
ಮಡಿಕೇರಿ ನ.1 NEWS DESK : ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿಗೆ ತೆರಳುವ ರಸ್ತೆಯ ಬಳಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಉಸ್ತುವಾರಿ ಸಚಿವ ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಶಾಸಕ ಡಾ.ಮಂತರ್ ಗೌಡ ಶಿಲನ್ಯಾಸ ನೆರವೇರಿಸಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆ ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರುಗಳು, ಮಾಜಿ ಸಚಿವರುಗಳು, ಮಾಜಿ ಶಾಸಕರುಗಳು ಹಾಗೂ ಆಹ್ವಾನಿತ ಅತಿಥಿ ಗಣ್ಯರು ಉಪಸ್ಥಿತರಿದ್ದರು. ಬಳಿಕ ಶುಭಕೋರಿದ ಶಾಸಕ ಎ.ಎಸ್.ಪೊನ್ನಣ್ಣ, ನಿಗದಿತ ಸಮಯದಲ್ಲಿ ಕಾಂಗ್ರೆಸ್ ಭವನ ಪೂರ್ಣಗೊಳ್ಳಲಿದ್ದು, ಎಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಿದರು. ಆದಷ್ಟು ಬೇಗ ಈ ನೂತನ ಭವನದಲ್ಲಿ ಪಕ್ಷದ ಕಾರ್ಯ ಚಟುವಟಿಕೆಗಳು ಯಶಸ್ಸು ಕಾಣುವುದರೊಂದಿಗೆ ಕಾಂಗ್ರೆಸ್ ಪಕ್ಷದ ಗತವೈಭವ ಮರುಕಳಿಸುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ತಿಳಿಸಿದರು. ಮಾಜಿ ಸಚಿವರಾದ ಎಂ.ಸಿ.ನಾಣಯ್ಯ ಮಾತನಾಡಿ, ಶುಭ ಕೋರಿದರು. ವೇದಿಕೆಯಲ್ಲಿ ಕೆಪಿಸಿಸಿ ಸದಸ್ಯರುಗಳು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಲಕ್ಷ್ಮಣ್ ಮೈಸೂರು, ಹಿರಿಯ ನಾಯಕರಾದ ಪಿಕೆ ಪೊನ್ನಪ್ಪ, ಕೆಪಿ ಶಾಂತಪ್ಪ, ಮಾಜಿ ಶಾಸಕಿ ಶ್ರೀಮತಿ ವೀಣಾ ಅಚಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಚ್.ಎಸ್ ಚಂದ್ರ ಮೌಳಿ, ಕೆಪಿ ಚಂದ್ರಕಲಾ, ಮಾಜಿ ಜಿಲ್ಲಾಧ್ಯಕ್ಷರಾದ ಕೆ.ಕೆ ಮಂಜುನಾಥ್ ಕುಮಾರ್, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷರಾದ ಟಿಪಿ ರಮೇಶ್, ಹೆಚ್ ಎಂ ನಂದಕುಮಾರ್, ಪಿಸಿ ಹಸೈನಾರ್,, ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯವರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು/ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಅಧ್ಯಕ್ಷರುಗಳು/ಪದಾಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು, ಸರ್ಕಾರಿ ನಾಮ ನಿರ್ದೇಶಿತ ಅಧ್ಯಕ್ಷರುಗಳು/ಸದಸ್ಯರುಗಳು, ವಲಯ ಹಾಗೂ ಬೂತ್ ಕಾಂಗ್ರೆಸ್ ಅಧ್ಯಕ್ಷರುಗಳು/ಪದಾಧಿಕಾರಿಗಳು, ಯೂತ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು,ಪಕ್ಷದ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.









