Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಪಾಯವನ್ನು ಆಹ್ವಾನಿಸುತ್ತಿರುವ ರಸ್ತೆ : ಬ್ಯಾರಿಕೇಡ್ ಅಳವಡಿಸಲು ಆಮ್ ಆದ್ಮಿ ಪಾರ್ಟಿ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಪಾಯವನ್ನು ಆಹ್ವಾನಿಸುತ್ತಿರುವ ರಸ್ತೆ : ಬ್ಯಾರಿಕೇಡ್ ಅಳವಡಿಸಲು ಆಮ್ ಆದ್ಮಿ ಪಾರ್ಟಿ ಒತ್ತಾಯ*

ನವೆಂಬರ್ 3, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.3 NEWS DESK : ಮಡಿಕೇರಿ ನಗರದಿಂದ ವಿರಾಜಪೇಟೆಗೆ ತೆರಳುವ ರಸ್ತೆಯಲ್ಲಿ ಮೂರನೇ ಮೈಲು ಭಾಗದಲ್ಲಿ ಮರಳಿನ ತಡೆಗೋಡೆ ಅಪಾಯಕಾರಿ ಸ್ಥಿತಿಯಲ್ಲಿದ್ದು, ಬ್ಯಾರಿಕೇಡ್ ಅಳವಡಿಸಬೇಕೆಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ಅವರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ್ದ ಅವರು ರಸ್ತೆಯ ಸ್ಥಿತಿಗತಿಯ ಬಗ್ಗೆ ಆತಂಕ ವ್ಯಕ್ತಪಡಿಸಿದರು. ನಿರಂತರ ಮಳೆಯಿಂದ ರಸ್ತೆ ಕುಸಿದ ಪ್ರದೇಶದಲ್ಲಿ ತಾತ್ಕಾಲಿಕವಾಗಿ ಮರಳಿನ ತಡೆಗೋಡೆಯನ್ನು ನಿರ್ಮಿಸಲಾಗಿದೆ. ಆದರೆ ಈ ಅಪಾಯಕಾರಿ ತಿರುವಿನಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಕಿರಿದಾದ ರಸ್ತೆಯಲ್ಲಿ ಸಾಗುವ ವಾಹನಗಳು ನಿಯಂತ್ರಣ ತಪ್ಪಿ ಉರುಳುವ ಸಾಧ್ಯತೆ ಇದೆ. ರಾತ್ರಿ ವೇಳೆ ಮತ್ತು ದಟ್ಟ ಮಂಜು ಕವಿದ ವಾತಾವರಣದಲ್ಲಿ ಅಪಾಯ ಎದುರಾಗಬಹುದು. ಅನಾಹುತ ಸಂಭವಿಸುವ ಮೊದಲು ಸಂಬಂಧಿಸಿದ ಇಲಾಖೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು. ತಾತ್ಕಾಲಿಕ ಕ್ರಮವಾಗಿ ತುರ್ತಾಗಿ ಬ್ಯಾರಿಕೇಡ್ ಅಳವಡಿಸಬೇಕು ಎಂದು ಆಗ್ರಹಿಸಿದರು. ಈಗಾಗಲೇ ಮಳೆ ಸಂಪೂರ್ಣವಾಗಿ ನಿಂತು ಹೋಗಿದ್ದು, ತಕ್ಷಣ ತಡೆಗೋಡೆ ನಿರ್ಮಾಣದ ಕಾಮಗಾರಿಯನ್ನು ಆರಂಭಿಸಬೇಕು. ತಡೆಗೋಡೆ ಶಾಶ್ವತ ಪರಿಹಾರವಾಗುವುದರಿಂದ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು. ಈ ಬಗ್ಗೆ ಜಿಲ್ಲೆಯ ಶಾಸಕರುಗಳು ಆಸಕ್ತಿ ತೋರಬೇಕು. ಕೊಡಗಿನ ಬಹುತೇಕ ಭಾಗಗಳಲ್ಲಿ ಮಳೆಯಿಂದ ರಸ್ತೆಗಳು ಹದಗೆಟ್ಟಿವೆ ಮತ್ತು ಬರೆಗಳು ಕುಸಿದಿವೆ. ಜಿಲ್ಲೆಯಲ್ಲಿ ಮಳೆಗಾಲ ಮುಗಿದಿದ್ದು, ಬಿಸಿಲಿನ ವಾತಾವರಣ ಮೂಡಿದೆ. ಇನ್ನಾದರು ರಸ್ತೆಗಳ ಅಭಿವೃದ್ಧಿ ಮತ್ತು ತಡೆಗೋಡೆಗಳ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಕ್ಕಾಟಿರ ಅಪ್ಪಯ್ಯ ಒತ್ತಾಯಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.