Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತಮ್ಮ ಇಲಾಖೆಯ ವೈಫಲ್ಯವನ್ನು ಮರೆಮಾಚಲು ಆರ್‌ಎಸ್‌ಎಸ್ ವಿರುದ್ಧ ಹೇಳಿಕೆ : ಪ್ರಿಯಾಂಕ್ ಖರ್ಗೆ ವಿರುದ್ಧ ವಿರಾಜಪೇಟೆ ಬಿಜೆಪಿ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತಮ್ಮ ಇಲಾಖೆಯ ವೈಫಲ್ಯವನ್ನು ಮರೆಮಾಚಲು ಆರ್‌ಎಸ್‌ಎಸ್ ವಿರುದ್ಧ ಹೇಳಿಕೆ : ಪ್ರಿಯಾಂಕ್ ಖರ್ಗೆ ವಿರುದ್ಧ ವಿರಾಜಪೇಟೆ ಬಿಜೆಪಿ ಅಸಮಾಧಾನ*

ಅಕ್ಟೋಬರ್ 15, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.15 : ಪಂಚಾಯತ್ ರಾಜ್, ಗ್ರಾಮೀಣ ಅಭಿವೃದ್ಧಿ ಮತ್ತು ಐಟಿ, ಬಿಟಿ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಇಲಾಖೆಯ ವೈಫಲ್ಯಗಳನ್ನು ಮರೆಮಾಚಲು ಹಾಗೂ ಕಾಂಗ್ರೆಸ್ ಹೈಕಮಾಂಡ್ ನ್ನು ಮೆಚ್ಚಿಸಲು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಆರ್‌ಎಸ್‌ಎಸ್ ವಿರುದ್ಧ ಪ್ರಿಯಾಂಕ್ ಖರ್ಗೆ ಅವರು ನೀಡಿರುವ ಹೇಳಿಕೆಯನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ. ಅತ್ಯಂತ ಪ್ರಮುಖ ಖಾತೆಗಳನ್ನು ಹೊಂದಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಮರ್ಪಕವಾಗಿ ಕಾರ್ಯನಿರ್ವಹಿಸಲಾಗದೆ ವೈಫಲ್ಯವನ್ನು ಕಾಣುತ್ತಿದ್ದಾರೆ. ತಮ್ಮ ಇಲಾಖೆಗಳ ನ್ಯೂನತೆಯನ್ನು ಮರೆಮಾಚಲು ಮತ್ತು ಚರ್ಚೆಯ ದಿಕ್ಕನ್ನು ಬದಲಾಯಿಸುವ ಉದ್ದೇಶದಿಂದ ಆರ್‌ಎಸ್‌ಎಸ್ ವಿರುದ್ಧ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ, ಅಲ್ಲದೆ ಕಾಂಗ್ರೆಸ್ ನಾಯಕರನ್ನು ಮೆಚ್ಚಿಸುವುದಕ್ಕೋಸ್ಕರ ಅದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಇವರು ಆರ್‌ಎಸ್‌ಎಸ್ ವಿರುದ್ಧ ಹಲವು ಬಾರಿ ದ್ವೇಷ ಕಾರಿದ್ದಾರೆ. ಆರ್‌ಎಸ್‌ಎಸ್ ಏನು ಮಾಡಿದೆ ಮತ್ತು ಏನು ಮಾಡುತ್ತಿದೆ ಎನ್ನುವ ಬಗ್ಗೆ ತಿಳಿದುಕೊಳ್ಳುವ ನೈಜ ಕಾಳಜಿ ಇದ್ದರೆ ಸಂಘದ ಶಾಖೆಗೆ ಬರಲಿ ಎಂದು ಸವಾಲು ಹಾಕಿರುವ ರಾಕೇಶ್ ದೇವಯ್ಯ, ಕಳೆದ 25 ತಿಂಗಳ ಅವಧಿಯಲ್ಲಿ ಪ್ರಿಯಾಂಕ್ ಖರ್ಗೆ ಅವರು ತಮ್ಮ ಇಲಾಖೆಯ ಮೂಲಕ ಮಾಡಿರುವ ಸಾಧನೆಯನ್ನು ಸಾರ್ವಜನಿಕರ ಮುಂದಿಡಬೇಕು ಎಂದು ಒತ್ತಾಯಿಸಿದ್ದಾರೆ. *ಪಂಚಾಯ್ತಿಗಳಲ್ಲಿ ಹಿನ್ನಡೆ* ಪಂಚಾಯತ್ ರಾಜ್ ಇಲಾಖೆಯ ಜವಾಬ್ದಾರಿ ತೆಗೆದುಕೊಂಡ ನಂತರ ಕೊಡಗಿನ ಹಲವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಬೇರೆಕಡೆಗೆ ವರ್ಗಾವಣೆ ಮಾಡಿದ್ದಾರೆ. ಹೊಸದಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ನೇಮಕ ಮಾಡದೆ ಇರುವುದರಿಂದ ಸಾರ್ವಜನಿಕರ ಕೆಲಸ, ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತಿದೆ. ಎರಡು, ಮೂರು ಪಂಚಾಯ್ತಿಗಳಿಗೆ ಓರ್ವ ಅಭಿವೃದ್ಧಿ ಅಧಿಕಾರಿಯನ್ನು ನಿಯೋಜಿಸಲಾಗುತ್ತಿದ್ದು, ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದಾರೆ. ಇದರ ನಡುವೆಯೇ ಮತ್ತೆ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಪ್ರಕ್ರಿಯೆ ನಡೆದಿದೆ. ಗ್ರಾಮೀಣ ಅಭಿವೃದ್ಧಿ ಇಲಾಖೆಯಿಂದ ಯಾವ ಹೊಸ ಯೋಜನೆಗಳು ಕೂಡ ಕೊಡಗಿನ ಗ್ರಾಮಗಳಿಗೆ ತಲುಪಿಲ್ಲ ಎಂದು ಆರೋಪಿಸಿದ್ದಾರೆ. *ಐಟಿ ಬಿಟಿ ಸಮಸ್ಯೆ* ಬೆಂಗಳೂರಿನಲ್ಲಿರುವ ಐಟಿ, ಬಿಟಿ ಸಂಸ್ಥೆಗಳು ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದು, ಹೂಡಿಕೆದಾರರು ರಾಜ್ಯದಿಂದ ಹೊರಹೋಗಬೇಕಾಗುತ್ತದೆ ಎನ್ನುವ ಮುನ್ಸೂಚನೆ ನೀಡುತ್ತಿದ್ದಾರೆ. ತಮ್ಮ ಇಲಾಖೆಗಳ ತುಂಬಾ ವೈಫಲ್ಯಗಳನ್ನೇ ತುಂಬಿಕೊಂಡಿರುವ ಪ್ರಿಯಾಂಕ್ ಖರ್ಗೆ ಅವರು ಜನರ ಹಾದಿ ತಪ್ಪಿಸುವ ಉದ್ದೇಶದಿಂದ ದೇಶಭಕ್ತ ಸಂಘಟನೆ ಆರ್‌ಎಸ್‌ಎಸ್ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆ ಮೂಲಕ ಕ್ಷುಲ್ಲಕ ರಾಜಕಾರಣವನ್ನು ಪ್ರದರ್ಶಿಸಿದ್ದಾರೆ ಎಂದು ಟೀಕಿಸಿರುವ ರಾಕೇಶ್ ದೇವಯ್ಯ ಅವರು, ತಮ್ಮ ಇಲಾಖೆಗಳ ನ್ಯೂನತೆಯನ್ನು ಮೊದಲು ಸರಿಪಡಿಸಲಿ ಎಂದು ಒತ್ತಾಯಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.