Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಕಾವೇರಿ ಜಾಗೃತಿ ರಥಯಾತ್ರೆ : 178ನೇ ವಿಶೇಷ ಮಹಾಆರತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಕಾವೇರಿ ಜಾಗೃತಿ ರಥಯಾತ್ರೆ : 178ನೇ ವಿಶೇಷ ಮಹಾಆರತಿ*

ಅಕ್ಟೋಬರ್ 27, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ  ಅ.27 NEWS DESK : ನಾಗಾಲೋಟದ ಅಭಿವೃದ್ಧಿಯ ನಡುವೆ ಪರಿಸರದಲ್ಲಿ ಏರುಪೇರು ಆಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರು ಹಾಗೂ ಕಾವೇರಿ ರಿವರ್ ಸೇವಾ ಟ್ರಸ್ಟ್ ಮಾರ್ಗದರ್ಶಕರಾದ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು. ಕಾವೇರಿ ನದಿ ಸ್ವಚ್ಛತಾ ಆಂದೋಲನ ಮತ್ತು ಅಖಿಲ ಭಾರತೀಯ ಸನ್ಯಾಸಿ ಸಂಘ ಆಶ್ರಯದಲ್ಲಿ ಕುಶಾಲನಗರದಲ್ಲಿ ಸ್ವಚ್ಛ ಕಾವೇರಿಗಾಗಿ 15ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ ಮತ್ತು 178ನೆಯ ವಿಶೇಷ ಮಹಾ ಆರತಿ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ವ್ಯಾಪಾರ ವಹಿವಾಟು ಮಾಡುವ ಕಾಯಕದ ಸಂದರ್ಭ ಪರಿಸರಕ್ಕೆ ಯಾವುದೇ ರೀತಿಯ ಹಾನಿ ಉಂಟಾಗದಂತೆ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕಾಗಿದೆ ಎಂದರು. ನೆಮ್ಮದಿ ಮತ್ತು ಆರೋಗ್ಯಕರ ಬದುಕಿಗೆ ನೀರಿನ ಅವಲಂಬನೆಯ ಅಗತ್ಯತೆ ಇದ್ದು ಯಾವುದೇ ಸಂದರ್ಭ ಜಲಮೂಲಗಳು ನಾಶವಾಗದಂತೆ ಎಚ್ಚರ ವಹಿಸಬೇಕು. ಯೋಜನೆಗಳು ಅಭಿವೃದ್ಧಿ ವೈಜ್ಞಾನಿಕವಾಗಿ ನಡೆಯುವ ಮೂಲಕ ಪರಿಸರ ಜಾಗೃತಿ ಅಗತ್ಯ ಎಂದು ಸ್ವಾಮೀಜಿ ಹೇಳಿದರು.
ಮುಂದಿನ ಜನಾಂಗಕ್ಕೆ ಉತ್ತಮ ಪರಿಸರವನ್ನು ಹಸ್ತಾಂತರ ಮಾಡುವ ಕೆಲಸ ಎಲ್ಲರದ್ದಾಗಿದೆ ಎಂದರು. ಸ್ವಚ್ಛ ಕಾವೇರಿಗಾಗಿ ತಲಕಾವೇರಿ ಕ್ಷೇತ್ರದಿಂದ ಪೂಂಪ್ ಹಾರ್ ತನಕ ಕಾವೇರಿ ಜಾಗೃತಿ ರಥಯಾತ್ರೆ ಹಮ್ಮಿಕೊಂಡಿರುವ ಅಖಿಲ ಭಾರತೀಯ ಸನ್ಯಾಸಿ ಸಂಘ ಮತ್ತು ಕಾವೇರಿ ನದಿ ಸ್ವಚ್ಛತಾ ಆಂದೋಲನದ ಯಾತ್ರೆಗೆ ಶುಭ ಕೋರಿದ ಸ್ವಾಮೀಜಿಗಳು ನಿರಂತರ ಕಾರ್ಯಕ್ರಮಗಳ ಮೂಲಕ ಸ್ವಚ್ಛ ಕಾವೇರಿಯನ್ನು ಮತ್ತೆ ಕಾಣಲು ಸಾಧ್ಯ ಎಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಿಪಿ ಸಹಿದರು ಮಾತನಾಡಿ ಅಭಿವೃದ್ಧಿಯ ನಡುವೆ ಪ್ರಕೃತಿಯ ಬಗ್ಗೆ ಕಾಳಜಿ ಮರೆಯುವಂತಿಲ್ಲ ನದಿಗಳೊಂದಿಗೆ ಭಾವನಾತ್ಮಕ ಸಂಬಂಧ ಹೊಂದುವಂತಾಗಬೇಕು ಬದುಕಿಗೆ ಆಶ್ರಯ ಆಧಾರವಾಗಿರುವ ನದಿಗಳನ್ನು ಆರಾಧಿಸುವ ಮೂಲಕ ಸಂರಕ್ಷಣೆ ಸಾಧ್ಯ ಎಂದು ಅವರು ಹೇಳಿದರು. ನದಿ ದಂಡೆಗಳಲ್ಲಿ ನಾಗರೀಕತೆ ಉದಯವಾಗಿದ್ದು ಯಾವುದೇ ಸಂದರ್ಭ ನದಿ ಜಲಮೂಲಗಳಿಗೆ ಹಾನಿಯಾಗದಂತೆ ಎಚ್ಚರವಹಿಸಬೇಕು ಎಂದು ಹೇಳಿದರು. ಕಳೆದ ಹಲವು ವರ್ಷಗಳಿಂದ ನದಿ ಸ್ವಚ್ಛತೆಯ ನಿಟ್ಟಿನಲ್ಲಿ ಜನರಿಗೆ ಅರಿವು ಮೂಡಿಸುತ್ತಿರುವ ಕಾವೇರಿ ಮಹಾ ಆರತಿ ಬಳಗ ಮತ್ತು ಸ್ವಚ್ಛ ಕಾವೇರಿಗಾಗಿ ನಡೆಯುತ್ತಿರುವ ಕಾವೇರಿ ಜಾಗೃತಿ ರಥಯಾತ್ರೆಯ ಬಗ್ಗೆ ಶಶಿಧರ್ ಶ್ಲಾಘನೆ ವ್ಯಕ್ತಪಡಿಸಿದರು. ಅಖಿಲ ಭಾರತೀಯ ಸನ್ಯಾಸಿ ಸಂಘದ ಪ್ರಮುಖರಾದ ಸ್ವಾಮಿ ಶಿವರಾಮನಂದ ಅವರು ಕಳೆದ 15 ವರ್ಷಗಳ ಕಾಲದಿಂದ ನಿರಂತರವಾಗಿ ಭಾರತದ ನದಿಗಳ ಸಂರಕ್ಷಣೆ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸ ನಡೆಯುತ್ತಿದೆ ಕಾವೇರಿ ನದಿ ಸಂರಕ್ಷಣೆಗಾಗಿ ಕಳೆದ 15 ವರ್ಷಗಳಿಂದ ತಲಕಾವೇರಿಯಿಂದ ಕಾವೇರಿ ಜಾಗೃತಿ ರಥಯಾತ್ರೆ ನಡೆಯುತ್ತಿದೆ ಎಂದು ಹೇಳಿದರು. ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಕುಶಾಲನಗರ ಪುರಸಭೆ ಅಧ್ಯಕ್ಷರಾದ ಜಯಲಕ್ಷ್ಮಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕರಾದ ಲೀಲಾವತಿ ಫಾರಂಪರಿಕ ವೈದ್ಯರಾದ ಸುಮನ ಮಳಲಗದ್ದೆ, ಸ್ವಚ್ಛತಾ ಆಂದೋಲನ ಹಾಸನ ಜಿಲ್ಲಾ ಸಂಚಾಲಕರಾದ ಎಂ ಎನ್ ಕುಮಾರಸ್ವಾಮಿ, ಕುಶಾಲನಗರ ಕೊಡವ ಸಮಾಜದ ಅಧ್ಯಕ್ಷರಾದ ವಾಂಚೀರ ಮನು ನಂಜುಂಡ, ಕುಶಾಲನಗರ ಗೌಡ ಸಮಾಜದ ಅಧ್ಯಕ್ಷರಾದ ಚಿಲ್ಲನ ಗಣಿ ಪ್ರಸಾದ್, ಆರ್ಯವೈಶ್ಯ ಮಂಡಳಿ ಅಧ್ಯಕ್ಷರಾದ ಬಿ ಆರ್ ನಾಗೇಂದ್ರ ಪ್ರಸಾದ್, ಶ್ರೀ ಗಣಪತಿ ದೇವಾಲಯ ಪ್ರಧಾನ ಅರ್ಚಕರಾದ ಆರ್ ಕೆ ನಾಗೇಂದ್ರ ಬಾಬು, ಮಹಿಳಾ ಭಜನಾ ಮಂಡಳಿಯ ಪ್ರಮುಖರಾದ ಪದ್ಮ ಪುರುಷೋತ್ತಮ್ ಅವರುಗಳು ಪಾಲ್ಗೊಂಡು ಯಾತ್ರೆಗೆ ಶುಭ ಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ರಾಜ್ಯ ಸಂಚಾಲಕ ಎಂ ಎನ್ ಚಂದ್ರಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭ ಕುಶಾಲನಗರ ಭಜನಾ ಮಂಡಳಿ ಸದಸ್ಯರಿಂದ ಕುಂಕುಮಾರ್ಚನೆ, ಸಹಸ್ರ ಲಲಿತ ನಾಮ ಸಂಕೀರ್ತನೆ ನಡೆಯಿತು. ಅರ್ಚಕರಾದ ಕೃಷ್ಣಮೂರ್ತಿ ಭಟ್ ಅವರ ನೇತೃತ್ವದಲ್ಲಿ ಕಾವೇರಿಗೆ 178 ನೆಯ ವಿಶೇಷ ಮಹಾ ಆರತಿ ಕಾರ್ಯಕ್ರಮ ಮತ್ತು ಕಾವೇರಿ ಮೂರ್ತಿಗೆ ಅಷ್ಟಾಭಿಷೇಕ ನಡೆಯಿತು. ಈ ಸಂದರ್ಭ ಕಾವೇರಿ ರಿವರ್ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮಂಡೆಪಂಡ ಬೋಸ್ ಮೊಣ್ಣಪ್ಪ, ನಮಾಮಿ ಕಾವೇರಿ ಜಿಲ್ಲಾ ಅಧ್ಯಕ್ಷರಾದ ವನಿತಾ ಚಂದ್ರಮೋಹನ್ ಆರತಿ ಬಳಗದ ಪ್ರಮುಖರಾದ ಧರಣಿ ಸೋಮಯ್ಯ, ಚೈತನ್ಯ ಸಿ ಮೋಹನ್,ಬಿ ಜೆ ಅಣ್ಣಯ್ಯ, ಕೊಡಗನ ಹರ್ಷ, ಪುರಸಭೆ ಸದಸ್ಯರಾದ ಡಿ ಕೆ ತಿಮ್ಮಪ್ಪ, ವಿ ಎಸ್ ಆನಂದಕುಮಾರ್, ಮಾಜಿ ಸೈನಿಕರ ಸಂಘದ ಎಳ್ತಂಡ ರಂಜಿತ್, ಅಖಿಲ ಭಾರತ ಸನ್ಯಾಸಿ ಸಂಘದ ಪ್ರಮುಖರು, ಮಹಿಳಾ ಭಜನಾ ಮಂಡಳಿ ಮತ್ತು ಕಾವೇರಿ ಆರತಿ ಬಳಗ ಸದಸ್ಯರು ಇದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.