
ಕುಶಾಲನಗರ ಅ.15 NEWS DESK : ಕುಶಾಲನಗರ ಮೂಕಾಂಬಿಕಾ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕರ ತಂಡ ಕಬಡ್ಡಿ ವಿಭಾಗದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ.ಪಿ.ಚಂದ್ರಕಲ, ಪ್ರಾಂಶುಪಾಲರಾದ ಬಿ.ಎಸ್.ಪ್ರಸನ್ನ, ದೈಹಿಕ ಶಿಕ್ಷಣ ಶಿಕ್ಷಕ ಮತ್ತು ಮುಖ್ಯೋಪಾಧ್ಯಾಯರಾದ ಡಿ.ಕೆ.ಸುರೇಶ್ ಹಾಗೂ ಉಪನ್ಯಾಸಕರು ವಿಜೇತ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.









