
ಮಡಿಕೇರಿ ನ.1 NEWS DESK : ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯು ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ ರಾಜ್, ಜಿ.ಪಂ ಸಿಇಓ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಜಾನ್ಸನ್ ಹಾಗೂ ಎಲ್ಲಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಪ್ರತಿಯೊಂದು ಇಲಾಖೆಯ ವರದಿ ತರಿಸಿಕೊಂಡ ಸಚಿವರು ಹಾಗೂ ಶಾಸಕರು ಕೂಲಂಕುಶವಾಗಿ ಪ್ರತಿ ವರದಿಯನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.









