
ನಾಪೋಕ್ಲು ಅ.17 NEWS DESK : ನರಿಯಂದಡ ಗ್ರಾಮದ ತೋಟಗಳಲ್ಲಿ ಹುಲಿಯ ಹೆಜ್ಜೆ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ. ನರಿಯಂದಡ ಗ್ರಾಮ ಪಂಚಾಯಿತಿಗೆ ಒಳಪಟ್ಟ ನರಿಯಂದಡ ಗ್ರಾಮದ ಪೊಕ್ಕೋಳಂಡ್ರ ಮಕ್ಕಿಮನೆ, ಮಂಞಪುರ ಕುಟುಂಬಸ್ಥರ ತೋಟಗಳಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮ ವ್ಯಾಪ್ತಿಯಲ್ಲಿ ಹುಲಿ ಚಲನ ವಲನ ಕಂಡುಬಂದಲ್ಲಿ ತಕ್ಷಣವೆ ಅರಣ್ಯ ಇಲಾಖೆಯನ್ನು 8277124444 ಸಂಪರ್ಕಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸೂಚಿಸಿದ್ದಾರೆ.
ವರದಿ : ದುಗ್ಗಳ ಸದಾನಂದ.









