Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*
  • *ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*
  • *ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿ : ಜಿಲ್ಲಾಧಿಕಾರಿ*
  • *ಯುವ ಜನರ ಸಬಲೀಕರಣಕ್ಕೆ `ಮೈ ಭಾರತ್’ ವೇದಿಕೆ ಬಳಸಿಕೊಳ್ಳಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
  • *ಸೋಮವಾರಪೇಟೆ : ವಾಕರ್ಸ್ ವಿಂಗ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆ*
  • ಜು.26 ರಂದು ಮಡಿಕೇರಿಯಲ್ಲಿ ಕಾಗಿ೯ಲ್ ವಿಜಯ್ ದಿವಸ್ : 125 ಸಂಘಟನೆಗಳಿಂದ ಯೋಧರಿಗೆ ಗೌರವ ನಮನ
  • *ಬಾಲಕರ ಟೇಬಲ್ ಟೆನ್ನಿಸ್ ಪಂದ್ಯಾವಳಿ – ಕೊಡಗು ವಿದ್ಯಾಲಯ ತಂಡಕ್ಕೆ ಕಂಚಿನ ಪದಕ*
  • *ಬಿಡದಿ ಹೋರಾಟಕ್ಕೆ ತೆರಳುತ್ತಿದ್ದ ರೈತ ಸಂಘದ ಪ್ರಮುಖರನ್ನು ವಶಕ್ಕೆ ಪಡೆದ ಪೊಲೀಸರು : ಮುಖಂಡರ ಅಸಮಾಧಾನ*
  • *”ನೀಟ್” ಕೇಂದ್ರದ ಧೋರಣೆ ಖಂಡಿಸಿ ವಿರಾಜಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ : ಕೇಂದ್ರದಿಂದ ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟ : ಶಾಸಕ ಎ.ಎಸ್.ಪೊನ್ನಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ನ್ಯಾಷನಲ್ ಕೌನ್ಸಿಲ್ ನಿಂದ ನ.1 ರಂದು ನವದೆಹಲಿ ಚಲೋ ಕೊಡವ ಸತ್ಯಾಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ನ್ಯಾಷನಲ್ ಕೌನ್ಸಿಲ್ ನಿಂದ ನ.1 ರಂದು ನವದೆಹಲಿ ಚಲೋ ಕೊಡವ ಸತ್ಯಾಗ್ರಹ*

ಅಕ್ಟೋಬರ್ 24, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.24 : ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸುವ ಉದ್ದೇಶದದಿಂದ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನ.1 ರಂದು ನವದೆಹಲಿ ಚಲೋ ಕೊಡವ ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಂವಿಧಾನದ 6 ನೇ ಶೆಡ್ಯೂಲ್ ಅಡಿಯಲ್ಲಿ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಮೂಲಕ ಸ್ವ-ನಿರ್ಣಯ ಮತ್ತು ಸ್ವ-ಆಡಳಿತದ ಹಕ್ಕೊತ್ತಾಯಗಳ ಪರ ಹೋರಾಟ ನಡೆಸುತ್ತಿರುವ ಸಿಎನ್‌ಸಿ ಸಂಘಟನೆ ನ.1ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಶಾಂತಿಯುತ ಸತ್ಯಾಗ್ರಹವನ್ನು ನಡೆಸಲಿದೆ. ರಾಜ್ಯ ಮರುಸಂಘಟನಾ ದಿನವನ್ನು “ಕೊಡವ ನೆಲದ ದುರಾಕ್ರಮಣದ ದಿನ” ಎಂದು ಆಚರಿಸುವುದಾಗಿ ಮಾಹಿತಿ ನೀಡಿದ್ದಾರೆ. 1956 ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವರು ಪ್ರೀತಿಯ ತಾಯ್ನಾಡನ್ನು ಅಂದರೆ ಹಿಂದಿನ “ಸಿ” ಭಾಗವಾದ ಕೊಡವರ ರಾಜ್ಯವನ್ನು ಕಳೆದುಕೊಂಡ ದಿನ. ಇದು 20 ನೇ ಶತಮಾನದ ಅತ್ಯಂತ ದೊಡ್ಡ ಭೌಗೋಳಿಕ-ರಾಜಕೀಯ ಉತ್ಪಾತವಾಗಿದೆ. ರಾಜ್ಯ ಮರುಸಂಘಟನಾ ಕಾಯ್ದೆಯಡಿ ನಮ್ಮ ರಾಜ್ಯವನ್ನು ವಿಲೀನಗೊಳಿಸಿದ ನಂತರ ಕೊಡವರು ತಮ್ಮ ಸ್ವಂತ ತಾಯ್ನಾಡಿನಲ್ಲಿ ಅಸ್ತಿತ್ವವಿಲ್ಲದವರಾದೆವು. ನಮ್ಮ ವಿಶಿಷ್ಟ ಆನಿಮಿಸ್ಟಿಕ್ ಗುರುತು, ಜಾನಪದ ಸಂಸ್ಕೃತಿ ಮತ್ತು ಸಾಂಪ್ರದಾಯಿಕ ಕಾನೂನು ವ್ಯವಸ್ಥೆಗಳನ್ನು ಉದ್ದೇಶಪೂರ್ವಕವಾಗಿ ಅಳಿಸಿಹಾಕಲಾಯಿತು. ಬಹುಸಂಖ್ಯಾತ ಸಮುದಾಯಗಳ ಅನುಕೂಲಕ್ಕಾಗಿ ಮತ್ತು ಪ್ರಯೋಜನಕ್ಕಾಗಿ ಕೊಡವರನ್ನು ರಾಜ್ಯ ಬಲದಿಂದ ಏಕರೂಪಗೊಳಿಸಲಾಗಿದೆ. ವ್ಯವಸ್ಥಿತವಾಗಿ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದೆ. ಸರಕಾರಿ ವ್ಯವಸ್ಥೆ ಆಕ್ರಮಣಕಾರಿ ಶಕ್ತಿಯಂತೆ ವರ್ತಿಸುತ್ತಿದೆ, ಕೊಡವರನ್ನು ಅಧೀನ ಪ್ರಜೆಗಳಾಗಿ ಮತ್ತು ಕೊಡವಲ್ಯಾಂಡ್ ಅನ್ನು ಸಂಪನ್ಮೂಲ ಉತ್ಪಾದಿಸುವ ಆಂತರಿಕ ವಸಾಹತು – ಆಕ್ರಮಿತ ಪ್ರದೇಶವಾಗಿ ಪರಿಗಣಿಸುತ್ತಿದೆ. ಪ್ರತಿಯೊಂದು ವಿಚಾರದಲ್ಲೂ ಕೊಡವರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದ್ದಾರೆ. ರಾಷ್ಟ್ರದ ಎದುರು ನಮ್ಮ ನೋವು ಮತ್ತು ಸಂಕಷ್ಟವನ್ನು ಎತ್ತಿ ತೋರಿಸಲು ಹಾಗೂ ಜಾಗತಿಕ ಧರ್ಮ ಪ್ರಜ್ಞೆಯನ್ನು ಜಾಗೃತಿಗೊಳಿಸಲು ನ.1 ರಂದು ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತವಾಗಿ ಸತ್ಯಾಗ್ರಹ ನಡೆಸಿ ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಲಿದ್ದೇವೆ. ಕರ್ನಾಟಕ ಸರಕಾರ ಮತ್ತು ಭಾರತ ಸರಕಾರ ನಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಬೇಕು. ಸಿಎನ್‌ಸಿ ಸಂಘಟನೆ ಕೊಡವರ ಪರ ಪ್ರತಿಪಾದಿಸಿರುವ ಬೇಡಿಕೆಗಳನ್ನು ಸಾಂವಿಧಾನಿಕ ಪರಿಹಾರವಾಗಿ ಮೂಲಭೂತ ಹಕ್ಕುಗಳ ಅಡಿಯಲ್ಲಿ ಪರಿಗಣಿಸಬೇಕು ಮತ್ತು ಕೊಡವಲ್ಯಾಂಡ್ ಅನ್ನು ಸಂವಿಧಾನದ 6 ನೇ ಶೆಡ್ಯೂಲ್ ಅಡಿಯಲ್ಲಿ ತರಬೇಕು. ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವರನ್ನು ಪರಿಶಿಷ್ಟ ಪಂಗಡಗಳ (Sಖಿ) ವರ್ಗೀಕರಣದ ಅಡಿಯಲ್ಲಿ ಸೇರಿಸಬೇಕು ಮತ್ತು ಸಿಖ್ಖರ ಕಿರ್ಪಾಣ್ ಗೆ ಸಮಾನವಾಗಿ ಸಂವಿಧಾನದ ಆರ್ಟಿಕಲ್ 25 ಮತ್ತು 26 ರಡಿಯಲ್ಲಿ ಕೊಡವ ಧಾರ್ಮಿಕ ಸಂಸ್ಕಾರ ಗನ್ ತೋಕ್ ಹಕ್ಕನ್ನು ಅನ್ನು ಚಿರಸ್ಥಾಯಿಯಾಗಿ ಉಳಿಸಿಕೊಳ್ಳಲು ಸಾಂವಿಧಾನಿಕ ಕಾರ್ಯವಿಧಾನಗಳನ್ನು ಪ್ರಾರಂಭಿಸಬೇಕು. ಕೊಡವರನ್ನು ಅಳಿವಿನಂಚಿನಲ್ಲಿರುವ ಮತ್ತು ಕ್ಷೀಣಿಸುತ್ತಿರುವ ಸಮುದಾಯವೆಂದು ಗುರುತಿಸಿ ಖಚಿತಪಡಿಸಬೇಕು. 2026–27 ರಲ್ಲಿ ನಡೆಯುವ 16ನೇ ರಾಷ್ಟ್ರೀಯ ಜನಸಂಖ್ಯಾ ಗಣತಿ ಸಂದರ್ಭ ಕೊಡವರಿಗೆ ಪ್ರತ್ಯೇಕ ಕಾಲಂ ಅಳವಡಿಸಬೇಕು ಎಂದು ಒತ್ತಾಯಿಸಲಾಗುವುದು ಎಂದು ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಕೊಡವ ಜನಾಂಗೀಯತೆಯಲ್ಲಿ ಯಾವುದೇ ಚತುರ್ಭುಜ ಜಾತಿ ವ್ಯವಸ್ಥೆ ಇಲ್ಲ. ಸಪ್ತಪದಿ ಧಾರ್ಮಿಕ ಆಚರಣೆಯು ಕೊಡವರಿಗೆ ತಿಳಿದಿಲ್ಲ. 18 ನೇ ಶತಮಾನದ ಕೊಡವಲ್ಯಾಂಡ್ನ ಪರಕೀಯ ಆಡಳಿತಗಾರ ಲಿಂಗರಾಜ “ಹುಕುಮ್ನಾಮ” ಎಂಬ ತನ್ನ ಘೋಷಣೆಯಲ್ಲಿ ಕೊಡವರನ್ನು ಧಾರ್ಮಿಕೇತರ ಆನಿಮಿಸ್ಟಿಕ್ ಜನಾಂಗ ಎಂದು ದಾಖಲಿಸಿದ್ದಾರೆ. 1871–72 ರಿಂದ 1931 ರವರೆಗಿನ ಬ್ರಿಟಿಷ್ ಯುಗದಲ್ಲಿ ಭಾರತದ ಮೊದಲ ಜನಗಣತಿಯು ಕೊಡವರನ್ನು ಜಾತಿ-ರಹಿತ ಜನಾಂಗ ಎಂದು ದಾಖಲಿಸಿದೆ. ಆದಿಮಸಂಜಾತ ಜನರ ಹಕ್ಕುಗಳ ಕುರಿತು ವಿಶ್ವ ರಾಷ್ಟ್ರ ಸಂಸ್ಥೆಯ ಚಾರ್ಟರ್ನಲ್ಲಿ ಘೋಷಿಸಲಾದ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ರಕ್ಷಣೆ ನೀಡಬೇಕು. ಸಂವಿಧಾನದ 25 ಮತ್ತು 26 ನೇ ಶೆಡ್ಯೂಲ್ ಅಡಿಯಲ್ಲಿ ಕೊಡವ ಸಾಂಪ್ರದಾಯಿಕ ಜನಾಂಗೀಯ “ಸಂಸ್ಕಾರ ಬಂದೂಕು” ಹಕ್ಕುಗಳ ರಕ್ಷಣೆಯಾಗಬೇಕು. ಸಂವಿಧಾನದ 8ನೇ ಶೆಡ್ಯೂಲ್ ನಲ್ಲಿ ಕೊಡವ ತಕ್ ಸೇರ್ಪಡೆ, ಶೈಕ್ಷಣಿಕ ಪಠ್ಯಕ್ರಮ ಮತ್ತು ಆಡಳಿತ ವ್ಯವಸ್ಥೆಗಳಲ್ಲಿ ಅದನ್ನು ಪರಿಚಯ ಮಾಡಬೇಕು. ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಯಲ್ಲಿ ಕೊಡವ ಜಾನಪದ ಪರಂಪರೆಯ ಸೇರ್ಪಡೆಯಾಗಬೇಕು. ಜೀವನದಿ ಕಾವೇರಿಯನ್ನು “ಕಾನೂನುಬದ್ಧ ವ್ಯಕ್ತಿ ಸ್ಥಾನಮಾನ” ಹೊಂದಿರುವ ಜೀವಂತ ಅಸ್ತಿತ್ವವಾಗಿ ಗುರುತಿಸಬೇಕು ಮತ್ತು ಕೊಡಗಿನಲ್ಲಿ ಪ್ರಮುಖ ನೀರಿನ ಪಾಲಿನ ಬಳಕೆಯಾಗಬೇಕು. ಕಾವೇರಿಯ ಜನ್ಮಸ್ಥಳ ತಲಕಾವೇರಿಯನ್ನು ಜೆರುಸಲೆಂ ಮಾದರಿಯಲ್ಲಿ ಆದಿಮಸಂಜಾತ ಕೊಡವರ ಪವಿತ್ರ ಯಾತ್ರಾ ಸ್ಥಳವೆಂದು ಪರಿಗಣಿಸಬೇಕು.
ದೇವಟ್ ಪರಂಬ್ ನರಮೇಧ ದುರಂತ ಸ್ಥಳ, ನಾಲ್ನಾಡ್ ಅರಮನೆ, ಮಡಿಕೇರಿ ಕೋಟೆ ಪಿತೂರಿಯಲ್ಲಿ ನಡೆದ ರಾಜಕೀಯ ಹತ್ಯೆಗಳು, ಉಲುಗುಲಿ, ಮುಳ್ಳುಸೋಗೆ, ಲಕ್ಡಿಕೋಟೆಯಲ್ಲಿ ಯುದ್ಧ ಇವುಗಳ ಸ್ಮರಣಾರ್ಥ ಸ್ಮಾರಕಗಳು ಸ್ಥಾಪನೆಯಾಗಬೇಕು ಮತ್ತು ಪರಂಪರೆಯ ತಾಣಗಳ ಸಂರಕ್ಷಣೆಯಾಗಬೇಕು. ಜನಸAಖ್ಯಾ ಬದಲಾವಣೆಗಳನ್ನು ತಡೆಗಟ್ಟಲು ಮತ್ತು ಅನುವಂಶಿಕ ಆಸ್ತಿಗಳನ್ನು ರಕ್ಷಿಸಲು ಇನ್ನರ್ ಲೈನ್ ಪರವಾನಗಿ ಅನುಷ್ಠಾನವಾಗಬೇಕು. ಹೊಸ ಸಂಸತ್ತಿನ “ಸೆಂಟ್ರಲ್ ವಿಸ್ಟಾ”ದಲ್ಲಿ ಪ್ರಾತಿನಿಧ್ಯ ಮತ್ತು ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯಕ್ಕೆ ನೀಡಿದ “ಸಂಘ” ಕ್ಷೇತ್ರದಂತೆ ಕೊಡವರಿಗೂ ವಿಶೇಷ ಸಂಸದೀಯ ಸ್ಥಾನ ನೀಡಬೇಕು ಮತ್ತು ವಿಧಾನಸಭಾ ಕ್ಷೇತ್ರ ರಚನೆಯಾಗಬೇಕು. ಪರರ ಪಾಲಾದ ಕೊಡವ ಪೂರ್ವಜರ ಆಸ್ತಿಗಳನ್ನು ಕೊಡವ ಸಮುದಾಯಕ್ಕೆ ಪುನಃಸ್ಥಾಪಿಸಲು ಕ್ರಮ ಕೈಗೊಳ್ಳಬೇಕು. ಸಾಂಪ್ರದಾಯಿಕ ಪ್ರದೇಶಗಳು ಮತ್ತು ಸಂಪನ್ಮೂಲಗಳನ್ನು ಮರಳಿ ಪಡೆಯುವ ಮತ್ತು ರಕ್ಷಿಸುವ ಹಕ್ಕನ್ನು ಒಳಗೊಂಡಂತೆ ಆದಿಮಸಂಜಾತ ಕೊಡವರ ಹಕ್ಕುಗಳ ಕುರಿತು ವಿಶ್ವಸಂಸ್ಥೆಯ ಮಾರ್ಗಸೂಚಿಗಳನ್ನು ಜಾರಿಗೆ ತರುವಂತೆ ಸತ್ಯಾಗ್ರಹದ ಸಂದರ್ಭ ಒತ್ತಾಯಿಸಲಾಗುವುದು ಎಂದು ಎನ್.ಯು.ನಾಚಪ್ಪ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*

ಜುಲೈ 24, 2026

*ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 24, 2026

*ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*

ಜುಲೈ 24, 2026

*ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.24 NEWS DESK : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಗಣತಿ ನಮೂನೆಯ ಡಿಜಿಟಲೀಕರಣವು ಶೇ.80…

*ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*

ಜುಲೈ 24, 2026

*ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿ : ಜಿಲ್ಲಾಧಿಕಾರಿ*

ಜುಲೈ 24, 2026

*ಯುವ ಜನರ ಸಬಲೀಕರಣಕ್ಕೆ `ಮೈ ಭಾರತ್’ ವೇದಿಕೆ ಬಳಸಿಕೊಳ್ಳಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಜುಲೈ 24, 2026

*ಸೋಮವಾರಪೇಟೆ : ವಾಕರ್ಸ್ ವಿಂಗ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆ*

ಜುಲೈ 24, 2026

ಜು.26 ರಂದು ಮಡಿಕೇರಿಯಲ್ಲಿ ಕಾಗಿ೯ಲ್ ವಿಜಯ್ ದಿವಸ್ : 125 ಸಂಘಟನೆಗಳಿಂದ ಯೋಧರಿಗೆ ಗೌರವ ನಮನ

ಜುಲೈ 24, 2026

*ಬಾಲಕರ ಟೇಬಲ್ ಟೆನ್ನಿಸ್ ಪಂದ್ಯಾವಳಿ – ಕೊಡಗು ವಿದ್ಯಾಲಯ ತಂಡಕ್ಕೆ ಕಂಚಿನ ಪದಕ*

ಜುಲೈ 24, 2026

*ಬಿಡದಿ ಹೋರಾಟಕ್ಕೆ ತೆರಳುತ್ತಿದ್ದ ರೈತ ಸಂಘದ ಪ್ರಮುಖರನ್ನು ವಶಕ್ಕೆ ಪಡೆದ ಪೊಲೀಸರು : ಮುಖಂಡರ ಅಸಮಾಧಾನ*

ಜುಲೈ 24, 2026

*”ನೀಟ್” ಕೇಂದ್ರದ ಧೋರಣೆ ಖಂಡಿಸಿ ವಿರಾಜಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ : ಕೇಂದ್ರದಿಂದ ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟ : ಶಾಸಕ ಎ.ಎಸ್.ಪೊನ್ನಣ್ಣ*

ಜುಲೈ 24, 2026

*ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ : ಪ್ರಮುಖರ ಬಂಧನ, ಬಿಡುಗಡೆ*

ಜುಲೈ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.