Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಪಡಿತರ ಕಾರ್ಡುಗಳ ಪರಿಷ್ಕರಣಾ ಕಾರ್ಯ : ಅವಕಾಶ ಸದ್ಬಳಕೆಗೆ ಧರ್ಮಜ ಉತ್ತಪ್ಪ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಪಡಿತರ ಕಾರ್ಡುಗಳ ಪರಿಷ್ಕರಣಾ ಕಾರ್ಯ : ಅವಕಾಶ ಸದ್ಬಳಕೆಗೆ ಧರ್ಮಜ ಉತ್ತಪ್ಪ ಸಲಹೆ*

ಅಕ್ಟೋಬರ್ 28, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.28 NEWS DESK : ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಕಾರ್ಡುಗಳ ಪರಿಷ್ಕರಣಾ ಕಾರ್ಯ ನಡೆಯುತ್ತಿದ್ದು, ಈ ಅವಕಾಶವನ್ನು ಅರ್ಹರು ಬಳಸಿಕೊಳ್ಳುವಂತಾಗಬೇಕು ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ತಿತಿರ ಧರ್ಮಜ ಉತ್ತಪ್ಪ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಅರ್ಹರಿಗೆ ಬಿಪಿಎಲ್‍ನಿಂದ ಎಪಿಎಲ್‍ಗೆ ಪಡಿತರ ಚೀಟಿ ವರ್ಗಾವಣೆ ಆಗಿದ್ದಲ್ಲಿ, ಆಹಾರ ಇಲಾಖೆ ಅಥವಾ ತಾಲ್ಲೂಕಿನ ತಹಶೀಲ್ದಾರ್ ಕಚೇರಿಯ ಆಹಾರ ಶಿರಸ್ತೆದಾರರಿಗೆ ಮನವಿ ಸಲ್ಲಿಸುವಂತಾಗಬೇಕು. ಇದರಿಂದ ಪರಿಶೀಲಿಸಿ ಪುನಃ ಬಿಪಿಎಲ್ ಕಾರ್ಡ್ ವಿತರಿಸಲಿದ್ದಾರೆ. ಆ ನಿಟ್ಟಿನಲ್ಲಿ ಆಹಾರ ಇಲಾಖೆಯವರು ಅಗತ್ಯ ಜಾಗೃತಿ ಮೂಡಿಸುವಂತೆ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರು ನಿರ್ದೇಶನ ನೀಡಿದರು. ಅನ್ನಭಾಗ್ಯ ಯೋಜನೆಯಡಿ ಪ್ರತೀ ಫಲಾನುಭವಿಗೆ 10 ಕೆ.ಜಿ. ಅಕ್ಕಿ ವಿತರಣೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಸರ್ಕಾರ ಉದ್ದೇಶಿಸಿದೆ ಎಂದು ಧರ್ಮಜ ಉತ್ತಪ್ಪ ಅವರು ವಿವರಿಸಿದರು. ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕುಟುಂಬದ ಹಲವು ಬಡವರಿಗೆ ಎಪಿಎಲ್ ಕಾರ್ಡ್ ನೀಡಲಾಗಿದ್ದು, ಬಡವರಿಗೆ ಬಿಪಿಎಲ್ ಕಾರ್ಡ್ ವಿತರಿಸಬೇಕು. ಆ ನಿಟ್ಟಿನಲ್ಲಿ ಕ್ರಮವಹಿಸುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಆರ್ಥಿಕವಾಗಿ ಸಬಲರಾಗಿದ್ದಲ್ಲಿ ಅಂತಹ ಕುಟುಂಬಗಳನ್ನು ಗ್ರಾ.ಪಂ.ಮಟ್ಟದಲ್ಲಿ ಪರಿಶೀಲಿಸಬೇಕು. ಅದನ್ನು ಬಿಟ್ಟು ನಿಜವಾದ ಬಡವರಿಗೆ ಬಿಪಿಎಲ್ ಕಾರ್ಡ್ ಇಲ್ಲದಿರುವುದು ನೋವು ತರುತ್ತಿದೆ. ಆದ್ದರಿಂದ ಅರ್ಹರಿಗೆ ಬಿಪಿಎಲ್ ಕಾರ್ಡ್ ತಲುಪಿಸಬೇಕು ಎಂದು ಸೂಚಿಸಿದರು. ಈ ಸಂಬಂಧ ಸರ್ಕಾರಕ್ಕೂ ಸಹ ಪತ್ರ ಬರೆಯಲು ಸಭೆಯಲ್ಲಿ ನಿರ್ಧರಿಸಲಾಯಿತು. ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನ ಮತ್ತು ಪ್ರಗತಿ ಸಂಬಂಧ ಜಿಲ್ಲಾ ಮಟ್ಟದಲ್ಲಿ ಸಮ್ಮೇಳನ ಆಯೋಜಿಸಲಾಗುವುದು. ಸಮ್ಮೇಳನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಗ್ಯಾರಂಟಿ ಯೋಜನೆ ರಾಜ್ಯ ಅನುಷ್ಠಾನ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಹೀಗೆ ಹಲವರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಸಮ್ಮೇಳನ ನಡೆದಿದೆ ಎಂದು ತಿಳಿಸಿದರು. ಗ್ಯಾರಂಟಿ ಯೋಜನಾ ಜಿಲ್ಲಾ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಪಂಕಜ ಅವರು ಮಾತನಾಡಿ ತಿತಿಮತಿ ವ್ಯಾಪ್ತಿಯಲ್ಲಿ ಬೀದಿ ದೀಪ ಸರಿಪಡಿಸುವಂತಾಗಬೇಕು. ಜೊತೆಗೆ ವಿದ್ಯುತ್ ಪೂರೈಕೆ ಸಮರ್ಪಕವಾಗಿ ಪೂರೈಸಬೇಕು. ಹಾಗೆಯೇ ಹಳೇ ಕಂಬಗಳನ್ನು ಬದಲಿಸಿ ಹೊಸ ವಿದ್ಯುತ್ ಕಂಬ ಹಾಗೂ ವಿದ್ಯುತ್ ಪರಿವರ್ತಕ ಅಳವಡಿಸುವಂತೆ ಸಲಹೆ ಮಾಡಿದರು. ಮತ್ತೊಬ್ಬ ಸದಸ್ಯರಾದ ಜಾನ್ಸನ್ ಅವರು ಮಾತನಾಡಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಶೇಕಡವಾರು ಪ್ರಗತಿ ಹಾಗೂ ಜಿಲ್ಲೆಯ ಇಬ್ಬರು ಶಾಸಕರು ಅಭಿವೃದ್ಧಿಗೆ ಸರ್ಕಾರದ ಮಟ್ಟದಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸಿದ್ದಾರೆ. ಆದ್ದರಿಂದ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು. ಸದಸ್ಯರಾದ ಕಾಂತರಾಜು ಅವರು ಮಾತನಾಡಿ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಎಚ್ಚರ ವಹಿಸಬೇಕು. ಯಾರನ್ನು ಸಹ ಸತಾಯಿಸದೆ ಸರ್ಕಾರದ ಯೋಜನೆಗಳನ್ನು ತಲುಪಿಸುವಂತಾಗಬೇಕು ಎಂದು ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರು ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳನ್ನು ಮತ್ತಷ್ಟು ಪ್ರಗತಿ ಆಗಬೇಕು. ಜಿಲ್ಲೆಯಲ್ಲಿ ಶೇ.99 ರಷ್ಟು ಪ್ರಗತಿ ಸಾಧಿಸಲಾಗಿದ್ದು, ಇನ್ನೂ ಹೆಚ್ಚಿನ ಸಾಧನೆ ಮಾಡುವಂತಾಗಬೇಕು ಎಂದು ಸೂಚಿಸಿದರು. ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಗ್ರಾ.ಪಂ.ಮಟ್ಟದಲ್ಲಿ ನಾಮಫಲಕ ಅಳವಡಿಸುವಂತಾಗಬೇಕು. ಪ್ರತೀ ಗ್ರಾಮಕ್ಕೂ ಈಗಾಗಲೇ ಇರುವ ಮಾರ್ಗದಂತೆ ಸರಿಯಾಗಿ ಬಸ್ ಸಂಚಾರ ನಿರ್ವಹಣೆ ಮಾಡಬೇಕು ಎಂದು ಹೇಳಿದರು. ವಿರಾಜಪೇಟೆಯಿಂದ ಮೈಸೂರು ಬೆಂಗಳೂರು ಕಡೆಗೆ ರಾತ್ರಿ ವೇಳೆಯಲ್ಲಿ ಬಸ್ ಸಂಚರಿಸುವಂತಾಗಬೇಕು ಎಂದು ಕೋರಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರು ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಈ ಪಂಚ ಗ್ಯಾರಂಟಿ ಯೋಜನೆಗಳು ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳಾಗಿವೆ ಎಂದು ಹೇಳಿದರು. ಯುವನಿಧಿ ಕಾರ್ಯಕ್ರಮ ಅನುಷ್ಠಾನ ಸಂಬಂಧಿಸಿದಂತೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷರಿಗೆ ವರದಿ ನೀಡುವಂತೆ ಸೂಚಿಸಿದರು. ಉಪಾಧ್ಯಕ್ಷರಾದ ಶಾರಿ ಗಿರೀಶ, ಕೆ.ಸಿ.ಭೀಮಯ್ಯ, ನಾಸಿರ್ ಅವರು ಗ್ಯಾರಂಟಿ ಯೋಜನೆ ಅನುಷ್ಠಾನ ಸಂಬಂಧಿಸಿದಂತೆ ಹಲವು ವಿಷಯಗಳ ಕುರಿತು ಗಮನ ಸೆಳೆದರು. ಸದಸ್ಯರಾದ ಕುಟ್ಟಂಡ ಕೃಷ್ಣ, ಸುಂದರ, ಕೆ.ಎಂ.ಬಸೀರ್, ಮುಸ್ತಪ, ಕೆ.ಜಿ.ಪೀಟರ್, ಮಂದ್ರಿರ ಮೋಹನ್ ದಾಸ್, ಕಾಳೇಮಾಡ ಪ್ರಶಾಂತ್ ಅವರು ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನ ಸಂಬಂಧ ಹಲವು ವಿಚಾರಗಳ ಕುರಿತು ಗಮನ ಸೆಳೆದರು. ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಮಂಟೇಸ್ವಾಮಿ, ಸೆಸ್ಕ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿನಯ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಮಂಜುನಾಥ್, ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಈರಸಪ್ಪ ಅವರು ತಮ್ಮ ಇಲಾಖೆಗೆ ಸಂಬಂಧಿಸದಂತೆ ಗ್ಯಾರಂಟಿ ಯೋಜನೆ ಪ್ರಗತಿ ಸಂಬಂಧ ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.