Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ನಿಂದ ರಾಷ್ಟ್ರ ಪ್ರಶಸ್ತಿ ವಿಜೇತ ‘ಕಂದೀಲು’ ಚಿತ್ರದ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ನಿಂದ ರಾಷ್ಟ್ರ ಪ್ರಶಸ್ತಿ ವಿಜೇತ ‘ಕಂದೀಲು’ ಚಿತ್ರದ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಗೆ ಸನ್ಮಾನ*

ಅಕ್ಟೋಬರ್ 28, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.28 NEWS DESK  : ರಾಷ್ಟ್ರ ಪ್ರಶಸ್ತಿ ವಿಜೇತ ‘ಕಂದೀಲು’ ಕನ್ನಡ ಚಲನಚಿತ್ರದ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರನ್ನು ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿತು. ಮೇಕೇರಿಯ ಕೂರ್ಗ್ ಗವದನ ರೆಸಾರ್ಟ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಯಶೋಧ ಪ್ರಕಾಶ್ ಅವರು ನನ್ನ ನಿರ್ದೇಶನದ ‘ಕಂದೀಲು’ ಕನ್ನಡ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ದೊರತ್ತಿರುವುದು ಸಂತೋಷ ಮತ್ತು ಹೆಮ್ಮೆ ಎನಿಸಿದೆ. ಈ ಪ್ರಶಸ್ತಿ ಸಿನಿರಂಗದಲ್ಲಿ ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು. ಒಂದು ಕುಟುಂಬದಂತೆ ಕಾರ್ಯನಿರ್ವಹಿಸುತ್ತಿರುವ ಸಂಸ್ಕøತಿ ಸಿರಿ ಬಳಗ ಟ್ರಸ್ಟ್ ಕಲಾವಿದರನ್ನು ಸನ್ಮಾನಿಸಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲೂ ಟ್ರಸ್ಟ್ ಉತ್ತಮ ಕಾರ್ಯಚಟುವಟಿಕೆಗಳೊಂದಿಗೆ ಮತ್ತಷ್ಟು ಬೆಳೆಯಲಿ ಎಂದು ಶುಭ ಹಾರೈಸಿದರು. ಟ್ರಸ್ಟ್ ನ ಗೌರವಾಧ್ಯಕ್ಷ ಹಾಗೂ ಸರಕಾರಿ ಆಸ್ಪತ್ರೆಯ ತುರ್ತು ಘಟಕದ ಮುಖ್ಯಸ್ಥ ಡಾ.ಕೋಲೆಯಂಡ ಮೋಹನ್ ಅಪ್ಪಾಜಿ ಅವರು ಮಾತನಾಡಿ ಏಳುಬೀಳಿನ ಸಿನಿಮಾರಂಗದಲ್ಲಿ ಚಿತ್ರ ನಿರ್ಮಾಣ ಕಷ್ಟದ ಕೆಲಸವಾಗಿದೆ. ಆದರೆ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ಕೊಡಗು ಜಿಲ್ಲೆಯ ಗ್ರಾಮ ಮಟ್ಟದಿಂದ ರಾಷ್ಟ್ರೀಯ ಮಟ್ಟದ ಪ್ರಶಸ್ತಿಯವರೆಗೂ ಬೆಳೆದು ನಿಂತಿರುವುದು ಮಹಾ ಸಾಧನೆಯೇ ಆಗಿದೆ ಎಂದು ಬಣ್ಣಿಸಿದರು. ಹಲವು ಸಿನಿಮಾಗಳನ್ನು ನಿರ್ಮಿಸಿ ನಿರ್ದೇಶಿಸಿರುವ ಯಶೋಧ ಅವರು ‘ಕಂದೀಲು’ ಕನ್ನಡ ಸಿನಿಮಾಕ್ಕೆ ರಾಷ್ಟ್ರಪತಿಗಳಿಂದ ರಾಷ್ಟ್ರ ಪ್ರಶಸ್ತಿಯನ್ನು ಸ್ವೀಕರಿಸಿರುವುದು ಕೊಡಗಿಗೂ ಹೆಮ್ಮೆ ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಸರಕಾರಿ ಅಭಿಯೋಜಕ ಶ್ರೀಧರನ್ ನಾಯರ್ ಅವರು ಸಂಘ ಸಂಸ್ಥೆಗಳು ಸಾಧಕರನ್ನು ಸನ್ಮಾನಿಸಿ ಉತ್ತೇಜಿಸುವ ಕಾರ್ಯಗಳನ್ನು ಮಾಡಬೇಕಾಗುತ್ತದೆ. ಸಮಾಜಮುಖಿವಾಗಿ ಕಾರ್ಯ ನಿರ್ವಹಿಸುತ್ತಿರುವ ಟ್ರಸ್ಟ್ ಈ ರೀತಿಯ ಉತ್ತಮ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಶ್ಲಾಘನೀಯವೆಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಕøತಿ ಸಿರಿ ಬಳಗ ಟ್ರಸ್ಟ್ ನ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಅವರು ಯಾವುದೇ ಕಾರ್ಯವನ್ನು ಶ್ರದ್ಧೆ ಮತ್ತು ಕಠಿಣ ಪರಿಶ್ರಮದಿಂದ ಮಾಡಿದರೆ ಅರ್ಹತೆ ತಾನಾಗಿಯೇ ಬರುತ್ತದೆ ಎನ್ನುವುದಕ್ಕೆ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕಿ ಯಶೋಧ ಪ್ರಕಾಶ್ ಅವರೇ ಉತ್ತಮ ಸಾಕ್ಷಿಯಾಗಿದ್ದಾರೆ ಮತ್ತು ಎಲ್ಲರಿಗೂ ಮಾದರಿ ಮಹಿಳೆಯಾಗಿದ್ದಾರೆ ಎಂದು ಬಣ್ಣಿಸಿದರು. ತಮ್ಮ ವೃತ್ತಿ ಜೀವನದ ಜೊತೆಯಲ್ಲಿ ಸಿನಿಮಾ ತಯಾರಿಕೆಯಲ್ಲಿ ಯಶೋಧ ಪ್ರಕಾಶ್ ಅವರು ತೋರುವ ದಕ್ಷತೆ ಮತ್ತು ಕಾರ್ಯವೈಖರಿಯನ್ನು ನಾನು ಹತ್ತಿರದಿಂದ ನೋಡಿದ್ದೇನೆ. ರಾಷ್ಟ್ರ ಪ್ರಶಸ್ತಿಯನ್ನು ಪಡೆಯಲು ಇವರು ಅರ್ಹ ನಿರ್ದೇಶಕರು ಎಂದು ಹರ್ಷ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಸಿನಿಮಾಗಳನ್ನು ನಿರ್ಮಿಸಿ, ನಿರ್ದೇಶಿಸಿ ಯಶಸ್ಸಿನ ಉತ್ತುಂಗಕ್ಕೆ ಏರಲಿ ಎಂದು ಶುಭ ಹಾರೈಸಿದರು. *ಸನ್ಮಾನ* ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕಿ ಯಶೋಧ ಪ್ರಕಾಶ್ ಅವರನ್ನು ಈರಮಂಡ ಹರಿಣಿ ವಿಜಯ್, ಡಾ.ಕೋಲೆಯಂಡ ಮೋಹನ್ ಅಪ್ಪಾಜಿ ಹಾಗೂ ಶ್ರೀಧರನ್ ನಾಯರ್ ಅವರು ಸನ್ಮಾನಿಸಿ ಗೌರವಿಸಿದರು. ಇದೇ ಸಂದರ್ಭ ಭಾರತೀಯ ವೈದ್ಯಕೀಯ ಸಂಸ್ಥೆ(ಐಎಂಎ)ಯ ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಡಾ.ಮೋಹನ್ ಅಪ್ಪಾಜಿ ಅವರನ್ನು ಟ್ರಸ್ಟ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಮಂಡ್ಯದಲ್ಲಿ ನಡೆದ ವೈದ್ಯಕೀಯ ರಾಜ್ಯ ಸಮಾವೇಶದಲ್ಲಿ ಆಕರ್ಷಕ ಮತ್ತು ಸಾಂಪ್ರದಾಯಿಕ ನೃತ್ಯ ಕಾರ್ಯಕ್ರಮ ನೀಡಿದ ಟ್ರಸ್ಟ್ ನ ಸದಸ್ಯರಿಗೆ ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಉಪಾಧ್ಯಕ್ಷರಾದ ನಿಶಾ ಮೋಹನ್, ಟ್ರಸ್ಟಿ ಕೆ.ಎಂ.ಗಣೇಶ್, ಖಜಾಂಚಿ ಕೂಡಂಡ ದೀಪ ಕಾವೇರಪ್ಪ, ಸದಸ್ಯರುಗಳಾದ ಎಂ.ಪಿ.ಕೃಷ್ಣರಾಜು, ಡೆನ್ನಿ ಮೋರಸ್, ಅನಿಲ್ ಕೃಷ್ಣಾನಿ, ಪ್ರಮಿತ, ಮಂಜುಳಾ ಶಿವಕುಮಾರ್, ರಾಧಾ, ಸುಚಿತ ಕಾವೇರಪ್ಪ, ಮೈನಾ, ಸ್ವೀಟಿ ಹಾಗೂ ನೃತ್ಯ ಬಳಗದ ಸದಸ್ಯರುಗಳು ಉಪಸ್ಥಿತರಿದ್ದರು. ಅಪ್ಪಚಂಡ ಸುಚಿತ ಪ್ರಾರ್ಥಿಸಿ, ಈರಮಂಡ ವಿಜಯ್ ಸ್ವಾಗತಿಸಿ, ಕೂಡಂಡ ದೀಪ ಕಾವೇರಪ್ಪ ವಂದಿಸಿ, ಕೋಲೆಯಂಡ ನಿಶಾ ಮೋಹನ್ ಕಾರ್ಯಕ್ರಮ ನಿರೂಪಿಸಿದರು. ಮಂಜುಳಾ ತಂಡದಿಂದ ನಡೆದ ಭಜನೆ ಹಾಡು ಹಾಗೂ ಮಕ್ಕಳ ನೃತ್ಯಗಳು ಗಮನ ಸೆಳೆದವು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.