
ವಿರಾಜಪೇಟೆ ಅ.29 NEWS DESK : ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಚಿತ್ರದುರ್ಗದ ಪತ್ರಿಕಾ ಭವನದಲ್ಲಿನ ಅಂಬೇಡ್ಕರ್ ಸಭಾಂಗಣದಲ್ಲಿ ನಡೆದ ಪತ್ರಕರ್ತರಿಗೆ ಕನ್ನಡ ಸಾಹಿತ್ಯಾಭಿರುಚಿ ಕಾರ್ಯಾಗಾರದಲ್ಲಿ ವಿರಾಜಪೇಟೆಯ ಸಾಹಿತಿಗಳು ಹಾಗೂ ಪತ್ರಕರ್ತರಾದ ರಜಿತ ಕಾರ್ಯಪ್ಪ ಅವರು ಭಾಗವಹಿಸಿದರು. ಕಾರ್ಯಾಗಾರದಲ್ಲಿ ಸಾಹಿತ್ಯಾಭಿರುಚಿ ಕುರಿತು ಮಾತನಾಡಿ ಸಂವಾದ ನಡೆಸಿದರು. ಇದೇ ಸಂದರ್ಭ ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಕಾರ್ಯಾಗಾರದ ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮುಕುಂದರಾಜ್, ನಿರ್ದೇಶಕರುಗಳಾದ ಮಮತಾ ಅರಸಿಕೆರೆ, ಪ್ರೋ. ಎಂ.ಅಬದುಲ್ ರೆಹಮಾನ್ ಪಾಷಾ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹಾಗೂ ಚಿತ್ರದುರ್ಗ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು, ಸದಸ್ಯರುಗಳು ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.









