Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಗರಹೊಳೆಯಲ್ಲಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ನವೀಕರಣ ಕಟ್ಟಡ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಗರಹೊಳೆಯಲ್ಲಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ನವೀಕರಣ ಕಟ್ಟಡ ಉದ್ಘಾಟನೆ*

ನವೆಂಬರ್ 1, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.1 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ನಾಗರಹೊಳೆಯಲ್ಲಿ 1.80 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಮಹರ್ಷಿ ವಾಲ್ಮೀಕಿ ಅದಿವಾಸಿ ಬುಡಕಟ್ಟು ವಸತಿ ಶಾಲೆಯ ನವೀಕರಣ ಕಟ್ಟಡವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಶುಕ್ರವಾರ ಉದ್ಘಾಟಿಸಿದರು. ಬಳಿಕ ಶಾಲಾ ಕೊಠಡಿ ವೀಕ್ಷಿಸಿದ ಸಚಿವರು ವಿದ್ಯಾರ್ಥಿಗಳ ಕುಂದುಕೊರತೆ ಆಲಿಸಿದರು.
ಶಿಕ್ಷಕರು ಪಾಠ ಪ್ರವಚನ ಮನ ಮುಟ್ಟುವಂತೆ ಹೇಳುತ್ತಿದ್ದಾರೆಯೇ, ಪ್ರತಿನಿತ್ಯ ಆಹಾರದ ಪಟ್ಟಿಯಂತೆ ಊಟೋಪಾಚಾರ ಕಲ್ಪಿಸಲಾಗುತ್ತಿದೆಯೇ, ಮೊಟ್ಟೆ ಬಾಳೆಹಣ್ಣು, ಚಿಕ್ಕಿ ವಿತರಿಸಲಾಗುತ್ತಿದೆಯೇ ಎಂದು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು. ಶುಕ್ರವಾರ ಯಾವ ಊಟ ಬಡಿಸಿದರು ಎಂಬ ಸಚಿವರ ಪ್ರಶ್ನೆಗೆ ವಿದ್ಯಾರ್ಥಿಗಳು ಅನ್ನ ಸಾಂಬಾರು, ಮುದ್ದೆ ಎಂದು ಉತ್ತರಿಸಿದರು, ಇದಕ್ಕೆ ಸಚಿವರು, ಯಾವ ಸಾಂಬಾರು ಎಂದು ಮರು ಪ್ರಶ್ನಿಸಿದರು, ಇದಕ್ಕೆ ವಿದ್ಯಾರ್ಥಿಗಳು ಕಡ್ಲೆಕಾಳು, ತರಕಾರಿ ಸಾಂಬಾರು ಎಂದು ಉತ್ತರಿಸಿದರು. ಬಳಿಕ ಸಚಿವರು ಮೊಟ್ಟೆ ಏಕೆ ವಿತರಿಸಿಲ್ಲ ಎಂದರು, ವಾರದ ಆಹಾರ ಪಟ್ಟಿಯಲ್ಲಿ ಬುಧವಾರ ಮತ್ತು ಶನಿವಾರ ಮೊಟ್ಟೆ ನೀಡಲಾಗುತ್ತದೆ ಎಂದು ವಿದ್ಯಾರ್ಥಿಗಳು ಉತ್ತರಿಸಿದರು. ವಿದ್ಯಾರ್ಥಿಗಳು ಚೆನ್ನಾಗಿ ಓದಬೇಕು, ಸರ್ಕಾರದ ಸವಲತ್ತು ಸರಿಯಾಗಿ ಬಳಸಿಕೊಳ್ಳಬೇಕು. ಸಮಸ್ಯೆ ಇದ್ದಲ್ಲಿ ಅಧಿಕಾರಿಗಳ ಗಮನ ಸೆಳೆಯಬೇಕು ಎಂದು ಸಚಿವರು ಸಲಹೆ ನೀಡಿದರು. ನಂತರ ವಿದ್ಯಾರ್ಥಿಗಳು ಮಲಗುವ ಕೊಠಡಿ, ಆಹಾರ ಸಾಮಗ್ರಿ ಕೊಠಡಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ‌ಸಚಿವರು ಹಿಂದೆ ವಸತಿ ಶಾಲೆಯಲ್ಲಿ ಕುಂದು ಕೊರತೆಗಳು ಇತ್ತು. ಆ ನಿಟ್ಟಿನಲ್ಲಿ 1.80 ಕೋಟಿ ರೂ ವೆಚ್ಚದಲ್ಲಿ ಕಟ್ಟಡ ನವೀಕರಣ ಜತೆಗೆ, ಹೆಚ್ಚುವರಿ ಕೊಠಡಿ ನಿರ್ಮಾಣ, ಸೋಲಾರ್ ಅಳವಡಿಕೆ, ಆಟದ ಮೈದಾನ, ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಸೇರಿದಂತೆ ಹಲವು ಕೆಲಸ ಕೈಗೊಳ್ಳಲಾಗಿದೆ ಎಂದು ಎನ್ ಎಸ್ ಭೋಸರಾಜು ಅವರು ತಿಳಿಸಿದರು. ವಸತಿ ಶಾಲೆಯಲ್ಲಿ ಇನ್ನೂ ಆಗಬೇಕಿರುವ ಕೆಲಸಗಳಿಗೆ ಐಟಿಡಿಪಿ ಇಲಾಖೆಯಿಂದ ಅನುದಾನ ಬಿಡುಗಡೆಗೆ ಕ್ರಮ ವಹಿಸಲಾಗುವುದು, ವಿದ್ಯಾರ್ಥಿಗಳಿಗೆ ಯಾವುದೇ ರೀತಿ ತೊಂದರೆ ಆಗದಂತೆ ಗಮನ ಹರಿಸುವುದು ಶಿಕ್ಷಕರು ಹಾಗೂ ಅಧಿಕಾರಗಳ‌ ಜವಾಬ್ದಾರಿ ಆಗಿದೆ ಎಂದು ಸಚಿವರು ತಾಕೀತು ಮಾಡಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ‌ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಅಗತ್ಯ ಮೂಲಸೌಕರ್ಯ ಒದಗಿಸಲು ಪ್ರಾಮಾಣಿಕ‌ ಪ್ರಯತ್ನ ಮಾಡಲಾಗಿದೆ. ಆ ನಿಟ್ಟಿನಲ್ಲಿ ಎಲ್ಲರಂತೆ ಆದಿವಾಸಿ ಮಕ್ಕಳು ಮುಖ್ಯವಾಹಿನಿಗೆ ಬರಬೇಕು ಎಂದರು. ವಸತಿ ಶಾಲೆಯಲ್ಲಿ ಇನ್ನೂ ಆಗಬೇಕಿರುವ ಕೆಲಸ ಕೈಗೊಳ್ಳಲಾಗುವುದು ಎಂದು ಎ.ಎಸ್.ಪೊನ್ನಣ್ಣ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ಇಲ್ಲಿನ ಆದಿವಾಸಿಗಳು ವಿದ್ಯಾರ್ಥಿಗಳಿಗೆ ಆಟದ ಮೈದಾನ, ಶಿಕ್ಷಕರಿಗೆ ವಸತಿ ಗೃಹ, ರೈಲ್ವೆ ಬ್ಯಾರಿಕೇಡ್ ಗೆ ಕಬ್ಬಿಣದ ಪರದೆ ಅಳವಡಿಸುವುದು ಸೇರಿದಂತೆ ಇನ್ನೂ ಹಲವು‌ ಕೆಲಸಗಳು ಆಗಬೇಕಿದೆ ಎಂದು ಗಮನ‌ ಸೆಳೆದರು. ಹಾಗೆಯೇ ನಾಗರಹೊಳೆ ವ್ಯಾಪ್ತಿಯಲ್ಲಿ ಬಾಕಿ ಇರುವ ಆದಿವಾಸಿ ಕುಟುಂಬಗಳಿಗೆ ಅರಣ್ಯ ಹಕ್ಕು ಪತ್ರ ವಿತರಿಸುವಂತೆ ಇದೇ ಸಂದರ್ಭದಲ್ಲಿ ಮನವಿ ಮಾಡಿದರು. ವಿದ್ಯಾರ್ಥಿಗಳಿಗೆ ಆಟದ ಸಾಮಗ್ರಿಯನ್ನು‌ ಸಚಿವರು ವಿತರಿಸಿದರು. ನಾಲ್ಕೇರಿ ಗ್ರಾ.ಪಂ.ಅಧ್ಯಕ್ಷರಾದ ಜೆ.ಎಂ.ಸೋಮಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷರಾದ ಕಾಳಿಮಾಡ ಪ್ರಶಾಂತ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಆರ್.ಜಿ.ಸಚಿನ್, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತೇಜರಾದ ಬಿ. ಹಲಸಬಾಳ ಇತರರು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.