
ಮಡಿಕೇರಿ ನ.4 NEWS DESK : ಪ್ರಸಕ್ತ(2025-26) ಸಾಲಿನಲ್ಲಿ ಕೊಡಗು ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ 9 ರಿಂದ 16 ವರ್ಷದ ಮಕ್ಕಳಿಗೆ ನೃತ್ಯ, ಚಿತ್ರಕಲೆ, ವಿಜ್ಞಾನದಲ್ಲಿ ಸೃಜನಾತ್ಮಕ ಆವಿಷ್ಕಾರ ಹಾಗೂ ವಾದ್ಯ ಸಂಗೀತ ಸ್ಪರ್ಧೆಯನ್ನು ಹಾಗೂ ಕಥೆ, ಕವನ, ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತಿ ಇರುವ ಮಕ್ಕಳು ನ.10 ರೊಳಗೆ ದೂ.ಸಂ. 6363285685, 8618861505 ನ್ನು ಬೆಳಗ್ಗೆ 10.30 ರಿಂದ 5 ಗಂಟೆಯೊಳಗೆ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಸನ್ನ ಕುಮಾರ್ ಡಿ.ಆರ್. ಅವರು ತಿಳಿಸಿದ್ದಾರೆ.








