Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ 21, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಬೆಂಗಳೂರು ಅ.21 NEWS DESK :  ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ.‌ ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು. ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಬೆಂಗಳೂರಿನ ಪೊಲೀಸ್ ಹುತಾತ್ಮರ ಉದ್ಯಾನವನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು. ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ‌ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ. ಈ ಎಲ್ಲಾ ಸಾಧನೆಗಳ ಶ್ರೇಯ ಪೊಲೀಸ್ ಇಲಾಖೆಗೆ ಸಲ್ಲಬೇಕು. ರಾಜ್ಯದಲ್ಲಿ ಪರಿಶಿಷ್ಠ ಜಾತಿ ಹಾಗೂ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ ಕೆಲಸ ಮಾಡುವ ಮೂಲಕ ಸಾಂವಿಧಾನಿಕ ಹಕ್ಕು ಮತ್ತು ಮೌಲ್ಯಗಳನ್ನು ಕಾಪಾಡುವ ಕೆಲಸ ಮಾಡಬೇಕು ಎಂದು ಹೇಳಿದರು. ಒಂದು ವರ್ಷದಲ್ಲಿ ರಾಜ್ಯದ 8 ಮಂದಿ ಸೇರಿ ದೇಶದಲ್ಲಿ 191 ಮಂದಿ ಕರ್ತವ್ಯ ನಿರ್ವಹಣೆ ವೇಳೆ ಪ್ರಾಣ ತ್ಯಾಗ ಮಾಡುವ ಮೂಲಕ ಹುತಾತ್ಮರಾಗಿದ್ದಾರೆ. ಇವರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು. ಇವರನ್ನು ಸ್ಮರಿಸಿ, ನಮಿಸುವುದು ಪ್ರತಿಯೊಬ್ಬರ ಕರ್ತವ್ಯ. ಸಂವಿಧಾನದಲ್ಲಿ ಜನರಿಗೆ ಕೊಟ್ಟಿರುವ ಹಕ್ಕುಗಳನ್ನು ಕಾಪಾಡುವ ಜವಾಬ್ದಾರಿಯನ್ನೂ ಪೊಲೀಸ್ ಇಲಾಖೆ ನಿರ್ವಹಿಸುತ್ತಿದೆ. ನಿವೃತ್ತ ಪೊಲೀಸ್ ಆರೋಗ್ಯ ಯೋಜನೆಯ ವೈದ್ಯಕೀಯ ಮರು ಪಾವತಿ ವೆಚ್ಚವನ್ನು ವಾರ್ಷಿಕ 1 ಲಕ್ಷ ರೂ.ಗಳಿಂದ 1.50 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಎಲ್ಲಾ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು 1,000 ರೂ.ಗಳಿಂದ 1,500 ರೂ.ಗೆ ಹೆಚ್ಚಿಸಲಾಗಿದೆ. ಎಂದು ಹೇಳಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿ ದಸರಾ ದೀಪಾಲಂಕಾರ : ಅಲಂಕಾರ ಸಮಿತಿಗೆ ಪೂರ್ಣ ಜವಾಬ್ದಾರಿ ನೀಡಿಲ್ಲ : ಮುನೀರ್ ಮಾಚಾರ್ ಸ್ಪಷ್ಟನೆ : ಮುಂದಿನ ದಸರಾ ಟೆಂಡರ್ ಪ್ರಕ್ರಿಯೆಯಲ್ಲಿ ಎಲ್ಲಾ ಸಮಿತಿಗಳ ಅಭಿಪ್ರಾಯ ಪಡೆಯಲು ಒತ್ತಾಯ

ಅಕ್ಟೋಬರ್ 15, 2026

ರಜನಿ ರೈ ಅವರಿಗೆ ಡಾಕ್ಟರೇಟ್ ಪದವಿ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರು ಪತ್ತೆ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮಾಹಿತಿ

ಅಕ್ಟೋಬರ್ 14, 2026

ರಜನಿ ರೈ ಅವರಿಗೆ ಡಾಕ್ಟರೇಟ್ ಪದವಿ

ಅಕ್ಟೋಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪುತ್ತೂರು, NEWS DESK ಅ. 14: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ, ಕೊಡಗಿನ ರಜನಿ ಬಾಲಕೃಷ್ಣ ರೈ…

ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರು ಪತ್ತೆ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮಾಹಿತಿ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಅ.16 ಮತ್ತು 17ರಂದು ಸೂರ್ಯ ಘರ್ ಯೋಜನೆಯ ವಿಶೇಷ ಅಭಿಯಾನ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ನಾಲ್ವರು ಬಾಂಗ್ಲಾದೇಶಿ ವಲಸಿಗರು ಪತ್ತೆ; ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಹಿಂದೂ ಜಾಗರಣಾ ವೇದಿಕೆ ಆಗ್ರಹ

ಅಕ್ಟೋಬರ್ 14, 2026

ಮಡಿಕೇರಿ : ಅ.15 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಕಾಫಿ ದಸರಾ : ಕಾಫಿ ಕೃಷಿಗೆ ಹೆಚ್ಚಿನ ಉತ್ತೇಜನ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 14, 2026

ಕುಶಾಲನಗರದ ಬಸವೇಶ್ವರ ಬಡಾವಣೆಯಲ್ಲಿ ನವರಾತ್ರಿ ಹಬ್ಬದ ಸಂಭ್ರಮ

ಅಕ್ಟೋಬರ್ 14, 2026

ಶಾಸಕ ಎ.ಎಸ್.ಪೊನ್ನಣ್ಣ ಅವರ ವಿಶೇಷ ಕಾಳಜಿ : ದಬ್ಬಡ್ಕದಲ್ಲಿ ವಿದ್ಯುತ್ ವಂಚಿತ ಮನೆಗಳಿಗೆ ಸೌರ ವಿದ್ಯುತ್ ಅಳವಡಿಕೆ ಆರಂಭ

ಅಕ್ಟೋಬರ್ 14, 2026

ಭಾರತದ ಆರ್ಥಿಕತೆಯಲ್ಲಿ ಬ್ಯಾಂಕ್ ಹಾಗೂ ವಿಮೆ ಪ್ರಮುಖ ಪಾತ್ರ ವಹಿಸುತ್ತವೆ: ಡಾ. ಕೆ.ಸಿ. ದಯಾನಂದ

ಅಕ್ಟೋಬರ್ 14, 2026

ದುಬೈ ಕೊಡಗು ಹಳೆ ವಿದ್ಯಾರ್ಥಿಗಳ ಸಂಘದಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಬ್ಬರು ವಿದ್ಯಾರ್ಥಿನಿಯರಿಗೆ ಸನ್ಮಾನ

ಅಕ್ಟೋಬರ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.