Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಓದು ಮುಂದುವರಿಸಲು ಕಷ್ಟವಾದ ಕುಟುಂಬಗಳು ಹಿಂಜರಿಕೆಯಿಲ್ಲದೆ ಸಹಾಯ ಕೇಳಬೇಕು : ನಾನು ಸಹಾಯ ಮಾಡುತ್ತೇನೆ : ಶಾಸಕ ಡಾ.ಮಂತರ್‌ಗೌಡ ಭರವಸೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಓದು ಮುಂದುವರಿಸಲು ಕಷ್ಟವಾದ ಕುಟುಂಬಗಳು ಹಿಂಜರಿಕೆಯಿಲ್ಲದೆ ಸಹಾಯ ಕೇಳಬೇಕು : ನಾನು ಸಹಾಯ ಮಾಡುತ್ತೇನೆ : ಶಾಸಕ ಡಾ.ಮಂತರ್‌ಗೌಡ ಭರವಸೆ*

ನವೆಂಬರ್ 2, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ NEWS DESK ನ.2 : ವಿದ್ಯೆ ಎಂಬುವುದು ಅಪೂರ್ವ ಸಂಪತ್ತು, ವಿದ್ಯಾದಾನ ಮಹಾನ್ ಕಾರ್ಯ, ಓದು ಮುಂದುವರಿಸಲು ಕಷ್ಟವಾದ ಕುಟುಂಬಗಳು ಹಿಂಜರಿಕೆಯಿಲ್ಲದೆ ಸಹಾಯ ಕೇಳಬೇಕು, ನಾನು ಸಹಾಯ ಮಾಡುತ್ತೇನೆ ಎಂದು ಶಾಸಕ ಡಾ.ಮಂತರ್‌ಗೌಡ ಭರವಸೆ ನೀಡಿದ್ದಾರೆ.
ಸೋಮವಾರಪೇಟೆ ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯಲ್ಲಿ ನೂತನ ಕೊಠಡಿಗಳನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು. ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಮಕ್ಕಳು ಓದಲೇಬೇಕು. ವಿದ್ಯೆಯೇ ನಮ್ಮನ್ನು ಉನ್ನತ ಸ್ಥಾನಕ್ಕೆ ತಲುಪಿಸುತ್ತದೆ. ಕಲಿತ ವಿದ್ಯೆಯನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದ ಅವರು, ಇತ್ತೀಚಿನ ವರ್ಷಗಳಲ್ಲಿ ಅತೀ ಹೆಚ್ಚು ರ‍್ಯಾಂಕ್‌ಗಳನ್ನು ಗ್ರಾಮೀಣ ಮಕ್ಕಳು ಪಡೆಯುತ್ತಿದ್ದಾರೆ ಎಂಬುದೇ ನಮಗೆ ಹೆಮ್ಮೆ ಎನಿಸುತ್ತದೆ. ಮಕ್ಕಳ ಕಲಿಕೆಗೆ ಪೋಷಕರು, ಶಿಕ್ಷಕರು ಪ್ರೋತ್ಸಾಹ ನೀಡುವುದು ಅವರ ಜವಾಬ್ದಾರಿಯಾಗಿದೆ. ಓದು ಮುಂದುವರಿಸಲು ಕಷ್ಟವಾದ ಕುಟುಂಬಗಳು ಹಿಂಜರಿಕೆಯಿಲ್ಲದೆ ಸಹಾಯ ಕೇಳಬೇಕು. ನಾನು ಕೂಡ ಎಲ್ಲಾ ಸಂದರ್ಭದಲ್ಲೂ ಸಹಾಯ ಮಾಡುತ್ತೇನೆ. ಸಂಘ-ಸAಸ್ಥೆಗಳು, ದಾನಿಗಳು ಕೂಡ ಶಿಕ್ಷಣ ಮುಂದುವರಿಸಲು ಅವಶ್ಕಕತೆಯಿದ್ದವರಿಗೆ ಸಹಾಯ ಮಾಡುತ್ತಾರೆ ಎಂದು ಹೇಳಿದರು. ಒಕ್ಕಲಿಗ ರೈತಾಪಿ ಕುಟುಂಬಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮೀಣ ಭಾಗದಲ್ಲಿ ವಾಸವಾಗಿದ್ದಾರೆ. ಪ್ರತಿ ಕುಟುಂಬಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಲೇಬೇಕು. ಈ ನಿಟ್ಟಿನಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದವರು ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಹೆಸರಿನಲ್ಲಿ ಆಂಗ್ಲಮಾಧ್ಯಮದಲ್ಲಿ ಶಾಲಾ, ಕಾಲೇಜು ತೆರೆದು, ವಿದ್ಯಾದಾನ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎ.ಆರ್.ಮುತ್ತಣ್ಣ ಮಾತನಾಡಿ, 2005ನೇ ಇಸವಿ ಯಲ್ಲಿ ಎಲ್‌ಕೆಜಿ ಯಿಂದ ಪ್ರಾರಂಭವಾದ ವಿದ್ಯಾಸಂಸ್ಥೆ ಇವತ್ತು ದೊಡ್ಡದಾಗಿ ಬೆಳೆದಿದೆ. ಕಳೆದ 9 ವರ್ಷಗಳಿಂದ ಪ್ರತಿ ವರ್ಷ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 100ರಷ್ಟು ಫಲಿತಾಂಶ ಪಡೆಯಲಾಗಿದೆ. ಪ್ರಸಕ್ತ ವರ್ಷ ಜಿಲ್ಲಾ ಮಟ್ಟದಲ್ಲಿ ಮೂರು ರ‍್ಯಾಂಕ್‌ಗಳು ನಮ್ಮ ಕುವೆಂಪು ವಿದ್ಯಾಸಂಸ್ಥೆಗೆ ಸಿಕ್ಕಿದೆ. ಪಿಯುಸಿ ವಿಭಾಗದ ವಿಜ್ಞಾನ ವಿಭಾಗದಲ್ಲೂ ಶೇ.100ರಷ್ಟು ಫಲಿತಾಂಶ ಸಿಕ್ಕಿದೆ ಎಂದು ಹೇಳಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸಿ.ಎಸ್.ಆದ್ವಿ,( ರಾಜ್ಯಕ್ಕೆ 3ನೇ ರ‍್ಯಾಂಕ್) ಕೆ.ಸಿ.ಪಂಚಮಿ(ರಾಜ್ಯಕ್ಕೆ 4ನೇ ರ‍್ಯಾಂಕ್), ಕೆ.ಎಸ್.ತೇಜಸ್ವಿನಿ( ರಾಜ್ಯಕ್ಕೆ 5ನೇ ರ‍್ಯಾಂಕ್) ಹಾಗು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಪಡೆದ ಮಹಮ್ಮದ್ ಇರ್ಮಾನ್, ಎಸ್.ವೈ. ಹಿಮಾನಿ, ವೈ.ಎಸ್.ಧನ್ಯ, ವಾಣಿಜ್ಯ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಪಡೆದ ಕೆ.ಎಂ.ಸೃಷ್ಟಿ, ಎಂ.ಡಿ.ಖುಷಿ, ಡಿ.ಎಸ್.ಸ್ನೇಹ ಅವರುಗಳನ್ನು ಅಭಿನಂಧಿಸಲಾಯಿತು. ಇದೇ ಸಂದರ್ಭ ದಾನಿಗಳನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಬೆಂಗಳೂರಿನ ಉದ್ಯಮಿಗಳಾದ ಕೆ.ಟಿ.ಬೆಳ್ಳಿಗೌಡ, ಮಂಜೂರು ತಮ್ಮಣಿ, ಸಂಘದ ಉಪಾಧ್ಯಕ್ಷ ಎಸ್.ಬಿ.ಭರತ್ ಕುಮಾರ್, ಗೌರವ ಕಾರ್ಯದರ್ಶಿ ಎನ್.ಬಿ.ಗಣಪತಿ, ಖಜಾಂಚಿ ಜಿ.ಪಿ.ಲಿಂಗರಾಜು, ವಿದ್ಯಾಸಂಸ್ಥೆಯ ಭಾತ್ಮೀದಾರರಾದ ಕೆ.ಎಂ.ಜಗದೀಶ್, ಸಮುದಾಯಭವನ ಉಸ್ತುವಾರಿ ಕೆ.ಟಿ.ಪರಮೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ ಮತ್ತು ಸಂಘದ ನಿರ್ದೇಶಕರುಗಳು, ವಿಶೇಷ ಅಹ್ವಾನಿತರಾದ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ.ಚಂಗಪ್ಪ, ಪ್ರಗತಿಪರ ಮಹಿಳಾ ವೇದಿಕೆ ಅಧ್ಯಕ್ಷೆ ಚಂದ್ರಿಕಾ ಕುಮಾರ್, ನಗರ ಗೌಡ ಒಕ್ಕೂಟದ ಅಧ್ಯಕ್ಷ ಎಂ.ಎಂ.ಪ್ರಕಾಶ್ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.