Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
  • *ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ರಾಜಾಸೀಟು ರಸ್ತೆ ಪಾರ್ಕಿಂಗ್ ಶುಲ್ಕ ಸಂಗ್ರಹ ಸ್ಥಗಿತ : ನಗರಸಭೆಯಲ್ಲಿ ತೀವ್ರ ಚರ್ಚೆ*
ಇತ್ತೀಚಿನ ಸುದ್ದಿಗಳು

*ರಾಜಾಸೀಟು ರಸ್ತೆ ಪಾರ್ಕಿಂಗ್ ಶುಲ್ಕ ಸಂಗ್ರಹ ಸ್ಥಗಿತ : ನಗರಸಭೆಯಲ್ಲಿ ತೀವ್ರ ಚರ್ಚೆ*

October 29, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಅ.29 NEWS DESK : ರಾಜಾಸೀಟು ರಸ್ತೆಯಲ್ಲಿ ಪಾರ್ಕಿಂಗ್ ಶುಲ್ಕ ಸಂಗ್ರಹವನ್ನು ಏಕಾಏಕಿ ಸ್ಥಗಿತಗೊಳಿಸಿದ ಕ್ರಮದ ಕುರಿತು ಮಡಿಕೇರಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ತೀವ್ರ ಚರ್ಚೆ ನಡೆಯಿತು. ನಗರಸಭೆಯ ಸಭಾಂಗಣದಲ್ಲಿ ಅಧ್ಯಕ್ಷೆ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಎಸ್‍ಡಿಪಿಐ ಸದಸ್ಯ ಅಮಿನ್ ಮೊಹಿಸಿನ್ ಅವರು ರಾಜಾಸೀಟು ಬಳಿ ವಾಹನ ಪಾರ್ಕಿಂಗ್ ಶುಲ್ಕ ವಸೂಲಾತಿ ಸ್ಥಗಿತಗೊಂಡಿದೆ. ಈ ದಿಢೀರ್ ನಿರ್ಧಾರಕ್ಕೆ ಕಾರಣವೇನೆಂದು ಪ್ರಶ್ನಿಸಿದರು. ಬಿಜೆಪಿ ಸದಸ್ಯ ಕೆ.ಎಸ್.ರಮೇಶ್ ಅವರು ಮಾತನಾಡಿ ರಾಜಾಸೀಟು ಬಳಿ ವಾಹನ ಪಾರ್ಕಿಂಗ್ ಶುಲ್ಕ ವಸೂಲಾತಿಗೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸುವಂತೆ ಒತ್ತಾಯಿಸಿದರು. ಈ ಸಂದರ್ಭ ಅಧ್ಯಕ್ಷರ ಸೂಚನೆಯಂತೆ ಕೌನ್ಸಿಲ್ ಕಾರ್ಯದರ್ಶಿ ತಾಹಿರ್ ಅವರು ಉತ್ತರ ನೀಡಿ ರಾಜಾಸೀಟು ಬಳಿ ಪಾರ್ಕಿಂಗ್ ಟೆಂಡರನ್ನು 37.85 ಲಕ್ಷ ರೂ.ಗಳಿಗೆ ನೀಡಲಾಗಿದ್ದು, ಈ ಟೆಂಡರ್ ಮೊತ್ತದಲ್ಲಿ ಟೆಂಡರ್‍ದಾರರು 17.79 ಲಕ್ಷ ರೂ.ಗಳನ್ನಷ್ಟೇ ಪಾವತಿಸಿದ್ದಾರೆ. ಸುಮಾರು 20 ಲಕ್ಷ ರೂ. ಪಾವತಿಗೆ ಬಾಕಿ ಇರುವುದರಿಂದ, ಶುಲ್ಕ ವಸೂಲಾತಿ ಸ್ಥಗಿತಕ್ಕೆ ಆದೇಶಿಸಿ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು. ಈ ಹಂತದಲ್ಲಿ ಮಾತನಾಡಿದ ಆಡಳಿತ ಪಕ್ಷ ಬಿಜೆಪಿಯ ಸದಸ್ಯ ಎಸ್.ಸಿ.ಸತೀಶ್ ಅವರು ಮಾತನಾಡಿ, ಟೆಂಡರ್ ಮೊತ್ತದ ಪಾವತಿಗೆ ಇರುವ ನಿಯಮಾವಳಿಗಳೇನು ಮತ್ತು ಟೆಂಡರ್‍ದಾರರಿಂದ ಪುರ್ಣ ಮೊತ್ತವನ್ನು ಪಾವತಿಸಿಕೊಳ್ಳದೆ ಪಾರ್ಕಿಂಗ್ ಶುಲ್ಕ ವಸೂಲಾತಿಗೆ ಅವಕಾಶ ನೀಡಿದ್ದಾದರು ಹೇಗೆ ಎಂದು ಅಧ್ಯಕ್ಷರ ವಿರುದ್ಧ ಹರಿಹಾಯ್ದರು. ಅಲ್ಲದೆ ಇದೇ ನಿಯಮವನ್ನು ಮಾರುಕಟ್ಟೆಯ ಮೀನು ಮತ್ತು ಕೋಳಿ ಮಾಂಸ ಮಾರಾಟ ಮಾಡುತ್ತಿದ್ದ ಮಳಿಗೆದಾರರಿಗೆ ಯಾಕೆ ಅನ್ವಯಿಸಿಲ್ಲ ಎಂದು ಪ್ರಶ್ನಿಸಿದರು. ಮೀನು ಮಳಿಗೆದಾರರು ಬಾಡಿಗೆ ನೀಡಿಲ್ಲವೆಂದು ಮಳಿಗೆ ಮುಚ್ಚಿಸಿದ ಮರುದಿನವೇ ಅದನ್ನು ತೆರೆಯಲು ಅವಕಾಶ ಮಾಡಿಕೊಟ್ಟಿದ್ದಾದರು ಹೇಗೆ ಎಂದು ಏರು ಧ್ವನಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ಇದಕ್ಕೆ ಆಡಳಿತ ಪಕ್ಷದ ಸದಸ್ಯೆ ಶ್ವೇತ ರವೀಂದ್ರ, ಕಾಳಚಂಡ ಅಪ್ಪಣ್ಣ ಹಾಗೂ ಕಾಂಗ್ರೆಸ್ ಸದಸ್ಯ ಬಿ.ವೈ.ರಾಜೇಶ್ ಅವರು ಧ್ವನಿ ಗೂಡಿಸಿದರು. ಈ ಸಂದರ್ಭ ಸಭೆÉ ಗೊಂದಲದ ಗೂಡಾಯಿತು. ಎಸ್.ಸಿ.ಸತೀಶ್ ಮಾತನಾಡಿ ಟೆಂಡರ್ ನಿಯಮದಂತೆ ಟೆಂಡರ್ ಮೊತ್ತವನ್ನು ಒಟ್ಟಾಗಿ ಪಾವತಿಸಿದ ನಂತರವಷ್ಟೇ ಗುತ್ತಿಗೆದಾರನಿಗೆ ಶುಲ್ಕ ವಸೂಲಾತಿಗೆ ಅವಕಾಶ ನೀಡಬೇಕು. ಆದರೆ ಇಲ್ಲಿ ಟೆಂಡರ್ ನಿಯಮವನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದರು. ಈ ಸಂದರ್ಭ ಪೌರಾಯುಕ್ತ ಹೆಚ್.ಆರ್.ರಮೇಶ್ ಅವರು ಮಾತನಾಡಿ, ರಾಜಾಸೀಟು ಬಳಿಯ ಪಾರ್ಕಿಂಗ್ ಶುಲ್ಕ ಸ್ಥಗಿತಗೊಳಿಸುವಂತೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಮೌಖಿಕವಾಗಿ ತಿಳಿಸಿದರು. ಈ ಬಗ್ಗೆ ಲಿಖಿತ ಹೇಳಿಕೆಯನ್ನು ತಯಾರಿಸಿ ಅವರಿಂದ ಸಹಿ ಪಡೆದುಕೊಂಡು ಪಾರ್ಕಿಂಗ್ ಶುಲ್ಕ ಸಂಗ್ರಹ ಸ್ಥಗಿತಕ್ಕೆ ನೋಟಿಸ್ ನೀಡಿರುವುದಾಗಿ ಸ್ಪಷ್ಟಪಡಿಸಿದರು. ಸಭೆಯಲ್ಲಿ ಮತ್ತೆ ಕಾವೇರಿದ ವಾತಾವರಣ ಸೃಷ್ಟಿಯಾಗಿ ಪಾರ್ಕಿಂಗ್ ವಿಚಾರದಲ್ಲಿ ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ, ಆದರೆ ಮೀನು ಮಾರುಕಟ್ಟೆ ವಿಷಯದಲ್ಲಿ ಮಳಿಗೆ ಸ್ಥಗಿತಗೊಳಿಸಿ ಮತ್ತೆ ಅವಕಾಶ ನೀಡಲು ಕಾರಣವೇನೆಂದು ಎಸ್.ಸಿ.ಸತೀಶ್ ಪ್ರಶ್ನಿಸಿದರು. *ತನಿಖೆಯಾಗಲಿ* ಎಸ್‍ಡಿಪಿಐ ಸದಸ್ಯ ಅಮಿನ್ ಮೊಹಿಸಿನ್ ಮಾತನಾಡಿ, ರಾಜಾಸೀಟು ಪಾರ್ಕಿಂಗ್ ಮತ್ತು ಮೀನು ಮಾರುಕಟ್ಟೆ ಮಳಿಗೆಯ ವಿಚಾರಗಳು ವಿಭಿನ್ನವಾಗಿವೆ. ಮೀನು ಮಾರುಕಟ್ಟೆ ಮಳಿಗೆಗೆ ಸಂಬಂಧಿಸಿದಂತೆ ಟೆಂಡರ್‍ದಾರರು ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ, ನ್ಯಾಯಾಲಯವು ಈ ವಿಚಾರವನ್ನು ಸ್ಥಳೀಯ ಲೋಕ ಅದಾಲತ್‍ನಲ್ಲಿ ಬಗೆಹರಿಸಿಕೊಳ್ಳುವಂತೆ ತಿಳಿಸಿದೆ. ಅಲ್ಲದೆ ಮಳಿಗೆಗಳಿಗೆ ಮೂಲ ಸೌಲಭ್ಯ ಕಲ್ಪಿಸುವಲ್ಲಿಯವರೆಗೆ ಮೀನು ಮಾರಾಟವನ್ನು ಮುಂದುವರಿಸಲು ಅವಕಾಶ ನೀಡಿದೆ ಎಂದು ಸಭೆಯ ಗಮನ ಸೆಳೆದರು.
ನಗರಸಭೆಯಲ್ಲಿ ನಡೆದಿರುವ ಎಲ್ಲಾ ಹರಾಜು ಪ್ರಕರಣಗಳಿಗೆ ಸಂಬಂಧಿಸಿದಂತೆ ದೊಡ್ಡ ಮಟ್ಟದ ತನಿಖೆಯಾಗಬೇಕೆಂದು ಎಸ್.ಸಿ.ಸತೀಶ್ ಆಗ್ರಹಿಸಿದರು.
ಈಗಾಗಲೇ ಸ್ಥಗಿತಗೊಳಿಸಲಾಗಿರುವ ಮೀನು ಮಳಿಗೆಗಳನ್ನು ಪುನರಾರಂಭಿಸಲು ಅವಕಾಶ ನೀಡುವಂತೆ ಸದಸ್ಯರು ಮಾಡಿದ ಆಗ್ರಹಕ್ಕೆ ಅಧ್ಯಕ್ಷರು ಒಪ್ಪಿಗೆ ಸೂಚಿಸಿದರು.

 

Share. Facebook Twitter Pinterest LinkedIn Tumblr Email WhatsApp
Previous Article*ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ : ಹೆಸರು ನೋಂದಣಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮನವಿ*
Next Article *ವಿರಾಜಪೇಟೆ : ಅ.30 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

Recommended: Website design development company services in Mangalore Forex Trading Teacher in India

Related Posts

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

ಮಡಿಕೇರಿ NEWS DESK  ಫೆ.12 : ದುಡಿಯುವ ವರ್ಗಕ್ಕೆ ಮಾರಕವಾಗಿರುವ ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಕೋಡ್‌ಗಳನ್ನು ಹಿಂದಕ್ಕೆ ಪಡೆಯಬೇಕು,…

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.