
ಮಡಿಕೇರಿ ಅ.20 NEWS DESK : ಸರಕಾರದ ಮಹತ್ವಾಕಾಂಕ್ಷೆಯ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಯಲ್ಲಿ ಪಾಲ್ಗೊಂಡ ವಿರಾಜಪೇಟೆ ಕ್ಷೇತ್ರದ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಪ್ರೌಢ ಶಾಲೆ ಶಿಕ್ಷಕರು, ಇತರ ಇಲಾಖೆ ಸಿಬ್ಬಂದಿಗಳು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿಯಾಗಿ ಚರ್ಚಿಸಿದರು. ಸಮೀಕ್ಷೆ ಸಂದರ್ಭದಲ್ಲಿ ಸಮೀಕ್ಷಕರು ಅನುಭವಿಸುತ್ತಿರುವ ತೊಡಕುಗಳನ್ನು ಹಾಗೂ ಕೆಲವು ತಾಂತ್ರಿಕ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು. ಎಲ್ಲವನ್ನು ಆಲಿಸಿದ ಶಾಸಕರು, ಅಗತ್ಯ ಕ್ರಮ ಕೈಗೊಂಡು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.









