Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಅರ್ಹ ಫಲಾನುಭವಿಗಳು ಯೋಜನೆಗಳಿಂದ ವಂಚಿತರಾಗದಂತೆ ನೋಡಿಕೊಳ್ಳಲು ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಅರ್ಹ ಫಲಾನುಭವಿಗಳು ಯೋಜನೆಗಳಿಂದ ವಂಚಿತರಾಗದಂತೆ ನೋಡಿಕೊಳ್ಳಲು ಸೂಚನೆ*

ಅಕ್ಟೋಬರ್ 20, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಅ.20 NEWS DESK : ವಿರಾಜಪೇಟೆ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ನಡೆಯಿತು. ವಿರಾಜಪೇಟೆಯ ಶಾಸಕರ ಕಛೇರಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಿತಿ ಅಧ್ಯಕ್ಷ ಜಾನ್ಸನ್, ಅರ್ಹ ಫಲಾನುಭವಿಗಳು ಯಾವುದೇ ಕಾರಣಕ್ಕೂ ಯೋಜನೆಗಳಿಂದ ವಂಚಿತರಾಗದಂತೆ ನೋಡಿಕೊಳ್ಳಲು ಸೂಚಿಸಿದರು. ಯೋಜನೆಗಳ ಅನುಷ್ಠಾನವನ್ನು ಶೇ.100ಕ್ಕೆ ಹೆಚ್ಚಿಸಲು ಕ್ರಮ ವಹಿಸಲಾಗುವುದು. ಫಲಾನುಭವಿಗಳ ಅಹವಾಲು ಸ್ವೀಕರಿಸಲು ಸಂವಾದ ನಡೆಸಲಾಗುವುದು. ಶಕ್ತಿ, ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳ ಅನುಷ್ಠಾನದ ಬಗ್ಗೆಯೂ ಚರ್ಚಿಸಲಾಯಿತು. ಅರ್ಹ ಫಲಾನುಭವಿ ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗದಿರಲಿ. ಪಂಚ ಗ್ಯಾರಂಟಿಗಳು ಕರ್ನಾಟಕ ಸರಕಾರದ ಅತ್ಯಂತ ಮಹತ್ವದ ಯೋಜನೆಗಳಾಗಿದ್ದು, ಅರ್ಹತೆ ಹೊಂದಿರುವ ಯಾವುದೇ ಫಲಾನುಭವಿಗಳು ತಂತ್ರಾಂಶದ ನೋಂದಣಿ ಸೇರಿದಂತೆ ಯಾವುದೇ ಕಾರಣದಿಂದ ವಂಚಿತರಾಗದಂತೆ ಅನುಷ್ಠಾನ ಇಲಾಖೆಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಗ್ಯಾರಂಟಿ ಯೋಜನೆಗಳು ನಾಗರಿಕರ ಜೀವನದ ಗುಣಮಟ್ಟ ಸುಧಾರಣೆಗೆ ಪೂರಕವಾಗಿದ್ದು, ನಮ್ಮ ಭಾಗದಲ್ಲಿಶೇ.100 ರ ಅನುಷ್ಠಾನಕ್ಕೆ ಮುಂದಾಗುವಂತೆ ಸೂಚಿಸಿದರು. ಪಂಚಾಯಿತಿ ಹಂತದಲ್ಲಿ ಫಲಾನುಭವಿಗಳೊಂದಿಗೆ ಸಂವಾದ ನಡೆಸಿ, ಅಹವಾಲು ಸ್ವೀಕರಿಸುವುದರೊಂದಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಲು ಯೋಜಿಸಿರುವುದಾಗಿ ಈ ಸಂಧರ್ಭ ತಿಳಿಸಿದರು. ಸಮಿತಿ ಸದಸ್ಯರುಗಳು ಮಾತನಾಡಿ, ತಾಲೂಕಿನ ಗ್ಯಾರೆಂಟಿ ಯೋಜನೆಗಳ ಅನುಷ್ಠಾನದ ಪೈಕಿ ಶಕ್ತಿ ಯೋಜನೆಗೆ ಸಂಬಂಧಿಸಿದಂತೆ ಅನುಷ್ಠಾನದಲ್ಲಿ ಸಾಕಷ್ಟು ಸುಧಾರಣೆಯಾಗಬೇಕಾಗಿದ್ದು, ಗ್ರಾಮೀಣ ಪ್ರದೇಶದ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸದ ಹೊರತು ಗ್ರಾಮೀಣ ಮಹಿಳೆಯರಿಗೆ ಮತ್ತು ಶಾಲಾ ವಿದ್ಯಾರ್ಥಿಗಳಿಗೂ ಈ ಯೋಜನೆಯ ಅನುಕೂಲ ದೊರಕುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ಅಧ್ಯಕ್ಷರು ಈ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳಾಗಿದ್ದು, ಗ್ರಾಮೀಣ ಭಾಗದ ಮಹಿಳೆಯರು ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಿ ಮನವಿ ಸಲ್ಲಿಸಲಾಗಿದೆ ಎಂದರು. ಪ್ರತಿಬಾರಿ ಸಭೆ ನಡೆಸುವಾಗಲೂ ಡಿಪೋ ವ್ಯವಸ್ಥಾಪಕರು ಗೈರು ಹಾಜರಾಗುತ್ತಾರೆ. ಇದರಿಂದ ಮಾಹಿತಿ ಹಂಚಿಕೊಳ್ಳು ಕಷ್ಟವಾಗುತ್ತದೆ. ಈ ಹಿಂದೆ ಇದ್ದ ಕೆಲವು ಸರಕಾರಿ ಬಸ್ಸುಗಳು ಸ್ಥಗಿತಗೊಂಡಿದೆ. ಇದೇ ಸಮಯದಲ್ಲಿ ಖಾಸಗಿ ಬಸ್ಸಿನವರು ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದಾರೆ. ಮೇಲ್ನೋಟಕ್ಕೆ ಇಲಾಖೆಯವರು ಖಾಸಗಿ ಬಸ್ಸು ಮಾಲೀಕರೊಂದಿಗೆ ಶಾಮೀಲಾಗಿರುವಂತಿದೆ ಎಂದು ಮಹದೇವ ದೂರಿದರು. ಇದಕ್ಕೆ ಉತ್ತರಿಸಿದ ಅಧ್ಯಕ್ಷರು ಶೀಘ್ರವಾಗಿ ಈ ಸಮಸ್ಯೆಗಳನ್ನು ಪರಿಹರಿಸುವಂತೆ ಮತ್ತು ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಪತ್ರ ಬರೆಯುವಂತೆ ಸೂಚಿಸಿದರು. ಪಡಿತರ ಚೀಟಿ ರದ್ಧತಿ ಸಮಸ್ಯೆಯ ಕುರಿತು ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ ಇಲಾಖೆಯ ಅಧಿಕಾರಿಗಳು ಐಟಿ ರಿಟರ್ನ್ ಮಾಡುತ್ತಿರುವ ಬಿಪಿಎಲ್ ಕಾರ್ಡ್‍ದಾರರೂ ಸೇರಿದಂತೆ ನಿಯಮಗಳನು ಸಾರ ಪರಿಶೀಲನಾ ಪ್ರಕ್ರಿಯೆ ಜಾರಿಯಲ್ಲಿದೆ ಎಂದರು. ಅಲ್ಲದೆ ಬಹುತೇಕ ನ್ಯಾಯಾಬೆಲೆ ಅಂಗಡಿಗಳಲ್ಲಿ ಹಣ ವಸೂಲಾತಿ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ ಎರಡು ಮೂರು ಕಡೆಗಳಲ್ಲಿ ನ್ಯಾಯಾಬೆಲೆ ಅಂಗಡಿ ನಡೆಸುತ್ತಿರುವವರ ಪರವಾನಗಿ ರದ್ದುಮಾಡಿ. ಏಕೆಂದರೆ ಇದರಿಂದ ಕೂಲಿ ಕಾರ್ಮೀಕರು ಸೇರಿದಂತೆ ಎಲ್ಲರಿಗೂ ಸಮಸ್ಯೆಯಾಗುತ್ತಿದೆ. ಸರಿಯಾದ ಸಮಯಕ್ಕೆ ರೇಷನ್ ಕೊಡದೆ ಇರುವುದರಿಂದ ಗಂಟೆಗಟ್ಟಲೆ ಕಾಯಬೇಕಾದ ಅನಿವಾರ್ಯತೆ ಇದೆ. ಕೂಲಿ ಮಾಡುವವರು ಒಂದುದಿನ ಪೂರ್ತಿ ಇದಕ್ಕಾಗಿ ವ್ಯಯ ಮಾಡಬೇಕಾಗುತ್ತದೆ. ಸಮಯಕ್ಕೆ ಸರಿಯಾಗಿ ಪಡಿತರ ವಿತರಣೆ ಮಾಡಲು ಸೂಚಿಸುವಂತೆ ತಿಳಿಸಿದರು. ಗೃಹಲಕ್ಷ್ಮಿ ಯೋಜನೆಯಡಿ ನಿರಂತರವಾಗಿ ಬೇರೆ ಬೇರೆ ಕಾರಣಗಳಿಂದ ಸೌಲಭ್ಯ ವಂಚಿತರಾಗುತ್ತಿರುವ ಫಲಾನುಭವಿಗಳ ಕುರಿತಂತೆ ಶೀಘ್ರ ಕ್ರಮ ಕೈಗೊಳ್ಳುವುದು ಅಗತ್ಯ ಎಂಬ ಸದಸ್ಯರ ಅಭಿಪ್ರಾಯಕ್ಕೆ ಉತ್ತರಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ಮಾಹಿತಿ ಪಡೆದು ಫಲಾನುಭವಿವಾರು ಆದ್ಯತೆ ನೀಡುವುದಾಗಿ ಸಭೆಗೆ ತಿಳಿಸಿದರು. ಯುವನಿಧಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಾಲೇಜುಗಳು, ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಯುವಜನತೆಗೆ ನೋಂದಣಿಗೆ ಹೆಚ್ಚಿನ ಮಾಹಿತಿ ನೀಡಲು ಮಾಹಿತಿ ಶಿಬಿರಗಳನ್ನು ಆಯೋಜಿಸುವಂತೆ ಅಧ್ಯಕ್ಷರು ಸಂಬಂಧಿಸಿದ ಇಲಾಖೆಗೆ ಸೂಚಿಸಿದರು. ಗ್ಯಾರಂಟಿ ಯೋಜನೆಯ ಅನುಷ್ಠಾನ ಇಲಾಖೆಗಳಾದ ಚೆಸ್ಕಾಂ, ಆಹಾರ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳು ಈ ಅವಧಿಯಲ್ಲಿ ಯೋಜನೆಗಳಡಿ ಸೌಲಭ್ಯ ಪಡೆದ ಫಲಾನುಭವಿಗಳು ಮತ್ತು ಅನುದಾನದ ವಿವರವನ್ನು ಸಭೆಗೆ ಮಂಡಿಸಿದರು. ಸಭೆಯಲ್ಲಿತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರುಗಳಾದ ವಿನಿತಾ ಕಾವೇರಮ್ಮ, ಮಹಾದೇವಾ, ಬಷೀರ್, ವಿಶ್ವ, ಆಲಿ, ಮಹೇಶ್, ಹರೀಶ್, ಗಣೇಶ್, ವಿರಾಜಪೇಟೆ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕೆ.ಸಿ ಅಪ್ಪಣ್ಣ, ವಿಷಯ ನಿರ್ವಹಣಾಧಿಕಾರಿ ಮೋಹನ್ ವಿ.ಟಿ., ಕೆಎಸ್‍ಆರ್‍ಟಿಸಿ ಇಲಾಖೆಯ ಸಂಚಾರ ನಿಯಂತ್ರಕರು, ಯುವ ನಿಧಿ ಘಟಕದ ಅಧಿಕಾರಿ ಮಂಜುನಾಥ್, ಶಿಶು ಅಭಿವೃದ್ದಿ ಇಲಾಖೆಯ ಅಧಿಕಾರಿ ರೇಣುಕಾ ಹೊಸಮನಿ, ಚೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಸುರೇಶ್, ಆಹಾರ ಇಲಾಖೆಯ ಅಧಿಕಾರಿ ಸೀನಾ ಕುಮಾರಿ, ತಾಲೂಕು ಪಂಚಾಯಿತಿಯ ಕುಟ್ಟಂಡ ರವಿ ಸೇರಿದಂತೆ ಇನ್ನಿತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.