Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲಾ ಮಟ್ಟದ ಆನ್ಸ್ ಫೆಸ್ಟ್ 2k25 : ಸಮಗ್ರ ಚಾಂಪಿಯನ್ ಟ್ರೋಫಿಯನ್ನು ಮುಡಿಗೇರಿಸಿಕೊಂಡ ಪೊನ್ನಂಪೇಟೆ ಕೂರ್ಗ್ ಇನ್ಸ್ಟಿಟ್ಯೂಟ್ ಪಿ.ಯು ಕಾಲೇಜು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಲ್ಲಾ ಮಟ್ಟದ ಆನ್ಸ್ ಫೆಸ್ಟ್ 2k25 : ಸಮಗ್ರ ಚಾಂಪಿಯನ್ ಟ್ರೋಫಿಯನ್ನು ಮುಡಿಗೇರಿಸಿಕೊಂಡ ಪೊನ್ನಂಪೇಟೆ ಕೂರ್ಗ್ ಇನ್ಸ್ಟಿಟ್ಯೂಟ್ ಪಿ.ಯು ಕಾಲೇಜು*

ಅಕ್ಟೋಬರ್ 29, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಅ.29 NEWS DESK : ವಿದ್ಯಾ ಸಂಸ್ಥೆಗಳ ನಡುವೆ ಪರಸ್ಪರ ಬಾಂಧವ್ಯ ಮೂಡಿದಾಗ ಮಾತ್ರ ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಸರ್ವತೋಮುಖ ಪ್ರಗತಿ ಸಾಧ್ಯ ಎಂದು ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೆ.ಫಾ.ಮದಲೈ ಮುತ್ತು ಅಭಿಪ್ರಾಯಪಟ್ಟರು. ಕಾಲೇಜಿನಲ್ಲಿ ಜಿಲ್ಲೆಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಎಕೋಸ್ ಆಫ್ ದಿ ಅರ್ಥ್ ದ್ಯೇಯದಡಿಯಲ್ಲಿ ಆನ್ಸ್ ಫೆಸ್ಟ್ 2k25 ನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾ ಸಂಸ್ಥೆಗಳು ಕಾರ್ಯಕ್ರಮವನ್ನು ಆಯೋಜಿಸಿ ಮತ್ತೊಂದು ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳನ್ನು ಪರಸ್ಪರ ಆಹ್ವಾನಿಸಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಸಂಸ್ಥೆಗಳ ನಡುವೆ ಪರಸ್ಪರ ಸಹಕಾರ, ಬಾಂಧವ್ಯ ಬೆಳೆಯುತ್ತದೆ ಎಂದರು. ಇಂದಿನ ಶಿಕ್ಷಣವು ವಿದ್ಯಾರ್ಥಿ ಕೇಂದ್ರೀತವಾಗಿದ್ದು, ನಮ್ಮ ವಿದ್ಯಾ ಸಂಸ್ಥೆಯು ಮೌಲ್ಯಧಾರಿತ ಶಿಕ್ಷಣಕ್ಕೆ ಮನ್ನಣೆಯನ್ನು ನೀಡುತ್ತಿದೆ ಎಂದರು. ವಿದ್ಯಾಸಂಸ್ಥೆಯ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಅಪಾರ ಎಂದು ಹೇಳಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಸರ್ವ ವಿದ್ಯಾರ್ಥಿಗಳಿಗೆ ಶುಭವನ್ನು ಕೋರಿದರು. ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ  ಪ್ರಾಸ್ತಾವಿಕವಾಗಿ ಮಾತನಾಡಿ, ಆನ್ಸ್ ಫೆಸ್ಟ್ 2k25 ಆರಂಭವಾಗಿದೆ ಎಂದು ಘೋಷಿಸಿದರು. ಉದ್ಘಾಟನಾ ಸಮಾರಂಭದ ಬಳಿಕ ನಿಗದಿಪಡಿಸಿದ ತರಗತಿಗಳಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಜಿಲ್ಲೆಯ ವಿವಿಧಡೆಗಳಿಂದ ಆಗಮಿಸಿದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಅಂತಿಮವಾಗಿ ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದು ಓವರಾಲ್ ಚಾಂಪಿಯನ್ಸ್ ಪಟ್ಟವನ್ನು ಪಡೆಯಿತು. ಮಡಿಕೇರಿಯ ಸಂತ ಮೈಕಲರ ಪದವಿ ಪೂರ್ವ ಕಾಲೇಜು ರನ್ನರ್ಸ್ ಟ್ರೋಫಿಯನ್ನು ಪಡೆದುಕೊಂಡರು. ಸಂಜೆ ನಡೆದಂತಹ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಟಿ ಹಾಗೂ ಗಾಯಕಿ ಬಟ್ಟಿಯಂಡ ಲಿಖಿತಾ ಮಾತನಾಡಿ, ವಿದ್ಯಾಸಂಸ್ಥೆಯಲ್ಲಿ ಆಯೋಜಿಸುವಂತಹ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಕಾಲೇಜಿನಲ್ಲಿ ಲಭ್ಯವಿರುವಂತಹ ಎಲ್ಲಾ ಅವಕಾಶಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ತಮ್ಮ ವ್ಯಕ್ತಿತ್ವ ವಿಕಸನವನ್ನು ಮಾಡಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ  ಮಾತನಾಡಿ, ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದು, ಗಮನಾರ್ಹ ವಿಚಾರವಾಗಿದೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಕೂಡ ವಿದ್ಯಾರ್ಥಿಗಳು ಗಮನವನ್ನು ನೀಡಿ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪದವಿ ಕಾಲೇಜಿನ ವ್ಯವಸ್ಥಾಪಕ ರೆ.ಫಾ.ಮದಲೈ ಮುತ್ತು, ಈ ಕಾರ್ಯಕ್ರಮವು ಸಂಪೂರ್ಣವಾಗಿ ಯಶಸ್ವಿಯಾಗಿದ್ದು, ವಿದ್ಯಾರ್ಥಿಗಳು ಭಾಗವಹಿಸುವುದರ ಮೂಲಕ ಒಂದು ಉತ್ತಮ ಅನುಭವವನ್ನು ಪಡೆದಿರುತ್ತಾರೆ. ಶಿಸ್ತನ್ನು ಮೈಗೂಡಿಸುವುದರ ಮೂಲಕ ಪೋಷಕರಿಗೂ ಹಾಗೂ ಸಂಸ್ಥೆಗೂ ಹೆಸರನ್ನು ತನ್ನಿ ಎಂದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನವನ್ನು ವಿತರಿಸಿದರು. ವೇದಿಕೆಯಲ್ಲಿ ಸಂತ ಅನ್ನಮ್ಮ ವಿದ್ಯಾ ಸಂಸ್ಥೆಗಳ ವ್ಯವಸ್ಥಾಪಕ ಹಾಗೂ ಪ್ರಧಾನ ಗುರುಗಳಾದ ರೆ.ಫಾ.ಜೇಮ್ಸ್ ಡೊಮಿನಿಕ್, ಸಹಾಯಕ ಗುರುಗಳಾದ ಫಾ. ಅಭಿಲಾಶ್, ಕಾಲೇಜಿನ ಐಕ್ಯೂ ಎಸಿ ಸಂಚಾಲಕಿ ಹೇಮ ಬಿ. ಡಿ., ಪ್ರಾಧ್ಯಾಪಕ ಅರ್ಜುನ್, ವಿದ್ಯಾರ್ಥಿ ಸಂಘದ ನಾಯಕ ಕೃಷ್ಣ ಶಾಸ್ತ್ರಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸೆಂಟ್ ಆನ್ಸ್ ಪದವಿ ಕಾಲೇಜುವಿನ ಉಪನ್ಯಾಸಕರು, ವಿವಿಧ ಕಾಲೇಜುಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು. :: ಪ್ರಶಸ್ತಿ ವಿಜೇತ ತಂಡಗಳ ವಿವರ ::  ಒಟ್ಟು ಹತ್ತು ಬಗೆಯ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು ಅದರಲ್ಲಿ ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಪಿಯು ಕಾಲೇಜು ಚಾಂಪಿಯನ್ ಆಗಿ ಹೊರ ಹೊಮ್ಮಿ ಸಮಗ್ರ ಪ್ರಶಸ್ತಿಯ ಜೊತೆಗೆ ಟ್ರೋಫಿ, 15,555 ರೂ.ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ಪಡೆದುಕೊಂಡಿತು. ಮಡಿಕೇರಿಯ ಸಂತ ಮೈಕಲರ ಪಿ ಯು ಕಾಲೇಜು ರನ್ನರ್ಸ್ ಆಗಿ ಹೊರಹೊಮ್ಮಿ 11,111 ರೂ ನಗದು, ಟ್ರೋಫಿ ಹಾಗೂ ಪ್ರಶಸ್ತಿ ಪತ್ರಗಳನ್ನು ಪಡೆದುಕೊಂಡಿತು. ವೈಯಕ್ತಿಕ ಸ್ಪರ್ಧೆಗಳಲ್ಲಿ ಟ್ರಸರ್ ಹಂಟ್ ನಲ್ಲಿ ಸಿದ್ದಾಪುರ ದ ಸೆಂಟ್ ಆನ್ಸ್ ಪಿ ಯು ಕಾಲೇಜು ವಿಜೇತ, ಪೆನ್ಸಿಲ್ ಸ್ಕೆಚ್ ನಲ್ಲಿ ಕೂರ್ಗ್ ಇನ್ಸ್ಟಿಟ್ಯೂಟ್ ಕಾಲೇಜು (ಪ್ರ ), ಕುಶಾಲನಗರ ವಿವೇಕಾನಂದ ಪಿ ಯು ಕಾಲೇಜು (ದ್ವಿ ), ರಾಂಪ್ ವಾಕ್ ನಲ್ಲಿ ಕೂರ್ಗ್ ಇನ್ಸ್ಟಿಟ್ಯೂಟ್ ಕಾಲೇಜು (ಪ್ರ), ವಿರಾಜಪೇಟೆ ಸಂತ ಅನ್ನಮ್ಮ ಪಿ ಯು ಕಾಲೇಜು (ದ್ವಿ), ಗೇಮಿಂಗ್ ನಲ್ಲಿ ಮಡಿಕೇರಿ ಸಂತ ಮೈಕಲರ ಕಾಲೇಜು (ಪ್ರ) ಕಾವೇರಿ ಕಾಲೇಜು ವಿರಾಜಪೇಟೆ (ದ್ವಿ), ಬೆಸ್ಟ್ ಔಟ್ ಓಫ್ ವೇಸ್ಟ್ ನಲ್ಲಿ ಕೂರ್ಗ್ ಇನ್ಸ್ಟಿಟ್ಯೂಟ್ ಕಾಲೇಜು (ಪ್ರ) ಮಡಿಕೇರಿ ಸಂತ ಮೈಕಲರ ಕಾಲೇಜು (ದ್ವಿ), ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಸಿದ್ದಾಪುರ ಸಂತ ಅನ್ನಮ್ಮ ಕಾಲೇಜು (ಪ್ರ), ಸಂತ ಮೈಕಲರ ಕಾಲೇಜು (ದ್ವಿ ), ರೀಲ್ ಮೇಕಿಂಗ್ ನಲ್ಲಿ ವಿವೇಕಾನಂದ ಪಿ ಯು ಕಾಲೇಜು (ಪ್ರ) ಕೂರ್ಗ್ ಇನ್ಸ್ಟಿಟ್ಯೂಟ್ ಕಾಲೇಜು (ದ್ವಿ), ಕ್ವಿಜ್ ನಲ್ಲಿ ಗೋಣಿಕೊಪ್ಪಲು ಕಾಲ್ಸ್ ಕಾಲೇಜು (ಪ್ರ), ಕೂರ್ಗ್ ಇನ್ಸ್ಟಿಟ್ಯೂಟ್ ಕಾಲೇಜು (ದ್ವಿ), ಸ್ಪೆಲ್ ಬಿ ನಲ್ಲಿ ಕಾಲ್ಸ್ ಕಾಲೇಜು (ಪ್ರ), ಕೂರ್ಗ್ ಇನ್ಸ್ಟಿಟ್ಯೂಟ್ ಕಾಲೇಜು (ದ್ವಿ), ಫೇಸ್ ಪೈಂಟಿಂಗ್ ನಲ್ಲಿ ವಿರಾಜಪೇಟೆ ಸಂತ ಅನ್ನಮ್ಮ ಪಿ ಯು ಕಾಲೇಜು (ಪ್ರ), ಕೂರ್ಗ್ ಇನ್ಸ್ಟಿಟ್ಯೂಟ್ ಕಾಲೇಜು (ದ್ವಿ) ಬಹುಮಾನವನ್ನು ಪಡೆದುಕೊಂಡಿತು. ವಿಜೇತ ತಂಡಗಳಿಗೆ ಪ್ರಶಸ್ತಿ ಪತ್ರ, ಟ್ರೋಫಿಗಳನ್ನು ವಿತರಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.