Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಯುವ ಜನೋತ್ಸವ : ಜಾನಪದ ಸಂಸ್ಕೃತಿಯತ್ತ ಕ್ಷೀಣಿಸುತ್ತಿರುವ ಯುವ ಸಮೂಹದ ಒಲವು : ವಿ.ಟಿ.ವಿಸ್ಮಯಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಯುವ ಜನೋತ್ಸವ : ಜಾನಪದ ಸಂಸ್ಕೃತಿಯತ್ತ ಕ್ಷೀಣಿಸುತ್ತಿರುವ ಯುವ ಸಮೂಹದ ಒಲವು : ವಿ.ಟಿ.ವಿಸ್ಮಯಿ*

ಅಕ್ಟೋಬರ್ 16, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.16 NEWS DESK : ಅಭಿವೃದ್ಧಿ ಹೊಂದುತ್ತಿರುವ ದೇಶವಾದ ಭಾರತದಲ್ಲಿಂದು, ಅತ್ಯಂತ ಸಂಪದ್ಭರಿತವಾದ ಜಾನಪದ ಕಲಾ ಸಂಸ್ಕೃತಿಯತ್ತ ಯುವ ಪೀಳಿಗೆಯ ಆಸಕ್ತಿ ಕ್ಷೀಣಿಸುತ್ತಿರುವುದು ಕಂಡು ಬರುತ್ತಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಕಳವಳ ವ್ಯಕ್ತಪಡಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಮತ್ತು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ಆಯೋಜಿತ ‘ಜಿಲ್ಲಾ ಮಟ್ಟದ ಯುವ ಜನೋತ್ಸವ’ವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಇಂದಿನ ಯುವ ಶಕ್ತಿ ಪ್ರಸ್ತುತ ತಂತ್ರಜ್ಞಾನ ಕ್ಷೇತ್ರದತ್ತ ಹೆಚ್ಚಿನ ಆಸಕ್ತಿಯನ್ನು ತೋರಿ ಅದರತ್ತ ಮಾರುಹೋಗುತ್ತಿದೆ. ಮೊದಲು ನಾವು ನಾಡಿನೆಲ್ಲೆಡೆ ಇರುವ ವೈವಿಧ್ಯಮಯವಾದ ಜಾನಪದ ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆಸಕ್ತರಾಗಬೇಕು. ಇಂದಿನ ಯುವ ಸಮೂಹ ತಮ್ಮ ಬದುಕಿಗೆ ಒಳಿತಾಗುವಂತಹ ವಿದ್ಯಾಭ್ಯಾಸ ಪಡೆಯುವಂತಾಗಬೇಕೇ ಹೊರತು, ಕೇವಲ ಸರ್ಟಿಫಿಕೇಟ್‍ಗಾಗಿ ಓದುವಂತಾಗಬಾರದು ಎಂದು ವಿಸ್ಮಯಿ ಸಲಹೆ ನೀಡಿದರು. ರಾಜ್ಯದಾದ್ಯಂತ ಏಕಕಾಲದಲ್ಲಿ ಯುವ ಜನೋತ್ಸವ ನಡೆಸಲು ಸರ್ಕಾರದ ಸುತ್ತೋಲೆ ಇರುವುದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಇದ್ದರೂ, ನಡೆಸಲೇಬೇಕಾಗಿದೆ. ಮಕ್ಕಳು ತಮ್ಮ ಪ್ರತಿಭೆಯನ್ನು ಯುವ ಜನೋತ್ಸವದಲ್ಲಿ ಪ್ರದರ್ಶಿಸಿ ಜಿಲ್ಲೆಯ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಪಸರಿಸುವಂತಾಗಲಿ ಎಂದು ಹಾರೈಸಿದರು. ಮೈ ಭಾರತ್ ಕೊಡಗು ಯುವ ಅಧಿಕಾರಿ ಕೆಟಿಕೆ ಉಲ್ಲಾಸ್ ಮಾತನಾಡಿ, ಯುವ ಶಕ್ತಿಯಲ್ಲಿ ಗುರಿ ಇರಬೇಕು. ಅದಕ್ಕೆ ತಕ್ಕಂತೆ ಕಾರ್ಯನಿರ್ವಹಿಸಿ, ಬದುಕಿನಲ್ಲಿ ತಮ್ಮ ಕನಸನ್ನು ನನಸು ಮಾಡಿಕೊಳ್ಳುವಂತಾಗಬೇಕು. ದೇಶ ನನಗೇನು ನೀಡಿದೆ ಎನ್ನುವುದಕ್ಕಿಂತ ನಾನು ದೇಶಕ್ಕಾಗಿ ಏನು ಮಾಡಿದ್ದೇನೆ ಎನ್ನುವುದು ಮುಖ್ಯ ಎಂದರು. ಸುಭದ್ರ ರಾಷ್ಟ್ರ ನಿರ್ಮಾಣದಲ್ಲಿ ಯುವ ಸಮೂಹ ತನ್ನನ್ನು ಹೆಚ್ಚಾಗಿ ತೊಡಗಿಸಿಕೊಳ್ಳುವುದಲ್ಲದೆ, ಮಾದಕ ಪದಾರ್ಥಗಳ ಸೇವನೆಗೆ ಮಾರುಹೋಗದೆ ಬದುಕಿನಲ್ಲಿ ಉತ್ತಮ ಹೆಸರನ್ನುಗಳಿಸಿ ಕೀರ್ತಿ ಗಳಿಸುವಂತಾಗಲಿ ಎಂದು ಆಶಿಸಿದರು. ಮಡಿಕೇರಿ ನಗರಸಭಾ ಅಧ್ಯಕ್ಷೆ ಪಿ.ಕಲಾವತಿ ಮಾತನಾಡಿ, ಯುವ ಜನೋತ್ಸವದಲ್ಲಿ ಯುವ ಸಮೂಹ ಪಾಲ್ಗೊಳ್ಳುವುದರ ಮೂಲಕ ಪ್ರತಿಭೆಯನ್ನು ಹೊರಸೂಸಿ, ರಾಷ್ಟ್ರಮಟ್ಟದಲ್ಲಿ ಕೀರ್ತಿ ತರುವಂತಾಗಲಿ ಎಂದರು. ಯುವ ಒಕ್ಕೂಟದ ಜಿಲ್ಲಾಧ್ಯಕ್ಷ ಪಿ.ಪಿ.ಸುಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಇಲಾಖೆಯ ಸುತ್ತೋಲೆಯಂತೆ ನಿಗದಿತ ದಿನಾಂಕದಂದು ಯುವ ಜನೋತ್ಸವ ನಡೆಸಲಾಗಿದೆ. ಭಾಗವಹಿಸುವ ತಂಡಗಳ ಸದಸ್ಯರಿಗೆ 14 ರಿಂದ 29 ವರ್ಷದೊಳಗಿನ ವಯೋಮಿತಿ ನಿಗದಿಗೊಳಿಸುವ ಮೂಲಕ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗಿದೆ. ಯುವಜನೋತ್ಸವದಲ್ಲಿ ಜಿಲ್ಲೆಯ ಕೆಲವೊಂದು ಆಯ್ದ ಸಂಘ-ಸಂಸ್ಥೆಗಳು ಸ್ಪರ್ಧೆಯಲ್ಲಿ ಭಾಗವಹಿಸಿರುವುದಾಗಿ ತಿಳಿಸಿದರು. ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನಿರ್ದೇಶಕಿ ಮುಕ್ಕಾಟಿರ ಸ್ಮಿತಾ ಸುಬ್ಬಯ್ಯ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ನಿರ್ಮಲಾ, ಉಪನ್ಯಾಸಕರಾದ ಚಿದಾನಂದ, ಡಾ.ವೇಣುಗೋಪಾಲ್, ಉದಯಕುಮಾರ್, ಕೆಂಬಡತಂಡ ಮುದ್ದಪ್ಪ, ಕಂಬೀರಂಡ ರಾಖಿ ಪೂವಣ್ಣ, ಜಿಲ್ಲಾ ಯುವ ಒಕ್ಕೂಟದ ಖಜಾಂಚಿ ಕುಂಜಿಲಂಡ ಮಧು ಮೋಹನ್, ಸ್ಥಳೀಯ ಕಾಲೇಜು ನಿವೃತ್ತ ಪ್ರಾಂಶುಪಾಲರಾದ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಚಿತ್ರಾ ಉಪಸ್ಥಿತರಿದ್ದರು. ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥಿಸಿದರು, ಜಿಲ್ಲಾ ಯುವ ಒಕ್ಕೂಟದ ಕಾರ್ಯಾಧ್ಯಕ್ಷ ಕೂಡಂಡ ಸಾಬ ಸುಬ್ರಮಣಿ ನಿರೂಪಿಸಿದರು. ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷ ಬಾಳಾಡಿ ದಿಲೀಪ್ ವಂದಿಸಿದರು. :: ಬಹುಮಾನ ವಿತರಣೆ :: ಸಮಾರಂಭದಲ್ಲಿ ವಿಜ್ಞಾನ ಮೇಳ, ಜಾನಪದ ಗೀತೆ, ಜಾನಪದ ನೃತ್ಯ, ಕಥೆ ಬರೆಯುವುದು, ಕವಿತೆ ಬರೆಯುವುದು, ಚಿತ್ರಕಲೆ, ಭಾಷಣ (ಘೋಷಣೆ) ಸ್ಪರ್ಧೆ ನಡೆದು, ವಿಜೇತರಿಗೆ ಪಾರಿತೋಷಕದೊಂದಿಗೆ ಪ್ರಮಾಣ ಪತ್ರವನ್ನು ನೀಡಲಾಯಿತು.ಪ್ರಥಮ ಸ್ಥಾನ ಪಡೆದ ಜಿಲ್ಲೆಯ ತಂಡಗಳು ನವೆಂಬರ್ ತಿಂಗಳಿನಲ್ಲಿ ಯಾದಗಿರಿ ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಯುವ ಜನೋತ್ಸವ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.