Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ತಲಕಾವೇರಿಯನ್ನು ಕೊಡವರ ಪವಿತ್ರ ಯಾತ್ರಾಸ್ಥಳವೆಂದು ಗುರುತಿಸಲು ಸಿಎನ್‌ಸಿ ಒತ್ತಾಯ*
ಇತ್ತೀಚಿನ ಸುದ್ದಿಗಳು

*ತಲಕಾವೇರಿಯನ್ನು ಕೊಡವರ ಪವಿತ್ರ ಯಾತ್ರಾಸ್ಥಳವೆಂದು ಗುರುತಿಸಲು ಸಿಎನ್‌ಸಿ ಒತ್ತಾಯ*

October 15, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.15 : ಆದಿಮಸಂಜಾತ ಏಕ-ಜನಾಂಗೀಯ ಕೊಡವರ ಪವಿತ್ರ ಜಲದೇವತೆ ಕಾವೇರಿ ನದಿಯ ಉಗಮಸ್ಥಾನ ತಲಕಾವೇರಿಯನ್ನು ‘ಕೊಡವರ ಪವಿತ್ರ ಯಾತ್ರಾಸ್ಥಳವೆಂದು ಗುರುತಿಸಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಆದಿಮಸಂಜಾತ ಏಕ-ಜನಾಂಗೀಯ ಕೊಡವರು, ಆನಿಮಿಸ್ಟಿಕ್ ನಂಬಿಕೆಯುಳ್ಳವರಾಗಿದ್ದು, ಅವರ ಎಲ್ಲಾ ಜಾನಪದ ಆಚರಣೆಗಳು ಪವಿತ್ರ ಜಲದೇವತೆ ಹಾಗೂ ಜೀವನಾಡಿ ಕಾವೇರಿ ನದಿಯ ಸುತ್ತ ಸುತ್ತುತ್ತವೆ. ಆದ್ದರಿಂದ ಸರಕಾರ ಜೆರುಸಲೆಮ್‌ನಲ್ಲಿರುವ ಯಹೂದಿಗಳ ದೇವಾಲಯ ಮೌಂಟ್ ಮೊರಿಯಾದ ಮಾದರಿಯಲ್ಲಿ ತಲಕಾವೇರಿಯನ್ನು ಕೊಡವರ ಪವಿತ್ರ ತೀರ್ಥಯಾತ್ರಾ ಸ್ಥಳವೆಂದು ಗುರುತಿಸಬೇಕೆಂದು ಒತ್ತಾಯಿಸಿ ರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು, ಕೇಂದ್ರ ಗೃಹಮಂತ್ರಿಗಳು, ಮುಖ್ಯಮಂತ್ರಿಗಳು ಹಾಗೂ ವಿಶ್ವರಾಷ್ಟç ಸಂಸ್ಥೆಯ ಮಹಾ ಕಾರ್ಯದರ್ಶಿಗಳಿಗೆ ಜ್ಞಾಪನಾ ಪತ್ರ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಆದಿಮಸಂಜಾತ ಕೊಡವರು ಅ.17 ರಂದು ಕಾವೇರಿ ತೀರ್ಥೋದ್ಭವವನ್ನು ಕಣ್ತುಂಬಿಕೊಳ್ಳಲು ಮತ್ತು ಆಚರಿಸಲು ಸಜ್ಜಾಗಿದ್ದಾರೆ. ಆನಿಮಿಸ್ಟಿಕ್ ನಂಬಿಕೆಯುಳ್ಳ ಆದಿಮಸಂಜಾತ ಕೊಡವರು ಪವಿತ್ರ ಕ್ಷಣಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ಸಂದರ್ಭದಲ್ಲಿ ಸಿಎನ್‌ಸಿ ಸಂಘಟನೆ ಕೊಡವರ ಮಹತ್ವದ ಆಧ್ಯಾತ್ಮಿಕ ಮತ್ತು ಕಾನೂನುಬದ್ಧ ಆಕಾಂಕ್ಷೆಗಳನ್ನು ಭಾರತ ಸರಕಾರ ಹಾಗೂ ಕರ್ನಾಟಕ ಸರಕಾರದ ಮುಂದೆ ಮಂಡಿಸುತ್ತಿದೆ ಎಂದು ಹೇಳಿದ್ದಾರೆ. *ಬೇಡಿಕೆಗಳು* ತಲಕಾವೇರಿಯನ್ನು ಜೆರುಸಲೆಮ್ ಮಾದರಿಯಲ್ಲಿ ಕೊಡವರ ಪವಿತ್ರ ಯಾತ್ರಾಸ್ಥಳವೆಂದು ಗುರುತಿಸಬೇಕು. ಕಾವೇರಿ ನದಿಗೆ ಜೀವರಾಶಿ ಸ್ಥಾನಮಾನವನ್ನು ಲಿವಿಂಗ್‌ಎಂಟಿಟಿ ವಿತ್ ಲೀಗಲ್ ಪರ್ಸನ್ ರೀತಿಯಲ್ಲಿ ನೀಡಬೇಕು. ಭರತ ವರ್ಷದ (ಸಿಂಧು, ಗಂಗಾ, ಯಮುನಾ, ಅದೃಶ್ಯ ಸರಸ್ವತಿ, ನರ್ಮದಾ, ಗೋದಾವರಿ ಮತ್ತು ಕಾವೇರಿ) ಏಳು ಪವಿತ್ರ ನದಿಗಳಲ್ಲಿ ಒಂದಾದ ಕಾವೇರಿ, ದಕ್ಷಿಣ ಭಾರತದ ಎಲ್ಲಾ ಜೀವರಾಶಿಗಳಿಗೆ ಜೀವನಾಡಿ ಮತ್ತು ನೀರಿನ ಮೂಲವಾಗಿದೆ. ಅದರ ಶಾಶ್ವತ ಜಲಮೂಲಗಳನ್ನು ರಕ್ಷಿಸಲು, ಆಧ್ಯಾತ್ಮಿಕ ಪಾವಿತ್ರ್ಯವನ್ನು ಕಾಪಾಡಿಕೊಳ್ಳಲು ಮತ್ತು ಜೀವವೈವಿಧ್ಯತೆಯನ್ನು ಸಂರಕ್ಷಿಸಲು ಸರಕಾರಗಳು ಕಾವೇರಿ ನದಿಯನ್ನು ಕಾನೂನುಬದ್ಧ ವ್ಯಕ್ತಿಯ ಸ್ಥಾನಮಾನದೊಂದಿಗೆ ಜೀವಂತ ಅಸ್ತಿತ್ವವೆಂದು ಘೋಷಿಸಬೇಕು. ಉದಾಹರಣೆಗೆ ನ್ಯೂಜಿಲೆಂಡ್‌ನ ಮಾವೋರಿ ಆದಿಮಸಂಜಾತ ಬುಡಕಟ್ಟು ಜನಾಂಗದವರಿಗೆ ಮಹತ್ವದ ನದಿಯಾದ “ವಂಗನುಯಿ” ನದಿಗೆ 2017 ರಲ್ಲಿ ಕಾನೂನುಬದ್ಧ ವ್ಯಕ್ತಿತ್ವ ನೀಡಲಾಯಿತು.
ಕಾವೇರಿ ನದಿಯು ಕೊಡವಲ್ಯಾಂಡ್‌ನ ಪಶ್ಚಿಮಘಟ್ಟಗಳಲ್ಲಿರುವ ಬ್ರಹ್ಮಗಿರಿ ಶ್ರೇಣಿಯ ಪರ್ವತ ಪ್ರದೇಶದಿಂದ ಒಂದು ಚಿಲುಮೆಯಾಗಿ ಹುಟ್ಟುತ್ತದೆ. ಇದು ಪೂರ್ವಾಭಿಮುಖವಾಗಿ ಹರಿಯುತ್ತದೆ ಮತ್ತು ತಮಿಳುನಾಡಿನ ಪೂಂಪುಹಾರ್‌ನಲ್ಲಿ ಬಂಗಾಳಕೊಲ್ಲಿ ಸಾಗರದೊಂದಿಗೆ ಸಂಗಮವಾಗುತ್ತದೆ. ಕಾವೇರಿ ನೀರಿನ ವಾರ್ಷಿಕ ಇಳುವರಿ 740 ಟಿಎಂಸಿ (ತೌಸಂಡ್ ಮಿಲಿಯನ್ ಕ್ಯೂಬಿಕ್ ಫೀಟ್) ಅಡಿ, ಅದರಲ್ಲಿ 200 ಟಿಎಂಸಿ ಕೊಡವಲ್ಯಾಂಡ್‌ನ ಕಾನೂನುಬದ್ಧ ಉತ್ಪತ್ತಿ. ಹೆಲ್ಸಿಂಕಿ ಕಾನೂನು (1966) ಪ್ರಕಾರ, ಉತ್ಪಾದಕ ಪ್ರದೇಶವು ಅದರ ಹಕ್ಕಿನ ಪಾಲನ್ನು ಪಡೆಯುತ್ತದೆ. ಆದ್ದರಿಂದ, ಕೊಡವಲ್ಯಾಂಡ್‌ಗೆ ಕಾವೇರಿ ನೀರಿನ ತನ್ನ ಪಾಲನ್ನು ನೀಡಬೇಕು ಎಂದು ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. *ಸಿಎನ್‌ಸಿ ಜಾಗೃತಿ* ನಮ್ಮ ದೈವಿಕ ತಾಯಿ, ಜೀವಸೆಲೆ ನದಿ ಕಾವೇರಿಗೆ ”ಕಾನೂನುಬದ್ಧ ವ್ಯಕ್ತಿ ಸ್ಥಾನಮಾನ” ನೀಡುವ ಕುರಿತಾಗಿ ಜಗತ್ತಿನ ಧರ್ಮ ಪ್ರಜ್ಞೆಯನ್ನು ಜಾಗೃತಿಗೊಳಿಸುವ ಸಲುವಾಗಿ ಸಿಎನ್‌ಸಿ 2018 ರಲ್ಲಿ ತಲಕಾವೇರಿ (ಕಾವೇರಿ ನದಿಯ ಜನ್ಮಸ್ಥಳ/ಮೂಲ) ದಿಂದ ಪೂಂಪುಹಾರ್ (ಕಾವೇರಿ ನದಿ ಬಂಗಾಳಕೊಲ್ಲಿಯೊಂದಿಗೆ ಸಂಗಮಿಸುವ ಸ್ಥಳ) ವರೆಗೆ ಆಧ್ಯಾತ್ಮಿಕ ಯಾತ್ರೆಯನ್ನು ಕೈಗೊಂಡಿತ್ತು ಎಂದು ಗಮನ ಸೆಳೆದಿದ್ದಾರೆ. ಕೊಡವ ಸಮುದಾಯದ ಹಕ್ಕುಗಳು ಮತ್ತು ಹಿತಾಸಕ್ತಿಗಳಿಗಾಗಿ ಸಿಎನ್‌ಸಿ ಸಂಘಟನೆ ನಿರಂತರವಾಗಿ ಶ್ರಮಿಸುತ್ತಿದೆ. ಕೊಡವರ ವಿಶಿಷ್ಟ ಸಾಂಸ್ಕೃತಿಕ, ಆಧ್ಯಾತ್ಮಿಕ ಮತ್ತು ಜನಾಂಗೀಯ ಪರಂಪರೆಯನ್ನು ಉಳಿಸಿ ಬೆಳೆಸುವ ಸಲುವಾಗಿ ಶಾಂತಿಯುತ ಹೋರಾಟಗಳನ್ನು ನಡೆಸುತ್ತಾ ಬರುತ್ತಿದೆ. ಕಾವೇರಿ ನದಿಯೊಂದಿಗೆ ಆಳವಾಗಿ ಬೇರೂರಿರುವ ಕೊಡವ ಸಮುದಾಯದ ಸಂಪರ್ಕವು ಅವರ ಆಚರಣೆಗಳು, ಜಾನಪದ ಮತ್ತು ಆಧ್ಯಾತ್ಮಿಕ ಜೀವನದ ಅಡಿಪಾಯವನ್ನು ರೂಪಿಸುತ್ತದೆ ಎಂದು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ರಾಜ್ಯ ಮಟ್ಟದ ಸ್ಪರ್ಧೆ : ಚಿನ್ನ ಮತ್ತು ಬೆಳ್ಳಿ ಗೆದ್ದ ಕೂರ್ಗ್ ಟೆಕ್ವಾಂಡೊ ತರಬೇತಿ ಕೇಂದ್ರದ ವಿದ್ಯಾರ್ಥಿಗಳು*
Next Article *ತಲಕಾವೇರಿಯಲ್ಲಿ ಶ್ರೀ ಕಾವೇರಿ ಮಾತೆಯ ಪುರಾಣ ಚಿತ್ರಕಥೆ ಪುಸ್ತಕ ಮತ್ತು ಚಿತ್ರಪಟ ಲೋಕಾರ್ಪಣೆ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.