Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕುಶಾಲನಗರದಲ್ಲಿ ಸ್ವಚ್ಛ ಕೊಡಗು-ಸುಂದರ ಕೊಡಗು ಅಭಿಯಾನ : ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಛತಾ ಕಾರ್ಯ*
ಇತ್ತೀಚಿನ ಸುದ್ದಿಗಳು

*ಕುಶಾಲನಗರದಲ್ಲಿ ಸ್ವಚ್ಛ ಕೊಡಗು-ಸುಂದರ ಕೊಡಗು ಅಭಿಯಾನ : ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಛತಾ ಕಾರ್ಯ*

October 15, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

  • ಕುಶಾಲನಗರ ಅ.15 NEWS DESK : ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಮತ್ತು ಜಿಲ್ಲಾ ಛೇಂಬರ್ ಆಫ್ ಕಾಮರ್ಸ್ ಸಂಘಟನೆ ಹಾಗೂ ಮತ್ತಿತರ ಸಂಘಟನೆಗಳ ಸಹಯೋಗದೊಂದಿಗೆ ಬುಧವಾರ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛ ಕೊಡಗು- ಸುಂದರ ಕೊಡಗು: ಸ್ವಚ್ಛತಾ ಅಭಿಯಾನವನ್ನು ಜಿಲ್ಲೆಯ ವಾಣಿಜ್ಯ ನಗರಿಯಾದ ಕುಶಾಲನಗರ ಪಟ್ಟಣದಲ್ಲಿ ವಿವಿಧ ಸಂಘ- ಸಂಸ್ಥೆಗಳು ಹಾಗೂ ನಾಗರಿಕರ ಸಮ್ಮುಖದಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಕುಶಾಲನಗರ ಪಟ್ಟಣದಲ್ಲಿಗಣಪತಿ ದೇವಸ್ಥಾನದ ಮುಂಭಾಗದಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿ ಸ್ವಚ್ಛತಾ ಆಂದೋಲನಕ್ಕೆ ಚಾಲನೆ ನೀಡಲಾಯಿತು. ಸ್ವಚ್ಛತೆ ಕುರಿತ ಘೋಷಣೆಗಳು ಹಾಗೂ ಸ್ವಚ್ಚತಾ ಪ್ರತಿಜ್ಞಾ ವಿಧಿ ಸ್ವೀಕರಿಸುವ ಮೂಲಕ ದಾರಿಯಲ್ಲಿ ಬಿದ್ದಿದ್ದ ಕಸ,ಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯ ಮತ್ತಿತರ ಕಸವನ್ನು ಹೆರಕಿ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛ ಮಾಡಲಾಯಿತು. ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು, ಕುಶಾಲನಗರ ಪಟ್ಟಣ ಸೇರಿದಂತೆ ಜಿಲ್ಲೆಯಲ್ಲಿ ಸ್ವಚ್ಛತೆ ಕಾಪಾಡಲು ಸಾರ್ವಜನಿಕರ ಸಹ­ಭಾಗಿತ್ವ ಅಗತ್ಯ ಎಂದರು. ಸ್ವಚ್ಛತಾ ಕಾರ್ಯದ ಉದ್ದೇಶ ಕುರಿತು ಮಾಹಿತಿ ನೀಡಿದ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷ ಬಿ.ಆರ್.ನಾಗೇಂದ್ರಪ್ರಸಾದ್ ಮಾತನಾಡಿ, ಜಿಲ್ಲೆಯಲ್ಲಿ ಸ್ವಚ್ಛ, ಹಸಿರು ಹಾಗೂ ಸುಂದರ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಜಿಲ್ಲೆಯಲ್ಲಿ ಈ ದಿನ ಏಕಕಾಲದಲ್ಲಿ ಹಮ್ಮಿಕೊಂಡಿರುವ ಸ್ವಚ್ಚತಾ ಅಭಿಯಾನವನ್ನು ನಿರಂತರವಾಗಿ ಮುಂದುವರಿಸಿಕೊಂಡು ಹೋಗುವ ಮೂಲಕ ಜಿಲ್ಲೆಯನ್ನು ಸ್ವಚ್ಛ ಕೊಡಗು ಮತ್ತು ಸುಂದರ‌ ಕೊಡಗು ಜಿಲ್ಲೆಯನ್ನಾಗಿ ರೂಪಿಸಲು ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು. ಚೇಂಬರ್ ಆಫ್ ಕಾಮರ್ಸ್ ನ ಕುಶಾಲನಗರ ಸ್ಥಾನೀಯ ಸಮಿತಿಯ ಅಧ್ಯಕ್ಷ ಕೆ.ಎಸ್.ನಾಗೇಶ್ ಮಾತನಾಡಿ, ಈ ಸ್ವಚ್ಚತಾ ಆಂದೋಲನವು ಒಂದು ದಿನಕ್ಕೆ ಸೀಮಿತಗೊಳ್ಳದೇ ನಿರಂತರವಾಗಿ ಮುಂದುವರೆಯುವ ಮೂಲಕ ಸ್ವಚ್ಚ ಪರಿಸರ ನಿರ್ಮಾಣಕ್ಕೆ ಪಣ ತೊಡಬೇಕಿದೆ ಎಂದರು. ಸ್ವಚ್ಚತಾ ಪ್ರತಿಜ್ಞಾ ವಿಧಿ ಬೋಧಿಸಿದರ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಸಂಚಾಲಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಪರಿಸರಕ್ಕೆ ಮಾರಕವಾದ ಏಕ ಬಳಕೆಯ ಪ್ಲಾಸ್ಟಿಕ್ ತ್ಯಜಿಸುವ ಮೂಲಕ ಪರಿಸರ ಸ್ನೇಹಿ ವಸ್ತುಗಳನ್ನು ಬಳಕೆ ಮಾಡುವ ಮೂಲಕ ಸ್ವಚ್ಛ, ನೈರ್ಮಲ್ಯ, ಹಸಿರು ಹಾಗೂ ಸುಂದರ ಪರಿಸರ ನಿರ್ಮಾಣಕ್ಕೆ ಸಂಕಲ್ಪ ತೊಡಬೇಕು. ಕಸವನ್ನು ಎಲ್ಲೆಂದರಲ್ಲಿ ಬಿಸಾಕದೆ ಸೂಕ್ತವಾಗಿ ವಿಲೇವಾರಿ ಮಾಡುವ ಮೂಲಕ ಪರಿಸರ ಸ್ವಚ್ಚತೆ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು. ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕುಡಾ ಮಾಜಿ ಅಧ್ಯಕ್ಷ ಬಿ.ಜಿ.ಮಂಜುನಾಥ್ ಗುಂಡೂರಾವ್, ಪೊಲೀಸ್ ವೃತ್ತ‌ ನಿರೀಕ್ಷಿಕ ದಿನೇಶ್ ಕುಮಾರ್, ಪುರಸಭೆಯ ಮುಖ್ಯಾಧಿಕಾರಿ ಟಿ.ಜೆ.ಗಿರೀಶ್, ಹಿರಿಯ ಆರೋಗ್ಯ ನಿರೀಕ್ಷಕ ಉದಯ್ ಕುಮಾರ್, ಟ್ರಾವೆಲ್ಸ್ ಅಸೋಸಿಯೇಷನ್ ನ ಪ್ರಮುಖರಾದ ಜನಾರ್ದನ ಪ್ರಭು, ಡಿ.ಕೆ.ಮಂಜುನಾಥ್, ಚಂದ್ರು, ವಿವಿಧ ಸಂಘಟನೆಗಳ ಪ್ರಮುಖರಾದ ಜೋಸೆಫ್ ವಿಕ್ಟರ್ ಸೋನ್ಸ್, ಚೇಂಬರ್ ನ ಪ್ರಮುಖರಾದ ಎಂ.ಡಿ.ರಂಗಸ್ವಾಮಿ, ಚಿತ್ರಾ ರಮೇಶ್, ಕೆ.ಎಸ್.ರಾಜಶೇಖರ್, ಟ್ರಾವೆಲ್ಸ್ ಅಸೋಸಿಯೇಷನ್ ನ ಪ್ರಮುಖರಾದ ಜನಾರ್ದನ ಪ್ರಭು, ಡಿ.ಕೆ.ಮಂಜುನಾಥ್, ಚಂದ್ರು, ವಿವಿಧ ಸಂಘಟನೆಗಳ ಪ್ರಮುಖರಾದ ಜೋಸೆಫ್ ವಿಕ್ಟರ್ ಸೋನ್ಸ್, ಕೆ.ಜಿ.ಸತೀಶ್, ಕೆ.ಬಿ.ರಾಜು, ವಿ.ಪಿ.ಮುರುಳಿ, ಪಿ.ಎಸ್. ಸುಂದರ್, ವಿ.ಆರ್.ಮಂಜುನಾಥ್ ಸೇರಿದಂತೆ ಪೌರ ಕಾರ್ಮಿಕರು, ನಾಗರಿಕರು ಪಾಲ್ಗೊಂಡಿದ್ದರು. ಪಟ್ಟಣದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಿಂದ ಆರಂಭಗೊಂಡ ಸ್ವಚ್ಚತಾ ಕಾರ್ಯವು ಪಟ್ಟಣದ ಪ್ರಮುಖ ಬೀದಿ, ಅಯ್ಯಪ್ಪ ಸ್ವಾಮಿ ರಸ್ತೆ, ರಥಬೀದಿ, ಬಸ್ ನಿಲ್ದಾಣದ ಬಳಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಚತೆ ನಡೆಸಲಾಯಿತು. ಪಟ್ಟಣದ ಪ್ರಮುಖ ರಸ್ತೆ, ರಥಬೀದಿ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಪುರಸಭೆಯ ಪೌರ ಕಾರ್ಮಿಕರು ಕಸ, ಕಡ್ಡಿ ಮತ್ತಿತರ ತ್ಯಾಜ್ಯವನ್ನು ತೆಗೆದು ಸ್ವಚ್ಚಗೊಳಿಸಿದ್ದು ಗಮನ ಸೆಳೆಯಿತು. ಕುಶಾಲನಗರ ಪಟ್ಟಣದ ಹೃದಯಭಾಗವಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಿಂದ ಆರಂಭಗೊಂಡ ಸ್ವಚ್ಚತಾ ಆಂದೋಲನದಲ್ಲಿ ಕುಶಾಲನಗರ ಪುರಸಭೆ, ಛೇಂಬರ್ ಆಫ್ ಕಾಮರ್ಸ್, ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್, ಕುಡಾ, ಜೆಸಿಐ, ಟ್ರಾವೆಲ್ಸ್ ಅಸೋಸಿಯೇಷನ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆ, ವಾಸವಿ ಕ್ಲಬ್ ಸೇರಿದಂತೆ ಮತ್ತಿತರ ಸಂಘ ಸಂಸ್ಥೆಗಳು, ನಾಗರಿಕರು ಪಾಲ್ಗೊಂಡಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕಾನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.73.10 ಲಕ್ಷ ಲಾಭ*
Next Article *ಕಾನೂನು ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.