
ಮಡಿಕೇರಿ ನ.1 NEWS DESK : ಕೊಡಗು ಜಿಲ್ಲಾಡಳಿತ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವವನ್ನು ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು. ನಂತರ ಕನ್ನಡಾಂಬೆ ಭುವನೇಶ್ವರಿಗೆ ಪುಷ್ಪಾರ್ಚನೆಯ ಮೂಲಕ ಗೌರವ ಸಲ್ಲಿಸಿ, ನಾಡಿನ ಜನತೆಗೆ ಸಂದೇಶ ನೀಡಿದರು. ಬಳಿಕ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸ್ತಬ್ಧ ಚಿತ್ರಗಳ ಹಾಗೂ ಕಲಾ ತಂಡಗಳ ಮೆರವಣಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. :: ಆಕರ್ಷಕ ಪಥ ಸಂಚಲನ :: ನಗರದ ವವಿಧ ಶಾಲಾ ಕಾಲೇಜುಗಳ ಎನ್‍ಸಿಸಿ, ಸೇವಾದಳ, ಸ್ಕೌಟ್ಸ್, ಗೈಡ್ಸ್, ಜಿಲ್ಲಾ ಪೊಲೀಸ್ ಸಶಸ್ತ್ರ ದಳ, ನಾಗರಿಕ ಸೇವಾ ಪೊಲೀಸ್, ಗೃಹ ರಕ್ಷಕ ದಳ, ಅರಣ್ಯ ಇಲಾಖೆಯಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಸಚಿವರು ಪಥ ಸಂಚಲನದ ಗೌರವ ವಂದನೆ ಸ್ವಕರಸಿದರು.









