Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪಾಲಿಬೆಟ್ಟದಲ್ಲಿ ಚೆಶೈರ್ ಹೋಮ್ಸ್ ಬೆಳ್ಳಿ ಹಬ್ಬದ ಸಂಭ್ರಮ : ಸೇವಾ ಮನೋಭಾವಕ್ಕೆ ಪ್ರೋತ್ಸಾಹ ನೀಡಿ : ಚಾರು ಶರ್ಮಾ*
ಇತ್ತೀಚಿನ ಸುದ್ದಿಗಳು

*ಪಾಲಿಬೆಟ್ಟದಲ್ಲಿ ಚೆಶೈರ್ ಹೋಮ್ಸ್ ಬೆಳ್ಳಿ ಹಬ್ಬದ ಸಂಭ್ರಮ : ಸೇವಾ ಮನೋಭಾವಕ್ಕೆ ಪ್ರೋತ್ಸಾಹ ನೀಡಿ : ಚಾರು ಶರ್ಮಾ*

October 30, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

 

ಸಿದ್ದಾಪುರ ಅ.30 NEWS DESK : ಪಾಲಿಬೆಟ್ಟ ಚೆಶೈರ್ ಹೋಮ್ಸ್ ವಿಶೇಷ ಶಾಲೆಯ ಬೆಳ್ಳಿ ಹಬ್ಬ ಆಚರಣೆಯು ಶಾಲೆಯ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು. ಭಾರತೀಯ ಕ್ರೀಡಾ ವಿವರಣೆಗಾರ ಹಾಗೂ ಪ್ರೋ ಕಬಡ್ಡಿ ಲೀಗ್ ನಿರ್ದೇಶಕ ಚಾರು ಶರ್ಮಾ
ಬೆಳ್ಳಿ ಹಬ್ಬದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿಶೇಷ ಚೇತನ ವಿದ್ಯಾರ್ಥಿಗಳನ್ನು ಗುರುತಿಸಿ ಪುನರ್ವಸತಿ ಕಲ್ಪಿಸುವ ಮೂಲಕ ಶಿಕ್ಷಣದೊಂದಿಗೆ ಉತ್ತಮ ಭವಿಷ್ಯ ರೂಪಿಸಲು ಸೇವಾ ಮನೋಭಾವದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಪಾಲಿಬೆಟ್ಟದ ಚೆಶೈರ್ ಹೋಮ್ಸ್ ಬೆಳ್ಳಿ ಹಬ್ಬ ಸಂಭ್ರಮದಲ್ಲಿರುವುದು ಸಂತಸ ತಂದಿದೆ. ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸುವುದರೊಂದಿಗೆ ಸ್ವಉದ್ಯೋಗದ ಮೂಲಕ ಸಾವಲಂಬಿ ಜೀವನ ನಡೆಸಲು ಸಹಕಾರ ನೀಡುವುದರೊಂದಿಗೆ ಮಾದರಿ ವಿಶೇಷ ಚೇತನರ ಶಾಲೆಯನ್ನಾಗಿಸಿ ಮನೆಯ ಮಕ್ಕಳಂತೆ ಕಲಿಸಿ ಪ್ರೋತ್ಸಾಹಿಸುತ್ತಿರುವುದು ಹೆಮ್ಮೆಯ ವಿಷಯ. ಮಕ್ಕಳ ಮುಂದಿನ ಭವಿಷ್ಯ ರೂಪಿಸಲು ಎಲ್ಲರೂ ಪ್ರೋತ್ಸಾಹ ನೀಡಬೇಕಾಗಿದೆ ಎಂದರು. ಚೆಶೈರ್ ಹೋಮ್ಸ್ ಶಾಲೆಯ ಮುಖ್ಯಸ್ಥೆ ಗೀತಾ ಚಂಗಪ್ಪ ಮಾತನಾಡಿ, 6 ಮಕ್ಕಳಿಂದ ಪ್ರಾರಂಭವಾದ ಶಾಲೆ ಈಗ 25 ವರ್ಷ ಪೂರೈಸಿ ಬೆಳ್ಳಿ ಹಬ್ಬಕ್ಕೆ ಕಾಲಿಟ್ಟಿದ್ದು, ಇದೀಗ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಹಾಗೂ ತರಬೇತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಉತ್ತಪ್ಪ ಭವಿಷ್ಯ ರೂಪಿಸಲು ಶಿಕ್ಷಣದೊಂದಿಗೆ ಕೌಶಲ್ಯ ಅಭಿವೃದ್ಧಿ ತರಬೇತಿಗಳನ್ನು ನೀಡಲಾಗುತ್ತಿದ್ದು ಕರಕುಶಲ, ಪರಿಸರ, ಆರೋಗ್ಯ, ಯೋಗ, ಗಾಯನ, ನೃತ್ಯ, ಕ್ರೀಡೆ ಸೇರಿದಂತೆ ಹಲವು ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಿದ್ದಾರೆ. ಎಲ್ಲರ ಸಹಕಾರದಿಂದ ಶಾಲೆ ಮುನ್ನಡೆಯುತ್ತಿದ್ದು ಮತ್ತಷ್ಟು ಯೋಜನೆಗಳನ್ನು ರೂಪಿಸಲಾಗುತ್ತಿದ್ದು ಹೆಚ್ಚಿನ ಪ್ರೋತ್ಸಾಹ ನೀಡಬೇಕಾಗಿದೆ ಎಂದರು. ಇದೇ ಸಂದರ್ಭ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಾಲೆಯ ಸಂಸ್ಥಾಪಕರಾದ ಸಿ.ಎ.ಮುತ್ತಣ್ಣ, ಶಾಲಾ ಮುಖ್ಯ ಶಿಕ್ಷಕ ಶಿವರಾಜ್, ಹಳೆಯ ವಿದ್ಯಾರ್ಥಿ ಹಾಗು ಅಂತರಾಷ್ಟ್ರೀಯ ಕ್ರೀಡಾಪಟು ರಂಶಾದ್, ವಿದ್ಯಾರ್ಥಿ ಸುಮೇಶ್ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಅನುಜಾ ಶರ್ಮಾ, ವಿಶೇಷ ಶಾಲೆಯ ಆಡಳಿತ ಮಂಡಳಿ ಉಪಾಧ್ಯಕ್ಷೆ ಪುನೀತ ರಾಮಸ್ವಾಮಿ, ಕಾರ್ಯದರ್ಶಿ ಆಶಾ ಸುಬ್ಬಯ್ಯ, ಖಜಾಂಚಿ ಡಾ. ಎ.ಸಿ.ಗಣಪತಿ, ಸಂಸ್ಥಾಪಕ ಸಿ.ಎ.ಮುತ್ತಣ್ಣ, ಮುಖ್ಯ ಶಿಕ್ಷಕ ಶಿವರಾಜ್ ಸೇರಿದಂತೆ ಗಣ್ಯರು, ಶಾಲಾ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರುಗಳು ಹಾಜರಿದ್ದರು.  ಶಾಲಾ ವಿದ್ಯಾರ್ಥಿಗಳಿಂದ ನೃತ್ಯ, ನಾಟಕ, ಯೋಗ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದವರ ಗಮನ ಸೆಳೆಯಿತು. ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಗಣ್ಯರು ಮೆಚ್ಚಿಗೆ ವ್ಯಕ್ತಪಡಿಸಿದರು.

 

Share. Facebook Twitter Pinterest LinkedIn Tumblr Email WhatsApp
Previous Article*ಬಿರಿಯಾನಿ ಚಾಲೆಂಜ್ ಗೆ ಉತ್ತಮ ಸ್ಪಂದನೆ : ಡಯಾಲಿಸಿಸ್ ಕೇಂದ್ರದ ಉಳಿವಿಗೆ ಕೈ ಜೋಡಿಸಿದ್ದ ಸಾರ್ವಜನಿಕರು : ತಣಲ್ ಸಂಸ್ಥೆ ನಿಸ್ವಾರ್ಥ ಸೇವೆಗೆ ಶಾಸಕ ಎ.ಎಸ್.ಪೊನ್ನಣ್ಣ ಮೆಚ್ಚುಗೆ*
Next Article *ಅರೆಭಾಷಿಕ ಗೌಡ ಜನಾಂಗದ ಅಭಿಮಾನಿ ಬಳಗದಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಸನ್ಮಾನ*

Website design development company services in Mangalore

Forex Trading Teacher in India

Related Posts

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವೃತ್ತಿಜೀವನದ ದಾಖಲೆಯ 17ನೇ ಬಜೆಟ್…

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.