Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ : ಕನ್ನಡದ ಅಸ್ಮಿತೆಯನ್ನು ಕಟ್ಟುವ ಕೆಲಸವಾಗಬೇಕು : ಭರಮಣ್ಣ ಬೆಟ್ಟಗೇರಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ : ಕನ್ನಡದ ಅಸ್ಮಿತೆಯನ್ನು ಕಟ್ಟುವ ಕೆಲಸವಾಗಬೇಕು : ಭರಮಣ್ಣ ಬೆಟ್ಟಗೇರಿ*

ನವೆಂಬರ್ 3, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ನ.3 NEWS DESK : ಕನ್ನಡ ಭಾಷೆಯನ್ನು ಬಳಸಿ ಉಳಿಸಿ ಬೆಳೆಸಬೇಕಾಗಿದೆ, ಕನ್ನಡದ ಅಸ್ಮಿತೆಯನ್ನು ಕಟ್ಟುವಂತಹ ಕೆಲಸ ಪ್ರತಿಯೊಬ್ಬರಿಂದಲೂ ಆಗಬೇಕು ಎಂದು ರಂಗಭೂಮಿ ಕಲಾವಿದ ಕೂಡ್ಲೂರಿನ ಭರಮಣ್ಣ ಟಿ.ಬೆಟಗೇರಿ ಮನವಿ ಮಾಡಿದರು.  ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಕುವೆಂಪು ಕನ್ನಡ ಭಾಷಾ ಸಂಘದ ವತಿಯಿಂದ ಕುಶಾಲನಗರ ಭಾರತ್ ಸ್ಕೌಟ್ಸ್, ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆ ಹಾಗೂ ಕುಶಾಲನಗರ ಲಯನ್ಸ್ ಕ್ಲಬ್ ನ ಸಹಯೋಗದೊಂದಿಗೆ ಶಾಲಾ ಅಂಗಳದಲ್ಲಿ ಏರ್ಪಡಿಸಿದ್ದ 70 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ನಾಡು- ನುಡಿ, ಸಂಸ್ಕೃತಿ ಹಾಗೂ ಪರಂಪರೆಯ ವೈಭವದ ಬಗ್ಗೆ ಮಾತನಾಡಿದರು. ಇಂದು ಹೆಮ್ಮೆಯಿಂದ ಆಚರಿಸುತ್ತಿರುವ ಕನ್ನಡ ರಾಜ್ಯೋತ್ಸವದ ಹಿಂದೆ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಹೋರಾಟವಿದೆ. ಸಹಸ್ರಾರು ಜನ ಕನ್ನಡಿಗರು ಆಡಳಿತಾತ್ಮಕ ಹಾಗೂ ಭಾವನಾತ್ಮಕ ಐಕ್ಯತೆಗಾಗಿ ಹಗಲಿರುಳು ದುಡಿದಿದ್ದಾರೆ ಎಂದರು. ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸುವ ಮೂಲಕ ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಭರಮಣ್ಣ ಬೆಟಗೇರಿ ಹೇಳಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ನಮ್ಮ ಕನ್ನಡದ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವುದರ ಮೂಲಕ ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸಲಾಗುತ್ತಿದೆ. ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ನೆನೆದು ಮೆಲುಕುಹಾಕುವುದು ನಮ್ಮ ಆದ್ಯ ಕರ್ತವ್ಯ ಎಂದರು. ಭಾರತ್ ಸ್ಕೌಟ್ಸ್, ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಮಾತನಾಡಿ, ಈ ಶಾಲೆಯಲ್ಲಿ ಕನ್ನಡ ಭಾಷಾ ಚಟುವಟಿಕೆಗಳ ಜತೆಗೆ ವಿಜ್ಞಾನ, ಪರಿಸರ, ಸಾಹಿತ್ಯ, ಸಂಸ್ಕೃತಿ ಚಟುವಟಿಕೆಗಳ ಜತೆಗೆ ಕ್ರೀಡೆ, ಸ್ಕೌಟ್ಸ್, ಗೈಡ್ಸ್ ಚಟುವಟಿಕೆಗಳ ಮೂಲಕ ಮಕ್ಕಳಲ್ಲಿ ಉತ್ತಮ ಕೌಶಲಗಳನ್ನು ಕಲಿಸುತ್ತಿರುವುದು ಶ್ಲಾಘನೀಯವಾದುದು ಎಂದರು. ಕನ್ನಡ ಭಾಷೆಯ ಬೆಳವಣಿಗೆ ಮತ್ತು ಸಂವೃದ್ದಿ ಕುರಿತು ಮಾತನಾಡಿದ ಶಾಲೆಯ ಕನ್ನಡ ಭಾಷಾ ಶಿಕ್ಷಕ ಕೆ.ಗೋಪಾಲಕೃಷ್ಣ,
ಕರ್ನಾಟಕ ಏಕೀಕರಣವಾದ ದಿನವೇ ರಾಜ್ಯೋತ್ಸವ ದಿನ. ಹಲವು ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರ ಹಲವು ಪ್ರದೇಶಗಳನ್ನು ಒಂದುಗೂಡಿಸಿ, 1956ರ ನವೆಂಬರ್ 1 ರಂದು ಏಕೀಕರಣ ಮಾಡಲಾಯಿತು. ಈ ಏಕೀಕರಣಕ್ಕೆ ಶ್ರಮಿಸಿದವರನ್ನು ನಾವು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು. ಕುಶಾಲನಗರ ಲಯನ್ಸ್ ಕ್ಲಬ್ ನ ಅಧ್ಯಕ್ಷ ಎನ್.ಟಿ.ನಾರಾಯಣ ಮಾತನಾಡಿ, ವಿದ್ಯಾರ್ಥಿಗಳು ನಾಡು- ನುಡಿ ,ಸಂಸ್ಕೃತಿಯ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬೇಕು ಎಂದರು. ಲಯನ್ಸ್ ಕ್ಲಬ್ ನ ಉಪಾಧ್ಯಕ್ಷ ಕೆ.ಎನ್.ಪವನ್ ಕುಮಾರ್ ಮಾತನಾಡಿ, ಕಲೆ,ಸಂಸ್ಕೃತಿಯ ಬೀಡಾದ ಕನ್ನಡನಾಡಿನಲ್ಲಿ ನಾಡು-ನುಡಿ ಬೆಳವಣಿಗೆಗೆ ಎಲ್ಲರೂ ಕಂಕಣಬದ್ಧರಾಗಬೇಕಿದೆ ಎಂದರು. ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ಎಸ್.ದಯಾನಂದ್,ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್, ಲಯನ್ಸ್ ಕ್ಲಬ್ ನ ಕಾರ್ಯದರ್ಶಿ ಕಿರಣ್ ಕುಮಾರ್, ಸದಸ್ಯರಾದ ಹರೀಶ್ ಗಣಪತಿ , ಕುಮಾರ್, ಸಂಧ್ಯಾ ನಾರಾಯಣ್, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು. ಶಾಲಾ ಮಕ್ಕಳು ನಾಡು- ನುಡಿ, ಸಂಸ್ಕೃತಿಗೆ ಸಂಬಂಧಿಸಿದಂತೆ ಭಾಷಣ ಹಾಗೂ ಕನ್ನಡ ಗೀತೆಗಳನ್ನು ಹಾಡಿ ಗಮನ ಸೆಳೆದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15 : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ…

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.