Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ : ಹೆಸರು ನೋಂದಾಯಿಸಲು ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ : ಹೆಸರು ನೋಂದಾಯಿಸಲು ಮನವಿ*

ಅಕ್ಟೋಬರ್ 21, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.21 NEWS DESK : ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಈ ಎರಡೂ ಸಂಸ್ಥೆಗಳು ಒಟ್ಟಾಗಿ ನ.1, 1985 ರಿಂದ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲಾ ಸರ್ಕಾರಿ ನೌಕರರಿಗಾಗಿ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯೊಂದನ್ನು ನಡೆಸುತ್ತಿವೆ. ಇದಕ್ಕೆ ಕರ್ನಾಟಕದಲ್ಲಿರುವ ಎಲ್ಲಾ ನಗರಸಭೆ, ಕ.ವಿ.ಪ್ರ.ನಿ.ನಿ., ಕೆ.ಎಸ್.ಆರ್.ಟಿ.ಸಿ., ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳ ನೌಕರರು ಸಹ ನೊಂದಾಯಿಸಿಕೊಳ್ಳಬಹುದು. ನೋಂದಣಿತರು ಶುಲ್ಕ ಕೊಡಬೇಕಾಗಿಲ್ಲ. ಕರ್ನಾಟಕ ಸರ್ಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಿಗೆ ಹಾಜರಾಗುವವರಿಗೆ ಕಚೇರಿ ಗೈರು ಹಾಜರಿಯನ್ನು ಅನ್ಯ ಕಾರ್ಯನಿಮಿತ್ತ ಎಂದು ಪರಿಗಣಿಸಲಾಗುವುದು. ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೋಂದಾಯಿಸಿಕೊಂಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ವಿನಾಯಿತಿ ದೊರೆಯಲಿದೆ. ಈ ಯೋಜನೆಯನ್ನು ಸಾರ್ವಜನಿಕರಿಗೂ ವಿಸ್ತರಿಸಲಾಗಿದೆ. ಇವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ವಯೋಮಿತಿ 18 ರಿಂದ 50 ವಯಸ್ಸಿನ ಒಳಗಿರಬೇಕು. ಆಸಕ್ತರು ಭರ್ತಿ ಮಾಡಿದ ಅರ್ಜಿಯ ಜೊತೆಯಲ್ಲಿ ರೂ 250 ಡಿಮ್ಯಾಂಡ್ ಡ್ರಾಫ್ಟ್‍ನ್ನು ಕಳುಹಿಸಿ ಕೊಡಬೇಕು. ಹೆಸರು ನೋಂದಾಯಿಸಿದವರಿಗೆ ಇಪ್ಪತ್ತು ಪಾಠಾವಳಿಗಳನ್ನು ಕಳುಹಿಸಿಕೊಡಲಾಗುವುದು. ತರಬೇತಿ ಮತ್ತು ಸಂಪರ್ಕ ಶಿಬಿರದ ಅಂತ್ಯದಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು. ಮೂವತ್ತೆಂಟನೆಯ ತಂಡದ ತರಬೇತಿಯು ಡಿಸೆಂಬರ್ ತಿಂಗಳಲ್ಲಿ ಆರಂಭವಾಗಲಿದೆ. ಅರ್ಜಿ ನಮೂನೆ ಮತ್ತು ತರಬೇತಿ ವಿವರವನ್ನು ಪ್ರಭಾರಿ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು-570006, ದೂ.ಸಂ 0821-2345128 ಇವರಿಗೆ ಐದು ರೂಪಾಯಿಯ ಅಂಚೆ ಚೀಟಿ ಹಚ್ಚಿದ ಸ್ವವಿಳಾಸಿತ ಲಕೋಟೆಯನ್ನು ಕಳುಹಿಸಿ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳು ಪ್ರಭಾರಿ ಅಧಿಕಾರಿಯವರಿಗೆ ನವೆಂಬರ್ 30 ರ ರೊಳಗೆ ತಲುಪಬೇಕು. ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇಲ್ಲಿ ಸಂಪರ್ಕಿಸಬಹುದಾಗಿದೆ.ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಅವರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.