
ಮಡಿಕೇರಿ ಅ.20 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಅಕ್ಟೋಬರ್, 23 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರ ಕಚೇರಿಯ ವಿಷಯ ಪರಿವೀಕ್ಷಕರಾದ ಕೆ.ಆರ್.ಬಿಂದು, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಇತರರು ಪಾಲ್ಗೊಳ್ಳಲಿದ್ದಾರೆ.








