್ಕೆ ಬದಲಾಗಿ, ಅವರನ್ನು ತೆರವುಗೊಳಿಸುವ ಪ್ರಯತ್ನ ನಡೆಯುತ್ತಿದೆ. ಸ್ಥಳಕ್ಕೆ ಸಂಬಂಧಿಸಿದಂತೆ ಇರುವ ಸಂಶಯಗಳ ನಿವಾರಣೆಗೆ ಸರ್ವೇ ನಡೆದಿದೆ. ಆದರೆ, ಈ ಮಾಹಿತಿಯನ್ನು ಕಂದಾಯ ಅಧಿಕಾರಿಗಳು ನೀಡುತ್ತಿಲ್ಲವೆಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಹೆಚ್.ಕೆ.ಗಣೇಶ್, ಸದಸ್ಯರಾದ ವೈ.ಕೆ.ರವಿ ಹಾಗೂ ಪಿ.ಕೆ.ಮಣಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.