
ಮಡಿಕೇರಿ ಅ.17 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ 16ನೇ ಆಡಳಿತ ಮಂಡಳಿ ಸಭೆ ವಿಕಾಸಸೌಧದಲ್ಲಿ ನಡೆಯಿತು. ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರು ಪಾಲ್ಗೊಂಡು ಸಂಸ್ಥೆಯ ಅಭಿವೃದ್ಧಿ ಬಗ್ಗೆ ಚರ್ಚಿಸಿದರು. ನಂತರ ಕೊಡಗು ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಆರ್ಥೋಪೆಡಿಕ್ಸ್ ವಿಭಾಗದಲ್ಲಿ ರೋಬೊಟಿಕ್ ಸರ್ಜರಿ ಪ್ರಾರಂಭಿಸಲು ಉಪಕರಣ ಖರೀದಿ, ಸ್ತನ ಕ್ಯಾನ್ಸರ್ ತಡೆಯುವ ನಿಟ್ಟಿನಲ್ಲಿ ಪರೀಕ್ಷೆ ನಡೆಸಲು ಮ್ಯಾಮೋಗ್ರಾಪಿ ಖರೀದಿ ಖಾಲಿ ಇರುವ ವೈದ್ಯರ ಹುದ್ದೆಯನ್ನು ನೇರ ನೇಮಕಾತಿ ಮುಖೇನ ಭರ್ತಿ ಮಾಡಿಕೊಳ್ಳಲು ತೀರ್ಮಾನ ಕೈಗೊಳ್ಳಲಾಯಿತು. ಸಂಸ್ಥೆಯ ಅಭಿವೃದ್ಧಿ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ಕಟ್ಟಡ ಕಾಮಗಾರಿ ಪ್ರಗತಿ ಪರಿಶೀಲಿಸಿ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ಇದೇ ಸಂದರ್ಭ ಸೂಚನೆ ನೀಡಲಾಯಿತು. ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಮೊಹಮ್ಮದ್ ಮೊಹಿಸಿನ್, ಆರ್ಥಿಕ ಇಲಾಖೆಯ ಕಾರ್ಯದರ್ಶಿ ಡಾ. ವಿಶಾಲ್ ಆರ್., ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಡಾ.ಸುಜಾತ ರಾಥೋಡ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯ ನಿರ್ದೇಶಕರು ಹಾಗೂ ಡೀನ್ ಡಾ.ಲೋಕೇಶ್ ಎ.ಜೆ, ವೈದ್ಯಕೀಯ ಅಧೀಕ್ಷಕರಾದ ಡಾ.ಸೋಮಶೇಖರ್, ಆಕುಕ ಕಾರ್ಯಪಾಲಕ ಅಭಿಯಂತರರಾದ ಜಗದೀಶ್ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.









