


ಮಡಿಕೇರಿ ಅ.28 NEWS DESK : ಕೋಕೇರಿ ಕ್ರಿಕೆಟ್ ಕ್ಲಬ್ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಿಸಲಾಯಿತು. ಕೋಕೇರಿ ಕ್ರಿಕೆಟ್ ಕ್ಲಬ್‍ನ ಅಧ್ಯಕ್ಷ ಸದಸ್ಯರು ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿದರು. ಈ ಸಂದರ್ಭ ಶಾಲಾ ಶಿಕ್ಷಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಕ್ಲಬ್‍ನ ಅಧ್ಯಕ್ಷರು ಹಾಗೂ ಸದಸ್ಯರಿಗೆ ಶಾಲೆಯ ವತಿಯಿಂದ ಧನ್ಯವಾದ ಸಲ್ಲಿಸಲಾಯಿತು.









