Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೋಲ್ಡನ್ ಬುಕ್ ಆಫ್ ರೆಕಾರ್ಡ್ : ಅ.28 ರಂದು ಯೋಗಪಟು ಸಿಂಚನಳಿಂದ ಯೋಗಾಸನಗಳ ಪ್ರದರ್ಶನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೋಲ್ಡನ್ ಬುಕ್ ಆಫ್ ರೆಕಾರ್ಡ್ : ಅ.28 ರಂದು ಯೋಗಪಟು ಸಿಂಚನಳಿಂದ ಯೋಗಾಸನಗಳ ಪ್ರದರ್ಶನ*

ಅಕ್ಟೋಬರ್ 25, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.25 NEWS DESK : ಜಿಲ್ಲಾ ಕೇಂದ್ರ ಮಡಿಕೇರಿಯ ಅಂಚಿನ ಮದೆನಾಡಿನ ಬಿಜಿಎಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ, ಯೋಗಪಟು ಕುಮಾರಿ ಸಿಂಚನ ಅವರಿಂದ ಅ.28 ರಂದು ವಿದ್ಯಾಸಂಸ್ಥೆಯಲ್ಲಿ ಗೋಲ್ಡನ್ ಬುಕ್ ಆಫ್ ರೆಕಾರ್ಡ್‍ಗಾಗಿ ಮೂರು ಯೋಗಾಸನಗಳ ಪ್ರದರ್ಶನ ಕಾರ್ಯಕ್ರಮ ನಡೆಯೊಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಶ್ರೀ ಆದಿ ಚುಂಚನಗಿರಿ ಶಾಖಾ ಮಠದ ಮೈಸೂರು ಮತ್ತು ಕೊಡಗು ಶಾಖೆÉಯ ಕಾರ್ಯದರ್ಶಿಗಳಾದ ಶ್ರೀ ಸೋಮೇಶ್ವರನಾಥ ಸ್ವಾಮೀಜಿಗಳು ಈ ಕುರಿತು ಮಾಹಿತಿ ನೀಡಿ, ಈಗಾಗಲೆ ಕೊಡಗಿನಲ್ಲಿ ವಿಶ್ವದಾಖಲೆಯ ಎರಡು ಯೋಗ ಪ್ರದರ್ಶನವನ್ನು ಸಿಂಚನ ನೀಡಿದ್ದು, ಇದೀಗ ಮೂರನೇ ಬಾರಿ ವಿಶ್ವ ದಾಖಲೆಯ ಯೋಗ ಪ್ರದರ್ಶನವನ್ನು ನೀಡಲಿದ್ದಾರೆಂದು ತಿಳಿಸಿದರು. ಯೋಗಪಟು ಸಿಂಚನಳ ತಾಯಿ ರೇಣುಕಾ ಅವರು ಮಾತನಾಡಿ, ಈ ಬಾರಿ ಸಿಂಚನ ಖಂಡಪೀಡಾಸನ ಭಂಗಿಯಲ್ಲಿ ಒಂದು ನಿಮಿಷ ಸಮ ಸ್ಥಿತಿಯಲ್ಲಿ ಇರುವ ಮೂಲಕ ವಿಶ್ವದಾಖಲೆಯ ಪ್ರಯತ್ನ ನಡೆಸಲಿದ್ದು, ಧನುರಾಸನದಲ್ಲಿ ಒಂದು ನಿಮಿಷಕ್ಕೆ 15 ಬಾರಿ ಸುತ್ತು ಹೊಡೆಯುವ ಹಾಗೂ ಡಿಂಬಾಸನದಲ್ಲಿ ಒಂದು ನಿಮಿಷಕ್ಕೆ 10 ಬಾರಿ ಸುತ್ತು ಹೊಡೆಯುವ ಯೋಗಾಸನ ಪ್ರದರ್ಶನ ಮಾಡುವ ಮೂಲಕ ವಿಶ್ವದಾಖಲೆ ಮಾಡಲು ಉದ್ದೇಶಿಸಿರುವುದಾಗಿ ಮಾಹಿತಿಯನ್ನಿತ್ತರು. ಸಿಂಚನಳ ಯೋಗ ಪ್ರದರ್ಶನ ಏಷ್ಯಾ ಹೆಡ್ ಗೋಲ್ಡನ್ ಬುಕ್ ಆಫ್ ವಲ್ರ್ಡ್ ರೆಕಾರ್ಡ್‍ನ ಮುಖ್ಯ ತೀರ್ಪುಗಾರರಾದ ಡಾ. ಮನೀಶ್ ವೈಶ್ನೋಯಿ ಉಪಸ್ಥಿತಿಯಲ್ಲಿ ನಡೆಯಲಿದೆಯೆಂದು ಮಾಹಿತಿ ನೀಡಿ, ಸಿಂಚನ ಈ ಹಿಂದೆ ‘ಡಿಂಬಾಸನ’ದಲ್ಲಿ 30 ನಿಮಿಷ 5 ಸೆಕೆಂಡ್‍ಗಳ ಕಾಲ ಸಮಸ್ಥಿತಿಯಲ್ಲಿ ಇರುವ ಮೂಲಕ ವಿಶ್ವದಾಖಲೆ ಮಾಡಿದ್ದಾಳೆÉ. ಅದರ ಪ್ರಮಾಣ ಪತ್ರವನ್ನು ಈ ಸಮಾರಂಭದಲ್ಲಿ ನೀಡಲಿದ್ದಾರೆ. ಇಲ್ಲಿಯವರೆಗೆ ಈಕೆ 9 ವಿಶ್ವ ದಾಖಲೆಯ ಯೋಗ ಪ್ರದರ್ಶನ ನೀಡಿದ್ದು, ಇದರಲ್ಲಿ ಏಳು ವಿಶ್ವದಾಖಲೆಗೆ ಸೇರ್ಪಡೆಯಾಗಿದೆಯೆಂದು ಹೆಮ್ಮೆಯಿಂದ ನುಡಿದರು. ಯೋಗ ಶಿಕ್ಷಕ ಕೆ.ಕೆ.ಮಹೇಶ್ ಕುಮಾರ್ ಮಾತನಾಡಿ, ಬಿಜಿಎಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಸಿಂಚನ ಕೊಡಗಿನ ಅಪರೂಪದ ಯೋಗ ಪ್ರತಿಭೆ. ಈಕೆ ಇದೀಗ ಮತ್ತೊಂದು ಯೋಗಾಸನದ ಮೂಲಕ ವಿಶ್ವದಾಖಲೆ ಮಾಡಲು ಮುಂದಾಗಿರುವುದಾಗಿ ತಿಳಿಸಿದರು. :: ಕಾರ್ಯಕ್ರಮ :: ಮದೆನಾಡಿನ ಬಿಜಿಎಸ್ ವಿದ್ಯಾಸಂಸ್ಥೆಯಲ್ಲಿ ಅ.28 ರಂದು ಬೆಳಗ್ಗೆ 10.30 ಗಂಟೆಗೆ ಶ್ರೀ ಆದಿ ಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ, ಶ್ರೀ ಸೋಮೇಶ್ವರನಾಥ ಸ್ವಾಮೀಜಿಗಳ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ವಹಿಸಲಿದ್ದು, ಕಾರ್ಯಕ್ರಮವನ್ನು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಲಿದ್ದಾರೆ. ಏಷ್ಯಾ ಹೆಡ್ ಗೋಲ್ಡನ್ ಬುಕ್ ಆಫ್ ರೆಕಾರ್ಡ್‍ನ ಮುಖ್ಯ ತೀರ್ಪುಗಾರರಾದ ಡಾ.ಮನೀಶ್ ವೈಶ್ನೋಯಿ ಉಪಸ್ಥಿತರಿರಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪಂಚಾಯ್ತಿ ಸಿಇಒ ಆನಂದ್ ಪ್ರಕಾಶ್ ಮೀನಾ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಸವರಾಜು, ಮಡಿಕೆರಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಉಪಸ್ಥಿತರಿರಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಯೋಗ ಪಟು ಸಿಂಚನ, ತಂದೆ ಕೀರ್ತಿ ಕುಮಾರ್, ಬಿಜಿಎಸ್ ಶಾಲೆಯ ಆಡಳಿತಾಧಿಕಾರಿ ಸುಧಾಕರ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಕಸಾಪ ಸಂತಾಪ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.15 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯಕಾರಿ ಮಂಡಳಿಯ ಸದಸ್ಯ, ಕೊಡಗು ಜಿಲ್ಲಾ…

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.