
ನಾಪೋಕ್ಲು ಅ.18 NEWS DESK : ಕೂರ್ಗ್ ಹೋಟೇಲ್, ರೆಸಾರ್ಟ್ ಅಸೋಸಿಯೇಷನ್ ವತಿಯಿಂದ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛ ಕೊಡಗು – ಸುಂದರ ಕೊಡಗು ಹೆಸರಿನ ಸ್ವಚ್ಛತಾ ಅಭಿಯಾನಕ್ಕೆ ನಾಪೋಕ್ಲು ಪಟ್ಟಣದಲ್ಲಿ ಉತ್ತಮ ಸ್ಪಂದನೆ ದೊರೆಯಿತು. ಗ್ರಾಮ ಪಂಚಾಯಿತಿ ಹಾಗೂ ವರ್ತಕರ ಸಂಘ, ಸಹಕಾರ ಮಹಿಳಾ ಸಮಾಜದ ವತಿಯಿಂದ ಸ್ವಚ್ಚತಾ ಆಂದೋಲನ ಕೈಗೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವನಜಾಕ್ಷಿ, ವರ್ತಕರ ಸಂಘದ ಅಧ್ಯಕ್ಷ ಮಾಚೆಟ್ಟಿರ ಕುಸು ಕುಶಾಲಪ್ಪ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಚೊಂದಕ್ಕಿ, ಸಹಕಾರ ಮಹಿಳಾ ಸಮಾಜದ ಅಧ್ಯಕ್ಷ ಕುಚ್ಚೇಟಿರ ರೇಷ್ಮಾ ಉತ್ತಪ್ಪ, ಲಯನ್ ಮಾಜಿ ಅಧ್ಯಕ್ಷ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ, ಪಂಚಾಯತಿ ಸದಸ್ಯರು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ.









