
ಮಡಿಕೇರಿ ನ.1 NEWS DESK : ಕರಿಕೆ ಗ್ರಾಮ ಪಂಚಾಯತ್ ಮತ್ತು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರದಿಂದ ಆಚರಿಸಲಾಯಿತು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷಾರಾದ ಎನ್.ಬಾಲಚಂದ್ರ ನಾಯರ್ ಧ್ವಜಾರೋಹಣ ನೆರವೇರಿಸಿದರು. ಪಂಚಾಯತ್ ಅಧ್ಯಕ್ಷರಾದ ಎನ್. ಬಾಲಚಂದ್ರನ್ ನಾಯರ್ ಮತ್ತು ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ರಾಜಶೇಖರ್ ಕನ್ನಡ ರಾಜ್ಯೋತ್ಸವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಕಲ್ಪನಾ ಜಗದೀಶ್, ಪಂಚಾಯತ್ ಸದಸ್ಯರು, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಪದಾಧಿಕಾರಿಗಳು, ಸಹಕಾರ ಸಂಘದ ನಿರ್ದೇಶಕರುಗಳು, ಎಸ್.ಡಿ.ಎಂಸಿ ಅಧ್ಯಕ್ಷರುಗಳು, ಸದಸ್ಯರುಗಳು, ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು, ಪಂಚಾಯತ್ ಸಿಬ್ಬಂದಿ ವರ್ಗ ಪಾಲ್ಗೊಂಡರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಿಪಿನ್ ಸ್ವಾಗತಿಸಿದರು, ಗ್ರಂಥಪಾಲಕರಾದ ಸಾವಿತ್ರಿ ವಂದಿಸಿದರು. ಪ್ರೌಢ ಶಾಲೆಯಿಂದ ಆರಂಭಗೊಂಡ ಮೆರವಣಿಗೆ ಎಳ್ಳುಕೊಚ್ಚಿ ಪೇಟೆಯಲ್ಲಿ ಸಮಾಪ್ತಿಯಾಯಿತು.









