
ನಾಪೋಕ್ಲು ನ.1 NEWS DESK : ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನದ ಅಂಗವಾಗಿ ನಾಪೋಕ್ಲುವಿನಲ್ಲಿ ರಾಷ್ಟರೀಯ ಏಕತಾ ಓಟ ನಡೆಯಿತು. ನಾಪೋಕ್ಲು ಪೊಲೀಸ್ ಠಾಣೆಯ ಸಹಾಯಕ ಠಾಣಾಧಿಕಾರಿ ಫ್ರಾನ್ಸಿಸ್ ಅವರ ನೇತೃತ್ವದಲ್ಲಿ ಪೊಲೀಸರು ಹಾಗೂ ಗ್ರಾಮ ಪಂಚಾಯತಿ ಸದಸ್ಯರಾದ ಮಾಚೇಟಿರ ಕುಸು ಕುಶಾಲಪ್ಪ, ಅಶ್ರಫ್ ಕೆ.ವೈ., ನಾಪೋಕ್ಲು ಪಟ್ಟಣದ ಬಸ್ ನಿಲ್ದಾಣದಿಂದ ಮಾರುಕಟ್ಟೆ ವರೆಗೆ ಏಕತಾ ಓಟವನ್ನು ನಡೆಸಿ ಏಕತಾ ಸಂದೇಶವನ್ನು ಸಾರಿದರು. ಈ ಸಂದರ್ಭ ಸ್ಥಳೀಯ ಪೊಲೀಸ್ ಠಾಣೆ ಸಿಬ್ಬಂದಿಗಳು, ಸಾರ್ವಜನಿಕರು, ಆಟೋ ಚಾಲಕರು ಉಪಸ್ಥಿತರಿದ್ದರು.
ವರದಿ : ದುಗ್ಗಳ ಸದಾನಂದ.









