
ಮಡಿಕೇರಿ ಅ.30 NEWS DESK : ನಾಪೋಕ್ಲು ಹಾಗೂ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಮುಖರ ಸಭೆಯು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಗೃಹ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷ ಸಂಘಟನೆ, ಮುಂಬರುವ ಚುನಾವಣೆಗಳು ಹಾಗೂ ಹಲವು ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಯಿತು. ಶಾಸಕರು ಸಂಘಟನೆಯ ಕುರಿತು ವಿಶೇಷ ಆಸಕ್ತಿ ವಹಿಸುವಂತೆ ಕರೆ ನೀಡಿದರಲ್ಲದೇ, ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಪ್ರತಿಶತ ನಿಭಾಯಿಸಲೇಬೇಕೆಂದು ಸೂಚಿಸಿದರು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ವಹಿಸಿದರು. ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವಿರಾಜಪೇಟೆ ಅಧ್ಯಕ್ಷ ರಂಜಿ ಪೂಣಚ್ಚ,ಕೆಪಿಸಿಸಿ ಸದಸ್ಯ ಬೇಕಲ್ ರಮಾನಾಥ್, ಡಿಸಿಸಿ ಉಪಾಧ್ಯಕ್ಷರಾದ ಅಬ್ದುಲ್ ರೆಹಮಾನ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಹನೀಫ್, ವಿರಾಜಪೇಟೆ ತಾಲೂಕು ಬಗರ್ ಹುಕುಂ ಅಧ್ಯಕ್ಷರು ಸಲಾಂ, ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷರು ಜಮ್ಮಡ ಸೋಮಣ್ಣ ಮಹಿಳಾ ಕಾಂಗ್ರೆಸ್ ಪ್ರಮುಖರು ಶೈಲಾ ಕುಟ್ಟಪ್ಪ, ಮಡಿಕೇರಿ ತಾಲೂಕು ಬಗರ್ ಹುಕುಂ ಅಧ್ಯಕ್ಷರು ನೇರವಂಡ ಉಮೇಶ್ ವಲಯ ಅಧ್ಯಕ್ಷರುಗಳು, ಕೆಪಿಸಿಸಿ/ಡಿಸಿಸಿ ಪದಾಧಿಕಾರಿಗಳು, ಮುಂಚೂಣಿ ಘಟಕದ ಅಧ್ಯಕ್ಷರುಗಳು ಪದಾಧಿಕಾರಿಗಳು ಹಾಗೂ ಪ್ರಮುಖರು ಭಾಗವಹಿಸಿದರು.









