
ಮಡಿಕೇರಿ ಅ.30 NEWS DESK : ಕೂರ್ಗ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕೊಡಗು ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಸರ್ವದೈವತ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ವಿಜೇತರಾಗುವ ಮೂಲಕ ಸತತವಾಗಿ ನಾಲ್ಕನೇ ಬಾರಿಗೆ ರಾಜ್ಯಮಟ್ಟಕ್ಕೆ ಲಗ್ಗೆಯಿಟ್ಟಿದೆ. ಈ ಪಂದ್ಯಾವಳಿಯಲ್ಲಿ ವಿರಾಜಪೇಟೆ ತಾಲ್ಲೂಕನ್ನು ಪ್ರತಿನಿಧಿಸಿದ ಸರ್ವದೈವತ ಪಿ.ಯು.ಕಾಲೇಜಿನ ಬಾಲಕರ ತಂಡ, ಉತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕ ಪ್ರಮೋದ್ ಗೌಡ ವಿದ್ಯಾರ್ಥಿಗಳಿಗೆ ತರಬೇತಿ ಹಾಗೂ ಮಾರ್ಗದರ್ಶನ ನೀಡಿದರು. ಈ ಸಾಧನೆಗೆ ಕಾಲೇಜು ಪ್ರಾಂಶುಪಾಲರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಅಭಿನಂದನೆಗಳನ್ನು ವ್ಯಕ್ತಪಡಿಸಿದ್ದಾರೆ.









