Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ : ಪೊಲೀಸರ ಧೈರ್ಯ ಮತ್ತು ಸಾಹಸ ಶ್ಲಾಘನೀಯ : ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ : ಪೊಲೀಸರ ಧೈರ್ಯ ಮತ್ತು ಸಾಹಸ ಶ್ಲಾಘನೀಯ : ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ*

ಅಕ್ಟೋಬರ್ 21, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.21 NEWS DESK : ಜಿಲ್ಲಾ ಪೊಲೀಸ್ ಘಟಕ ವತಿಯಿಂದ ‘ಪೊಲೀಸ್ ಸಂಸ್ಮರಣಾ ದಿನಾಚರಣೆ’ಯು ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು. ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಚ ಸಮರ್ಪಿಸಿ ಗಣ್ಯರು ಹಾಗೂ ಅತಿಥಿಗಳು ಗೌರವ ನಮನ ಸಲ್ಲಿಸಿದರು. ಪೊಲೀಸ್ ಹುತಾತ್ಮರ ದಿನದ ಕಾರ್ಯಕ್ರಮದಲ್ಲಿ ಪೆರೆಡ್ ಕಮಾಂಡರ್ ಆರ್.ಪಿ.ಗಣೇಶ್ ಅವರು ಗೌರವ ವಂದನೆ ಸಲ್ಲಿಸಿ, ಮುಖ್ಯ ಅತಿಥಿಗಳಿಂದ ಅನುಮತಿ ಪಡೆದರು. ಬಳಿಕ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಉಪ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್ ಕುಮಾರ್, ಗುಪ್ತದಳ ವಿಭಾಗದ ಪೊಲೀಸ್ ನಿರೀಕ್ಷರಾದ ಐ.ಪಿ.ಮೇದಪ್ಪ, ಜಿಲ್ಲಾ ಪೊಲೀಸ್ ಲಿಪಿಕ ಸಿಬ್ಬಂದಿಗಳ ಪರವಾಗಿ ಪಿ.ಎ.ನಂಜಪ್ಪ, ನಿವೃತ್ತ ಪೊಲೀಸ್ ಅಧಿಕಾರಿಗಳ ಪರವಾಗಿ ಅಪ್ಪಯ್ಯ, ನಿವೃತ್ತ ಸೇನಾಧಿಕಾರಿಗಳ ಪರವಾಗಿ ಮೊಣ್ಣಪ್ಪ, ಜಿಲ್ಲಾ ಕಾರಾಗೃಹ ಪರವಾಗಿ ಸಂಜಯ್ ಜತ್ತಿ, ನಗರಸಭೆ ಪರವಾಗಿ ಅಧ್ಯಕ್ಷರಾದ ಪಿ.ಕಲಾವತಿ ಹಾಗೂ ಸದಸ್ಯರಾದ ಅನಿತಾ ಪೂವಯ್ಯ, ವಕೀಲರ ಸಂಘದ ಪರವಾಗಿ ಸಿ.ಟಿ.ಜೋಸೆಫ್, ಮಾಧ್ಯಮಗಳ ಪರವಾಗಿ ಚಿನ್ನಸ್ವಾಮಿ, ರೋಟರಿ ಸಂಸ್ಥೆ ಪರವಾಗಿ ಲಲಿತ ರಾಘವನ್, ಲಯನ್ಸ್ ಸಂಸ್ಥೆ ಪರವಾಗಿ ಮದನ್, ವಾಣಿಜ್ಯೋದ್ಯಮಿಗಳ ಸಂಘ ಪರವಾಗಿ ಸಂತೋಷ್, ಹೋಟೆಲ್ ಅಸೋಶಿಯೇಷನ್ ಪರವಾಗಿ ದಿನೇಶ್, ಕೊಡವ ಸಮಾಜಗಳ ಪರವಾಗಿ ಎಂ.ಎನ್.ಮುತ್ತಪ್ಪ, ಗೌಡ ಸಮಾಜಗಳ ಪರವಾಗಿ ಸೂರ್ತಲೆ ಸೋಮಣ್ಣ, ಮುಸ್ಲಿಂ ಒಕ್ಕೂಟಗಳ ಪರವಾಗಿ ಅಮಿನ್ ಮೊಹಿಸಿನ್, ಪೊಲೀಸ್ ಉಪ ನಿರೀಕ್ಷರ ಪರವಾಗಿ ಗೋವಿಂದರಾಜು, ಬ್ಯಾಂಡ್ ಮಾಸ್ಟರ್ ಚೆನ್ನಕೇಶವ, ನಿಸ್ತಂತು ವಿಭಾಗದ ಪರವಾಗಿ ಧನಂಜಯ, ಮಹಿಳಾ ಪೊಲೀಸರ ಪರವಾಗಿ ಸುಮತಿ, ನಿವೃತ್ತ ಸೇನಾಧಿಕಾರಿಗಳ ಪರವಾಗಿ ಮೇಜರ್ ಕಾರ್ಯಪ್ಪ ಮತ್ತಿತರರು ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಚ ಸಮರ್ಪಿಸಿ, ಗೌರವ ನಮನ ಸಲ್ಲಿಸಿದರು. ನಂತರ ಪೊಲೀಸ್ ಕವಾಯತು ತಂಡದವರಿಂದ ಮೂರು ಸುತ್ತು ಕುಶಾಲತೋಪು ಹಾರಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಬ್ಯಾಂಡ್ ತಂಡದವರು ರಾಷ್ಟ್ರಗೀತೆ ನುಡಿಸಿದರು. ಬಳಿಕ ಎರಡು ನಿಮಿಷ ಮೌನಾಚರಿಸಲಾಯಿತು. ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸರ ಹೆಸರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಸ್ಮರಿಸಿದರು. 2024-25 ರ ಅವಧಿಯಲ್ಲಿ ದೇಶದ ಕಾನೂನು ಸುವ್ಯವಸ್ಥೆ ಕಾಪಾಡುವ ಸಂದರ್ಭದಲ್ಲಿ ರಾಷ್ಟ್ರದಲ್ಲಿ 191 ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂಧಿಗಳು ಹುತಾತ್ಮರಾಗಿದ್ದು, ಇವರಲ್ಲಿ 8 ಮಂದಿ ಕರ್ನಾಟಕ ರಾಜ್ಯದವರಾಗಿದ್ದಾರೆ. ಮೆಬೂಬ್ ಗುಡ್ಡಲಿಲ್ ಪಿಎಸ್‍ಐ (ಬೆಂಗಳೂರು ನಗರ), ವೆಂಕಟಾಚಲಪತಿ ಕೆ.ಎನ್ ಎಎಸ್‍ಐ (ಕೆಜಿಎಫ್), ಗಿರೀಶ್ ಎಸ್ ಎಆರ್‍ಎಸ್‍ಐ (ಡಿಎಆರ್ ತುಮಕೂರು), ಬಸವರಾಜ ಎಂ (ಬೆಂಗಳೂರು ಜಿಲ್ಲೆ), ನಿಂಗರಾಜ್ ಟಿ.ಎಸ್. (ಡಿಎಆರ್ ತುಮಕೂರು ಜಿಲ್ಲೆ), ಪ್ರಕಾಶ್ ಬಿ.ಯು (11 ನೇ ಪಡೆ ಕೆಎಸ್‍ಆರ್‍ಪಿ ಹಾಸನ), ಮಹೇಶ್ ಎನ್.ಆರ್. (ಬೆಂಗಳೂರು ನಗರ) ಹಾಗೂ ರಾಮಪ್ಪ ಪೂಜಾರಿ (ಡಿಎಆರ್ ದಾವಣಗೆರೆ ಜಿಲ್ಲೆ) ಇವರು ಸೇರಿದಂತೆ ಎಲ್ಲಾ ಪೊಲೀಸ್ ಹುತಾತ್ಮರ ಹೆಸರು ಓದಿದರು. ರಾಷ್ಟ್ರದ ಆಂತರೀಕ ಭದ್ರತೆಯಲ್ಲಿ ಪೊಲೀಸರ ಸೇವೆ ಅನುಪಮವಾದುದು, ಶಾಂತಿ-ಸುರಕ್ಷತೆ ಕಾಪಾಡುವುದು ಹಾಗೂ ಸಮಾಜ ಘಾತುಕ ಶಕ್ತಿಗಳನ್ನು ನಿಯಂತ್ರಿಸುವಲ್ಲಿ ಪೊಲೀಸರ ಪಾತ್ರ ಹೆಚ್ಚಿನದ್ದಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ತಿಳಿಸಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಮಾತನಾಡಿ ಸಮಾಜದಲ್ಲಿ ಎಲ್ಲರ ಶಾಂತಿ ಮತ್ತು ನೆಮ್ಮದಿಯ ಬದುಕಿಗೆ ಪೊಲೀಸರು ತಮ್ಮ ಜೀವದ ಹಂಗನ್ನು ತೊರೆದು ಕರ್ತವ್ಯ ನಿರ್ವಹಿಸುತ್ತಾರೆ ಎಂದರು. ಪೊಲೀಸರ ಧೈರ್ಯ ಮತ್ತು ಸಾಹಸ ಶ್ಲಾಘನೀಯವಾಗಿದೆ. ಚೀನಾ ಗಡಿ ಭಾಗದ ರಕ್ಷಣೆಯಲ್ಲಿ ಜೀವವನ್ನು ತೆಕ್ಕಿಸದೆ ರಾಷ್ಟ್ರದ ಗಡಿ ರಕ್ಷಣೆಗೆ ಪೊಲೀಸರು ಹೋರಾಡಿದ್ದಾರೆ ಎಂದು ಜಿ.ಪಂ.ಸಿಇಒ ಅವರು ಸ್ಮರಿಸಿದರು. ರಾಷ್ಟ್ರದ ಪ್ರಗತಿ ಮತ್ತು ಅಭಿವೃದ್ಧಿಗೆ ಕಾನೂನು ಸುವ್ಯವಸ್ಥೆ ಹಾಗೂ ನೆಮ್ಮದಿಯ ಬದುಕು ಅತಿಮುಖ್ಯವಾಗಿದೆ. ಆ ನಿಟ್ಟಿನಲ್ಲಿ ರಾಷ್ಟ್ರದ ಆಂತರೀಕ ಭದ್ರತೆಯಲ್ಲಿ ಪೊಲೀಸರ ಕಾರ್ಯನಿರ್ವಹಣೆ ಮೆಚ್ಚುವಂತದ್ದು ಎಂದು ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದರು. ರಾಷ್ಟ್ರದ ಆಂತರೀಕ ಮತ್ತು ಬಾಹ್ಯ ಭದ್ರತೆಯಲ್ಲಿ ಭಾರತೀಯ ಭೂಸೇನೆ, ವಾಯುಸೇನೆ ಹಾಗೂ ನೌಕಾಸೇನೆಯು ಪ್ರಮುಖ ಪಾತ್ರ ವಹಿಸುತ್ತವೆ. ಆ ದಿಸೆಯಲ್ಲಿ ರಾಷ್ಟ್ರದ ಆಂತರೀಕ ಭದ್ರತೆ ಸಂದರ್ಭದಲ್ಲಿ ಪ್ರಾಣತ್ಯಾಗ ಮಾಡಿದ ಪೊಲೀಸರನ್ನು ಸ್ಮರಿಸಬೇಕಿದೆ. ಜೊತೆಗೆ ಅವರ ಕುಟುಂಬದವರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ ಎಂದರು. ಜಿಲ್ಲೆಯ ಎಲ್ಲಾ ಹಂತದ ಪೊಲೀಸ್ ಅಧಿಕಾರಿಗಳು ಇತರರು ಇದ್ದರು, ಪೊಲೀಸ್ ಮುಖ್ಯಪೇದೆ ಫಾರುಕ್ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.