Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ : 95 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ : ಶಾಸಕ ಡಾ.ಮಂತರ್ ಗೌಡ ಪ್ರಯತ್ನದ ಫಲ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ : 95 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ : ಶಾಸಕ ಡಾ.ಮಂತರ್ ಗೌಡ ಪ್ರಯತ್ನದ ಫಲ*

ಅಕ್ಟೋಬರ್ 18, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.18 : ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಮರುದಿನ ಹಾರಂಗಿ ಜಲಾಶಯದ ಕ್ರೆಸ್ಟ್ಗೇಟ್ ಬಳಿ ಇರುವ ತಾಯಿ ಕಾವೇರಿ ಮಾತೆ ಪ್ರತಿಮೆಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಶನಿವಾರ ವಿಶೇಷ ಪೂಜೆ ಸಲ್ಲಿಸಿದರು. ನಂತರ ಹಾರಂಗಿ ಜಲಾಶಯದಲ್ಲಿ ಬಾಗಿನ ಅರ್ಪಿಸಿದರು. ಈ ಬಾರಿ ಮೇ 3ನೇ ವಾರದಿಂದಲೇ ಮಳೆ ಆರಂಭವಾಗಿದ್ದು, ಹಾರಂಗಿ ಜಲಾಶಯ ಇಂದಿಗೂ ಸಹ ಭರ್ತಿಯಾಗಿರುವ ಹಿನ್ನೆಲೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಬಳಿಕ ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶದ ರೈತರಿಗೆ ಶಾಲೂ ಹೊದಿಸಿ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಬಳಿಕ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಪ್ರತೀ ವರ್ಷದಂತೆ ಈ ವರ್ಷವೂ ಸಹ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ನಂತರ ಹಾರಂಗಿ ಜಲಾಶಯದ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ತೀರ್ಥ ಪ್ರಸಾದ ವಿತರಿಸಿಕೊಂಡು ಬರಲಾಗುತ್ತಿದೆ. ಆ ನಿಟ್ಟಿನಲ್ಲಿ ಹಾರಂಗಿ ಜಲಾಶಯದ ಅಚ್ಚುಕಟ್ಟು ಪ್ರದೇಶದ ನೀರು ಬಳಕೆದಾರರ ಸಂಘದ ಅಧ್ಯಕ್ಷರು, ನಿರ್ದೇಶಕರು, ಕೃಷಿಕರು ಸೇರಿದಂತೆ ಹಲವರನ್ನು ಆಹ್ವಾನಿಸಿ ವಿಶೇಷ ಪೂಜೆ ಸಲ್ಲಿಸಿಕೊಂಡು ಬರಲಾಗುತ್ತಿದೆ ಎಂದರು. ಈ ಬಾರಿ ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಹಾರಂಗಿ ಜಲಾಶಯ ಹಿನ್ನೀರಿನ ಪ್ರದೇಶದಲ್ಲಿ ಶೀತದಿಂದ ಕೂಡಿ ಬೆಳೆಗಳು ಸಹ ಹಾನಿಯಾಗಿದೆ. ಆದರೂ ಸಹ ಜಿಲ್ಲೆಗೆ ಒಳ್ಳೆಯ ಮಳೆಯಾಗಿ ಹಾರಂಗಿ ಅಚ್ಚುಕಟ್ಟು ಪ್ರದೇಶದ ಕೃಷಿಕರು ಸೇರಿದಂತೆ ಎಲ್ಲರಿಗೂ ಅನುಕೂಲವಾಗಿದೆ ಎಂದು ಹೇಳಿದರು. ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ ಸುಮಾರು 95 ಕೋಟಿಯಷ್ಟು ವಿವಿಧ ಅಭಿವೃದ್ಧಿ ಕಾಮಗಾರಿಗಳು ಡಿಸೆಂಬರ್ ಅಥವಾ ಜನವರಿಯಲ್ಲಿ ಚಾಲನೆಗೊಳ್ಳಲಿದೆ ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ‘50 ಕೋಟಿ ರೂ. ವೆಚ್ಚದಲ್ಲಿ 18 ವಿತರಣಾ ನಾಲೆಗಳ ಆಧುನೀಕರಣ ಕಾಮಗಾರಿ ಕೈಗೊಳ್ಳಲಾಗುವುದು. ಹಾಗೆಯೇ 36.50 ಕೋಟಿ ರೂ. ವೆಚ್ಚದಲ್ಲಿ ‘ಬ್ರಿಡ್ಜ್’ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು. ಗುಡ್ಡೆಹೊಸೂರಿನಿಂದ ಹುದುಗೂರು ಮಾರ್ಗದ 5 ಕಿ.ಮೀ. ರಸ್ತೆ 5 ಕೋಟಿ ರೂ. ವೆಚ್ಚದಲ್ಲಿ ಹಾಗೆಯೇ ಚಿಕ್ಲಿಹೊಳೆ ರಸ್ತೆ 5 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ವಿವರಿಸಿದರು.’ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಿಂದ ಹಾರಂಗಿ ಜಲಾಶಯ ಕಚೇರಿ ಸುತ್ತಮುತ್ತಲಿನ ರಸ್ತೆಗಳ ಅಭಿವೃದ್ಧಿಗೂ ಮುಂದಾಗಲಾಗಿದೆ ಎಂದು ಶಾಸಕರು ಹೇಳಿದರು. ಹಾರಂಗಿ ಎಡದಂಡೆ ನಾಲೆಯ 6.85 ಕಿ.ಮೀ.ನಿಂದ 14.75 ಕಿ.ಮೀ.ವರೆಗೆ 72 ಕೋಟಿ ರೂ. ಮುಖ್ಯನಾಲೆಯನ್ನು ಆಧುನೀಕರಣ ಕಾಮಗಾರಿಯು ಈಗಾಗಲೇ ಆರಂಭವಾಗಿದೆ ಎಂದು ಹೇಳಿದರು. ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಾಗೂ ಜಲ ಸಂಪನ್ಮೂಲ ಸಚಿವರಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಿದ್ದಾರೆ. ಆ ದಿಸೆಯಲ್ಲಿ ಡಿಸೆಂಬರ್ ವೇಳೆಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಹಾರಂಗಿ ಜಲಾಶಯ ಬಳಿಯ ಸೇತುವೆ ನಿರ್ಮಾಣ, ರಸ್ತೆ ಅಭಿವೃದ್ಧಿ, ಚಿಕ್ಲಿಹೊಳೆ ರಸ್ತೆ ಅಭಿವೃದ್ಧಿಗೆ ಒಟ್ಟಾರೆ 95 ಕೋಟಿ ರೂ.ಗೂ ಹೆಚ್ಚಿನ ಅಭಿವೃದ್ಧಿ ಕಾರ್ಯಕ್ಕೆ ಜನವರಿಯಲ್ಲಿ ಚಾಲನೆ ನೀಡಲಾಗುವುದು ಎಂದು ಹೇಳಿದರು.’ ಹಾರಂಗಿ ಜಲಾಶಯವನ್ನು ಉಳಿಸಬೇಕು. ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು. ಹಾರಂಗಿ ಜಲಾಶಯ ಪಾತ್ರದಲ್ಲಿ ಮಹಶೀರ್ ಮೀನು ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ಸಾವಯವ ಕೃಷಿಗೆ ಒತ್ತು ನೀಡಬೇಕು. ರಾಸಾಯನಿಕಗಳನ್ನು ಮಿಶ್ರಣ ಮಾಡಿ ನದಿಗೆ ಹರಿಸಬಾರದು ಎಂದು ಕೋರಿದರು. ಹಾರಂಗಿ ಜಲಾಶಯ ಅಭಿವೃದ್ಧಿಗೆ ಮಾಜಿ ಮುಖ್ಯಮಂತ್ರಿಗಳಾದ ವಿರೇಂದ್ರ ಪಾಟೀಲ್, ಗುಂಡೂರಾವ್, ಅಂದಿನ ನೀರಾವರಿ ಸಚಿವರಾದ ನಂಜೇಗೌಡರ ಶ್ರಮ ಇದ್ದು, ಹಾರಂಗಿ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಲಾಗುವುದು. ಆ ನಿಟ್ಟಿನಲ್ಲಿ ರೈತರು ಕೈಜೋಡಿಸಬೇಕು ಎಂದರು. ಹಾರಂಗಿ ಜಲಾಶಯ ನದಿ ಪಾತ್ರ ಗರಗಂದೂರು ಮತ್ತಿತರ ಕಡೆಗಳಲ್ಲಿ ಹೂಳು ತೆಗೆಯುವ ಕಾರ್ಯ ಮಾಡಲಾಗುವುದು. ಜೊತೆಗೆ ಗಿಡ ಗಂಟೆಗಳನ್ನು ಕಡಿಯುವ ಕೆಲಸವಾಗಬೇಕು. ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಲಾಗುವುದು ಎಂದು ಡಾ.ಮಂತರ್ ಗೌಡ ಅವರು ತಿಳಿಸಿದರು. ಹಾರಂಗಿ ಜಲಾಶಯದ ನೀರು ಬಳಕೆದಾರರ ಸಂಘದ ಅಧ್ಯಕ್ಷರಾದ ಚೌಡೇಗೌಡ ಅವರು ಮಾತನಾಡಿ ಹಾರಂಗಿ ಜಲಾಶಯ ವ್ಯಾಪ್ತಿಯಲ್ಲಿ 5 ತಾಲ್ಲೂಕುಗಳು ಬರಲಿದ್ದು, ಈ ವ್ಯಾಪ್ತಿಗೆ ಹೆಚ್ಚಿನ ಅನುದಾನ ಒದಗಿಸಿ ಹೂಳು ತೆಗೆಯುವಂತಾಗಬೇಕು ಎಂದು ಕೋರಿದರು. ಹಾರಂಗಿ ಜಲಾಶಯ ಅಧೀಕ್ಷಕ ಎಂಜಿನಿಯರ್ ಸತೀಶ್ ಅವರು ಮಾತನಾಡಿ ಜಲಾಶಯದಿಂದ ಒಟ್ಟು ನೀರಿನ ಸಂಗ್ರಹಣಾ ಸಾಮರ್ಥ್ಯ 8.50 ಟಿಎಂಸಿ ಆಗಿದ್ದು, ಇದರಲ್ಲಿ 8.073 ಟಿಎಂಸಿ ನೀರನ್ನು ಉಪಯೋಗಿಸಬಹುದಾಗಿದೆ. ಹಾರಂಗಿ ಜಲಾಶಯವು ಮಣ್ಣಿನ ಏರಿ, ಕಲ್ಲು ಕಟ್ಟಡ ಹಾಗೂ ಕಾಂಕ್ರೀಟ್ ಕಟ್ಟಡದಿಂದ ಕೂಡಿರುತ್ತದೆ. ಜಲಾಶಯದ ಉದ್ದ 845.82 ಮೀ., ಎತ್ತರ 53 ಮೀ., ಹಾಗೂ ಸಮುದ್ರ ಮಟ್ಟದಿಂದ 2859 ಅಡಿಗಳು ಎತ್ತರದಲ್ಲಿದೆ ಎಂದು ತಿಳಿಸಿದರು. ಕಾರ್ಯಪಾಲಕ ಅಭಿಯಂತರರಾದ ಐ.ಕೆ.ಪುಟ್ಟಸ್ವಾಮಿ ಮಾಹಿತಿ ನೀಡಿ ಹಾರಂಗಿ ಜಲಾಶಯವು ಕೊಡಗು ಜಿಲ್ಲೆಯ ಸೋಮವಾರಪೇಟೆ, ಕುಶಾಲನಗರ, ಹಾಸನ ಜಿಲ್ಲೆಯ ಅರಕಲಗೂಡು, ಮೈಸೂರು ಜಿಲ್ಲೆಯ ಹುಣಸೂರು ಮತ್ತು ಪಿರಿಯಾಪಟ್ಟಣ ತಾಲ್ಲೂಕುಗಳಲ್ಲಿ 1,34,895 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸುವಲ್ಲಿ ಮುಖ್ಯ ಪಾತ್ರ ವಹಿಸಿದೆ. ಇದರಲ್ಲಿ ಎರಡು ಏತ ನೀರಾವರಿ ಒಳಗೊಂಡಿದೆ ಎಂದು ತಿಳಿಸಿದರು. 1984 ರಿಂದ ಕಾವೇರಿ ಉತ್ಸವವನ್ನು ನೆರವೇರಿಸುತ್ತಿದ್ದು, ತಲಕಾವೇರಿಯಿಂದ ಪ್ರತೀ ವರ್ಷವೂ ಪುಣ್ಯ ತೀರ್ಥವನ್ನು ತಂದು ಪೂಜಿಸಿ ಮರುದಿನ ಹಾರಂಗಿ ಜಲಾಶಯ ಬಳಿ ಇರುವ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ ತೀರ್ಥ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರಲಾಗಿದೆ ಎಂದು ಹೇಳಿದರು. ಹಾರಂಗಿ ಜಲಾಶಯದ ಅಚ್ಚುಕಟ್ಟು ಪ್ರದೇಶದ ಎಂಜಿನಿಯರ್‌ಗಳಾದ ಕುಸುಕುಮಾರ್, ಮಂಜುನಾಥ್, ಎಇಇ ರಾಜೇಂದ್ರ ಕುಮಾರ್, ಸಹಾಯಕ ಎಂಜಿನಿಯರ್‌ಗಳಾದ ಸೌಮ್ಯ ರಾಜು, ಸಂದ್ಯಾ, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.