Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪರಿಸರವನ್ನು ಸ್ವಚ್ಛವಾಗಿಡುವುದು ಪ್ರತಿಯೊಬ್ಬರ ಕರ್ತವ್ಯ : ಎಂ.ಕೆ.ದೇಚಮ್ಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪರಿಸರವನ್ನು ಸ್ವಚ್ಛವಾಗಿಡುವುದು ಪ್ರತಿಯೊಬ್ಬರ ಕರ್ತವ್ಯ : ಎಂ.ಕೆ.ದೇಚಮ್ಮ*

ಅಕ್ಟೋಬರ್ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಅ.17 NEWS DESK :  ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ವಿರಾಜಪೇಟೆ ಪುರಸಭೆಯ ಅಧ್ಯಕ್ಷರಾದ ಎಂ.ಕೆ.ದೇಚಮ್ಮ ಕಾಳಪ್ಪ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಹೋಟೆಲ್ ಹಾಗೂ ರೆಸಾರ್ಟ್ ಅಸೋಸಿಯೇಷನ್ ವತಿಯಿಂದ ಸ್ವಚ್ಛ ಕೊಡಗು ಸುಂದರ ಕೊಡಗು ಎಂಬ ಪರಿಕಲ್ಪನೆಯಲ್ಲಿ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕ, ವಿರಾಜಪೇಟೆ ಪುರಸಭೆ ಹಾಗೂ ವಿರಾಜಪೇಟೆ ತಾಲೋಕು, ನಗರ ವರ್ತಕರ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛತಾ ಅಭಿಯಾನ  ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸ್ವಚ್ಛತೆ ಎಂಬುದು ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಬೇಕು. ಈಗಾಗಲೇ ವಿರಾಜಪೇಟೆ ಪುರಸಭೆ ವತಿಯಿಂದ ಸ್ವಚ್ಛ ನಗರಕ್ಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಆ ನಿಟ್ಟಿನಲ್ಲಿ ಸರ್ವರ ಸಹಕಾರ ಅಗತ್ಯ ಎಂದರು. ಸ್ವಚ್ಛತಾ ಜಾಗೃತಿಯಲ್ಲಿ ಎನ್‌ಎಸ್‌ಎಸ್ ವಿದ್ಯಾರ್ಥಿಗಳ ಪಾತ್ರ ಅಪಾರವಾಗಿದೆ ಎಂದರು. ವಿರಾಜಪೇಟೆ ನಗರ ವರ್ತಕರ ಸಂಘದ ಅಧ್ಯಕ್ಷರಾದ ಪಿ.ಎ.ಮಂಜುನಾಥ್ ಮಾತನಾಡಿ, ಸ್ವಚ್ಛ ಪರಿಸರ ಸುಂದರ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರು ಪಣ ತೊಡಬೇಕು. ನಮ್ಮ ಮನೆಗಳಿಂದಲೇ ಸ್ವಚ್ಛತೆಯು ಆರಂಭವಾಗಬೇಕು. ಆಗ ಮಾತ್ರ ನಮ್ಮ ಪರಿಸರವನ್ನು ಕಾಪಾಡಿಕೊಳ್ಳಲು ಸಾಧ್ಯವಿದೆ ಎಂದು ಹೇಳಿದರು. ವಿರಾಜಪೇಟೆ ಸಂತ ಅನ್ನಮ್ಮ ಚರ್ಚ್ ನ ಪ್ರಧಾನ ಗುರುಗಳು ಹಾಗೂ ವ್ಯವಸ್ಥಾಪಕರಾದ ರೆ. ಫಾ. ಜೇಮ್ಸ್ ಡೊಮಿನಿಕ್ ಮಾತನಾಡಿ, ಪರಿಸರದ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಮಾತ್ರವಲ್ಲದೆ ಮುಂದಿನ ಪೀಳಿಗೆಗೆ ನಾವು ಪರಿಸರವನ್ನು ಬಳುವಳಿಯಾಗಿ ನೀಡಬೇಕಾಗಿದೆ. ಸಾಮಾಜಿಕ ಪ್ರಜ್ಞೆ ಎಂಬುದು ಪ್ರತಿಯೊಬ್ಬರಲ್ಲೂ ಮೂಡಬೇಕು. ಅದು ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣದ ಕಲ್ಪನೆ ಸಾಕಾರವಾಗುತ್ತದೆ ಎಂದರು. ಈ ಸಂದರ್ಭದಲ್ಲಿ ವಿರಾಜಪೇಟೆಯ ಪುರಸಭಾ ಸದಸ್ಯರಾದ ಡಿ.ಪಿ.ರಾಜೇಶ್ ಪದ್ಮನಾಭ, ಮಹಮದ್ ರಾಫಿ, ಮತೀನ್, ವಿರಾಜಪೇಟೆ ಸಂತ ಅನ್ನಮ್ಮ ಚರ್ಚ್ ನ ಸಹಾಯಕ ಗುರುಗಳಾದ ಫಾ. ಅಭಿಲಾಷ್, ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ಅಧಿಕಾರಿ ಬಿ. ಎನ್. ಶಾಂತಿಭೂಷಣ್, ವಿರಾಜಪೇಟೆ ವರ್ತಕರ ಸಂಘದ ಅಧ್ಯಕ್ಷ ಪಿ. ಎ. ಮಂಜುನಾಥ್, ಸಮಾಜ ಸೇವಕರಾದ ಯೋಗೇಶ್ ನಾಯ್ಡು, ಉಪನ್ಯಾಸಕರುಗಳಾದ ಜೇಮ್ಸ್ ಅಂಟೋನಿ, ವಿಲೀನ ಗೋನ್ಸಾಲ್ವೇಸ್, ಶಶಿಕಲಾ ಹಾಗೂ ಆದಿತ್ಯ, ವಿರಾಜಪೇಟೆ ವರ್ತಕರ ಸಂಘದ ಪದಾಧಿಕಾರಿಗಳು, ಸ್ವಯಂ ಸೇವಾ ವಿದ್ಯಾರ್ಥಿಗಳು, ವಿರಾಜಪೇಟೆ ವರ್ತಕರ ಸಂಘದ ಪದಾಧಿಕಾರಿಗಳು, ಸೆಂಟ್ ಆನ್ಸ್ ಪದವಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ ಹಾಜರಿದ್ದರು. ನಂತರ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಕಾಲೇಜಿನ ಮುಂಭಾಗದ ಮುಖ್ಯ ರಸ್ತೆಯಿಂದ ಚಿಕ್ಕಪೇಟೆ -ಬೋಯಿಕೇರಿ ಹಾಗೂ ಕೆದಮುಳ್ಳೂರು ರಸ್ತೆಯವರೆಗೂ ಎನ್ ಎಸ್ ಎಸ್ ಘಟಕದ ವಿದ್ಯಾರ್ಥಿಗಳು ಸ್ವಚ್ಛತೆಯನ್ನು ಮಾಡಿದರು. ರಸ್ತೆಯ ಎರಡು ಭಾಗಗಳಲ್ಲಿ ಅಲ್ಲಲ್ಲಿ ಬಿದ್ದಿದ್ದ ಪ್ಲಾಸ್ಟಿಕ್, ಪೇಪರ್, ಬಾಟಲಿಗಳನ್ನು ಹೆಕ್ಕಿ ವಿರಾಜಪೇಟೆ ಪುರಸಭೆಯ ತ್ಯಾಜ್ಯ ವಿಲೇವಾರಿ ವಾಹನಕ್ಕೆ ಹಾಕಿದರು. ಅಲ್ಲದೆ ಸಾರ್ವಜನಿಕರಿಗೆ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.