
ಸಿದ್ದಾಪುರ ಅ.17 NEWS DESK : ಗುಹ್ಯ ಗ್ರಾಮದ ಅಗಸ್ತ್ಯೇಶ್ವರ ದೇವಾಲಯದಲ್ಲಿ ಇಂದಿನಿಂದ (ಅ.17) ಐದು ದಿನಗಳ ಜಾತ್ರೆಯು ಶ್ರದ್ಧಾಭಕ್ತಿಯಿಂದ ನಡೆಯಲಿದೆ. ತುಲಾಮಾಸ ದಿವಸ ಏಕಾದಶಿ ಸಮಯದಲ್ಲಿ ಶ್ರೀ ಅಗಸ್ತ್ಯೇಶ್ವರ ಮಹಾದೇವರ ಪ್ರಾರ್ಥನೆಯೊಂದಿಗೆ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಸಂಜೆ 6 ಗಂಟೆಗೆ ತಂತ್ರಿಗಳು, ತಕ್ಕರು, ಆಡಳಿತ ಮಂಡಳಿಯವರು ಹಾಗೂ ಗ್ರಾಮಸ್ಥರು ದೇವರ ಕೊಡಿ ಮರ ನಿಲ್ಲಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಸತ್ಯನಾರಾಯಣ ಪೂಜೆ, ರಂಗಪೂಜೆ, ಮಹಾಪೂಜೆ, ರುದ್ರಾಭಿಷೇಕ, ಕುಂಕುಮಾರ್ಚನೆ, ಕ್ಷೀರಾಭಿಷೇಕ ಹಾಗೂ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಜಾತ್ರೆಯ ಅಂಗವಾಗಿ ಪಾಲ್ಗೊಂಡಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಸಲಾಗುವುದು ಎಂದು ಆಡಳಿತ ಮಂಡಳಿ ತಿಳಿಸಿದೆ. ಗುಹ್ಯ ಅಗಸ್ತ್ಯೇಶ್ವರ ದೇವಸ್ಥಾನವು ಕೊಡಗಿನಲ್ಲಿ ಮೊದಲು ಪ್ರತಿಷ್ಠಾಪಿಸಲ್ಪಟ್ಟ ದೇವಸ್ಥಾನವಾಗಿದೆ. ಕೊಡಗಿನಲ್ಲಿ ಕಾವೇರಿ ನದಿ ಪಾತ್ರದಲ್ಲಿರುವ ಮೂರನೆಯ ದೇವಸ್ಥಾನವಾಗಿದೆ. ಮಹಾವಿಷ್ಣುಗೆ ದರ್ಶನ ನೀಡಿ ಈ ಕ್ಷೇತ್ರದಲ್ಲಿ ನೆಲೆನಿಂತ ಮಹಾದೇವರ ಅಗಸ್ತ ಮುನಿಯಿಂದ ಸ್ಥಾಪಿಸಲ್ಪಟ ಈಶ್ವರ ದೇವಾಲ ಮುಂದೆ ಅಗಸ್ತ್ಯೇಶ್ವರ ಎಂದೇ ಪ್ರಸಿದ್ಧಿ ಪಡೆದಿದೆ.









