
ಮಡಿಕೇರಿ ಅ.28 NEWS DESK : ಕುಶಾಲನಗರದ ಬಸವನಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಆಟದ ಮೈದಾನದಲ್ಲಿ ಸ್ಥಳೀಯ ಯುವರಿಂದ ಸ್ವಚ್ಛತಾ ಶ್ರಮದಾನ ನಡೆಯಿತು. ಶಾಲೆಯ ವಾಲಿಬಾಲ್ ನೆಟ್ ಕಂಬಗಳು ಶಿಥಿಲವಾಗಿ ವಿದ್ಯಾರ್ಥಿಗಳಿಗೆ ಆಟವಾಡಲು ತೊಂದರೆಯಾಗುತ್ತಿತ್ತು. ಇದನ್ನು ಗಮನಿಸಿದ ಸ್ಥಳೀಯ ಯುವಕರ ತಂಡ ಹಳೆ ಕಂಬಗಳನ್ನು ತೆರೆವುಗೊಳಿಸಿ ಹೊಸ ಕಂಬಗಳನ್ನು ಅಳವಡಿಸಿದರು. ನಂತರ ಮೈದಾನವನ್ನು ಸ್ವಚ್ಛಗೊಳಿಸಿದರು. ಯುವಕರ ತಂಡದ ಸೇವಾ ಮನೋಭಾವಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ, ಧನ್ಯವಾದ ತಿಳಿಸಿದ್ದಾರೆ.









