Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಉದ್ಘಾಟನೆ : ಕಲಾ ಪ್ರತಿಭೆಗಳು ಸಮಾಜದ ಬೆಳವಣಿಗೆಗೆ ಅತ್ಯಗತ್ಯ : ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಉದ್ಘಾಟನೆ : ಕಲಾ ಪ್ರತಿಭೆಗಳು ಸಮಾಜದ ಬೆಳವಣಿಗೆಗೆ ಅತ್ಯಗತ್ಯ : ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ*

ನವೆಂಬರ್ 4, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.4 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ನಡೆದ ಕಲಾ ಪ್ರತಿಭೋತ್ಸವದಲ್ಲಿ ಜಿಲ್ಲೆಯ ವಿವಿಧೆಡೆಯಿಂದ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಒಂದು ಕಡೆ ಶಾಸ್ತ್ರೀಯ ನೃತ್ಯ, ಮತ್ತೊಂದು ಕಡೆ ಜನಪದ ಗೀತೆ, ಇನ್ನೊಂದು ಕಡೆ ಚಿತ್ರಕಲೆ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಹೀಗೆ ಕಲಾ ಪ್ರತಿಭೋತ್ಸವದಲ್ಲಿ ನೂರಾರು ವಿದ್ಯಾರ್ಥಿಗಳು ಲವಲವಿಕೆಯಿಂದ ಪಾಲ್ಗೊಂಡಿದ್ದು ಕಂಡುಬಂದಿತು.  ನಗರದ ಗಾಂಧಿ ಭವನದಲ್ಲಿ ನಡೆದ ಕಲಾ ಪ್ರತಿಭೋತ್ಸವದಲ್ಲಿ ಬಾಲಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆ ಹೀಗೆ ಸಮೂಹ ಸ್ಪರ್ಧೆಗಳು ನಡೆದಿದ್ದು ವಿಶೇಷವಾಗಿತ್ತು. :: ಬಾಲ ಪ್ರತಿಭೆ ::  ಶಾಸ್ತ್ರೀಯ ನೃತ್ಯ, ಜನಪದ ಗೀತೆ, ಚಿತ್ರಕಲೆ, ಕರ್ನಾಟಕ/ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಕರ್ನಾಟಕ/ಹಿಂದೂಸ್ತಾನಿ ವಾದ್ಯ ಸಂಗೀತ, ಸುಗಮ ಸಂಗೀತ. :: ಕಿಶೋರ ಪ್ರತಿಭೆ :: ಚಿತ್ರಕಲೆ, ಕರ್ನಾಟಕ/ ಹಿಂದೂಸ್ತಾನಿ ಸಂಗೀತ, ಶಾಸ್ತ್ರೀಯ ನೃತ್ಯ, ಜನಪದ ಗೀತೆ, ಕರ್ನಾಟಕ/ ಹಿಂದೂಸ್ತಾನಿ ವಾದ್ಯ ಸಂಗೀತ  ಮತ್ತು ಸುಗಮ ಸಂಗೀತ :: ಯುವ ಪ್ರತಿಭೆ :: ಚಿತ್ರಕಲೆ, ಕರ್ನಾಟಕ/ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ನನ್ನ ಮೆಚ್ಚಿನ ಸಾಹಿತಿ ಆಶುಭಾಷಣ, ಶಾಸ್ತ್ರೀಯ ನೃತ್ಯ, ನಾಟಕ(ಸಮೂಹ ಸ್ಪರ್ಧೆ), ಕರ್ನಾಟಕ/ಹಿಂದೂಸ್ತಾನಿ ವಾದ್ಯ ಸಂಗೀತ ಹಾಗೂ ಸುಗಮ ಸಂಗೀತ ಮತ್ತಿತರ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಲಾಗಿತ್ತು.  ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಮಕ್ಕಳು ಮತ್ತು ಯುವಜನರ ಕಲಾಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾ ನೈಪುಣ್ಯ ವೃದ್ಧಿಗೊಳಿಸುವಂತೆ ಪ್ರೋತ್ಸಾಹಿಸಲು ಕಲಾ ಪ್ರತಿಭೋತ್ಸವ ರೂಪಿಸಲಾಗಿದೆ ಎಂದರು.  ಮಕ್ಕಳ ಆತ್ಮವಿಶ್ವಾಸ ವೃದ್ಧಿಸುವ ಮತ್ತು ಕಲಾವಿದರನ್ನು ಪ್ರೇರೇಪಿಸುವುದು ಇದರ ಉದ್ದೇಶವಾಗಿದೆ. ಕಲಾ ಪ್ರತಿಭೆಗಳು ಸಮಾಜದ ವಿಜ್ಞಾನ, ತಂತ್ರಜ್ಞಾನ, ಕ್ರೀಡೆ ಮುಂತಾದವು ಬೆಳವಣಿಗೆಗೆ ಅತ್ಯಗತ್ಯ ಎಂದರು. ಕಲಾಪ್ರತಿಭೋತ್ಸವದಿಂದ ವಿದ್ಯಾರ್ಥಿಗಳಿಗೆ ಕಲೆ, ಸಂಗೀತ, ನೃತ್ಯ ಹಾಗೂ ಅನೇಕ ಪ್ರತಿಭೆಗಳನ್ನು ಬೆಳೆಸಲು ಸಾಧ್ಯ ಎಂದು ಹೇಳಿದರು. ಕೊಡಗು ಜಿಲ್ಲೆಯ ಮಕ್ಕಳಲ್ಲಿ ಅಸಾಮಾನ್ಯ ಪ್ರತಿಭೆಗಳು ಅಡಗಿವೆ. ತಮ್ಮ ಕಲೆಗಳ ಮೂಲಕ ಜಿಲ್ಲೆಯ ಗೌರವವನ್ನು ಹೆಚ್ಚಿಸುತ್ತಿದ್ದಾರೆ. ಸೋಲು ಅಥವಾ ಗೆಲುವು ಮುಖ್ಯವಲ್ಲ. ಪಾಲ್ಗೊಳ್ಳುವುದು ಮತ್ತು ಧೈರ್ಯದಿಂದ ಪ್ರದರ್ಶಿಸುವುದು ಅತ್ಯಂತ ಮುಖ್ಯ ಎಂದರು. ಕೊಡುಗು ಜಿಲ್ಲೆಯಲ್ಲಿ ಮತ್ತಷ್ಟು ಪ್ರತಿಭಾವಂತರು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಬೆಳಗಲಿ ಎಂದು ಆಶಿಸಿದರು.  ಕೊಡಗು ಜಾನಪದ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಬಿ.ಜಿ.ಅನಂತಶಯನ ಅವರು ಮಾತನಾಡಿ ಗುರಿ ಇಟ್ಟುಕೊಂಡರೆ ಜೀವನದಲ್ಲಿ ಮುಂದೆ ಸಾಗಲು ಸಾಧ್ಯ. ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು. ಪ್ರತಿಯೊಬ್ಬರಲ್ಲಿಯೂ ಒಂದೊಂದು ರೀತಿಯ ಪ್ರತಿಭೆ ಇದ್ದು, ಇಂತಹ ಕಲಾ ಪ್ರತಿಭೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ತಮ್ಮಲ್ಲಿರುವ ಕಲೆಗಳ ಪ್ರದರ್ಶನಕ್ಕೆ ಅವಕಾಶವಿದೆ. ಆ ನಿಟ್ಟಿನಲ್ಲಿ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದು ಬಿ.ಜಿ.ಅನಂತಶಯನ ಅವರು ಹೇಳಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಚಿದಾನಂದ ಕುಮಾರ್ ಅವರು ಮಾತನಾಡಿ ಕೊಡಗು ಜಿಲ್ಲೆಯ ಮಕ್ಕಳಲ್ಲಿ ಪ್ರತಿಭೆಗಳನ್ನು ಅನಾವರಣಗೊಳಿಸಲು ಈ ವೇದಿಕೆಯು ಉತ್ತಮ ಅವಕಾಶವಾಗಿದೆ ಎಂದು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಮುನೀರ್ ಅಹಮ್ಮದ್ ಅವರು ಮಾತನಾಡಿ ಪ್ರತಿಭಾ ಉತ್ಸವಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಮಹತ್ವವಾಗಿದೆ ಎಂದು ಹೇಳಿದರು.  ಶಾಲಾ ಶಿಕ್ಷಣ ಇಲಾಖೆಯ ಕೆ.ಆರ್.ಬಿಂದು ಅವರು ಮಾತನಾಡಿ ಯಾವುದೇ ಪ್ರತಿಭೆ  ಸ್ಪರ್ಧೆಗಳಲ್ಲಿ ಭಾಗವಹಿಸಿದರೆ ಗೆದ್ದರೆ ಪ್ರಶಸ್ತಿ ಹಾಗೂ ಸೋತರೆ ಅನುಭವ ಸಿಗುತ್ತೆ ಎಂಬ ಮನಸ್ಥಿತಿಯೊಂದಿಗೆ ಪಾಲ್ಗೊಳ್ಳಬೇಕು ಎಂದು ಸಲಹೆ ಮಾಡಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಸ್ವಾಗತಿಸಿದರು. ಬಿ.ಸಿ.ಶಂಕರಯ್ಯ ನಾಡಗೀತೆ ಹಾಡಿದರು. ಅನಿತಾ ನಿರೂಪಿಸಿದರು. ಮಣಜೂರು ಮಂಜುನಾಥ್ ವಂದಿಸಿದರು. ವಿದ್ಯಾರ್ಥಿಗಳು, ಪೆÇೀಷಕರು ಇತರರು ಇದ್ದರು.

 

 

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.