
ಮಡಿಕೇರಿ ಅ.27 NEWS DESK : ಹುದಿಕೇರಿ ಮಾಜಿ ಸೈನಿಕರ ಸಂಘದಿಂದ ದಕ್ಷಿಣ ಕೊಡಗಿನ ಅಂಜಿಗೇರಿ ನಾಡ್‍ನ ಹುದಿಕೇರಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಅಮರ್ ಜವಾನ್ ಸ್ಮಾರಕ’ ಮತ್ತು ಧ್ವಜ ಸ್ತಂಭವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಹುತಾತ್ಮ ಯೋಧರಿಗೆ ಪುಷ್ಪ ನಮನ ಸಲ್ಲಿಸಿದರು.









