
ಮಡಿಕೇರಿ NEWS DESK ಅ.31 : ಕೂರ್ಗ್ ಪ್ಲಾಂಟರ್ಸ್ ಎಸೋಸಿಯೇಷನ್’ನ 146 ನೇ ವಾರ್ಷಿಕ ಸಮ್ಮೇಳನ ಸಿದ್ದಾಪುರದಲ್ಲಿ ನಡೆಯಿತು. ಆರೆಂಜ್ ಕೌಂಟಿ ಸಭಾಂಗಣದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್ .ಪೊನ್ನಣ್ಣ ಅವರು ಶತಮಾನಗಳಿಗೂ ಅಧಿಕ ಇತಿಹಾಸವುಳ್ಳ ಕೂರ್ಗ್ ಪ್ಲಾಂಟೇಶನ್ ಅಸೋಸಿಯೇಷನ್, ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿ. ಕೊಡಗಿನ ಬೆಳೆಗಾರರಿಗೆ ಅನುಕೂಲ ಆಗುವಂತೆ ನೋಡಿಕೊಳ್ಳಬೇಕು ಎಂದು ಕರೆ ನೀಡಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ, ಪ್ಲಾಂಟರ್ ಎಸ್ಸೋಸಿಯೇಷನ್ ನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.










