Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತೊರೆನೂರು ವಿರಕ್ತ ಮಠದಲ್ಲಿ ಶಿವಾನುಭವ ಗೋಷ್ಠಿ : ಶರಣರ ನಡೆ-ನುಡಿ ಸಿದ್ಧಾಂತ ಮಾದರಿಯಾದುದು : ಕಲ್ಮಠದ ಮಹಾಂತ ಸ್ವಾಮೀಜಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತೊರೆನೂರು ವಿರಕ್ತ ಮಠದಲ್ಲಿ ಶಿವಾನುಭವ ಗೋಷ್ಠಿ : ಶರಣರ ನಡೆ-ನುಡಿ ಸಿದ್ಧಾಂತ ಮಾದರಿಯಾದುದು : ಕಲ್ಮಠದ ಮಹಾಂತ ಸ್ವಾಮೀಜಿ*

ನವೆಂಬರ್ 6, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ನ.6 NEWS DESK : 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದ ಬಸವಣ್ಣ ಮತ್ತು ಬಸವಾದಿ ಶರಣರದು ನಡೆ- ನುಡಿ ಸಿದ್ಧಾಂತ. ನುಡಿದಂತೆ ನಡೆದು ತೋರಿದ ಸಾತ್ವಿಕ ಧೀಮಂತರು, ಕಾಯಕ ಯೋಗಿಗಳು. ಅವರದು ದಯಾಮೂಲವಾದ ಧರ್ಮವಾಗಿತ್ತು ಎಂದು
ಕೊಡ್ಲಿಪೇಟೆ ಕಲ್ಮಠದ ಮಹಾಂತ ಸ್ವಾಮೀಜಿ ಹೇಳಿದರು. ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ ಘಟಕ ಹಾಗೂ ತೊರೆನೂರು ವಿರಕ್ತ ಮಠದ ವತಿಯಿಂದ ತೊರೆನೂರು ವಿರಕ್ತ ಮಠದಲ್ಲಿ ಬುಧವಾರ ಸಂಜೆ ನಡೆದ ಮಾಸಿಕ ಹುಣ್ಣಿಮೆ‌ ಪೂಜಾ ಮಹೋತ್ಸವ ಹಾಗೂ ಶಿವಾನುಭವ ಗೋಷ್ಠಿಯಲ್ಲಿ 12ನೇ ಶತಮಾನದ ಶರಣರ ಸಾಮಾಜಿಕ ಮೌಲ್ಯಗಳು ಕುರಿತು ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದರು. ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಕಲಿಸುವ ಮೂಲಕ ಅವರನ್ನು ಸಮಾಜದ ಉತ್ತಮ ನಾಗರಿಕರನ್ನಾಗಿ ರೂಪಿಸುವ ಜವಾಬ್ದಾರಿ ಇದೆ. ಇದರಲ್ಲಿ ತಾಯಂದಿರ ಪಾತ್ರ ಪ್ರಮುಖವಾಗಿದೆ ಎಂದರು. ‌‌‌‌‌‌ಅಂದು ಶರಣರು ಪೂಜೆಗಿಂತಲೂ ಹೆಚ್ಚಿನ ಮಹತ್ವವನ್ನು ದುಡಿಮೆಗೆ ಕೊಟ್ಟಿದ್ದರು. ಕಾಯಕ ಅವರ ಪಂಚಪ್ರಾಣವಾಗಿತ್ತು. ಕಾಯಕ ಮಾಡದವನಿಗೆ ಪ್ರಸಾದ ತೆಗೆದುಕೊಳ್ಳುವ ಹಕ್ಕಿಲ್ಲವೆಂಬುದು ಅವರ ಸಿದ್ಧಾಂತವಾಗಿತ್ತು. ಆದ್ದರಿಂದ 12ನೇ ಶತಮಾನದಲ್ಲಿ ಕಾಯಕಯೋಗಿಗಳು ಇದ್ದರೆ ಹೊರತು ಸೋಮಾರಿಗಳೇ ಇರಲಿಲ್ಲ’ ಎಂದು ಸ್ವಾಮೀಜಿ ಅಭಿಪ್ರಾಯಪಟ್ಟರು. ಸಮಾಜಕ್ಕೆ ಶರಣರ ಮೌಲ್ಯಗಳು ಕುರಿತು ಉಪನ್ಯಾಸ ನೀಡಿದ ಕುಶಾಲನಗರ ಮೂಕಾಂಬಿಕಾ ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕ ಕೆ.ಎಂ.ಕಾಂತರಾಜು ಮಾತನಾಡಿ,
ಬಸವಾದಿ ಶರಣರ ಸಮಾನತೆಯ ತತ್ವ ಹಾಗೂ ಮಾನವೀಯ ಮೌಲ್ಯಗಳು ಇಂದಿನ ಸಮಾಜಕ್ಕೆ ಅತ್ಯಗತ್ಯವಾಗಿವೆ ಎಂದರು. ಶರಣರ ವಚನಗಳು ಆದರ್ಶ, ತತ್ವ ಹಾಗೂ ಮೌಲ್ಯಗಳನ್ನು ಒಳಗೊಂಡಿವೆ. ಶರಣರ ಆದರ್ಶ ಹಾಗೂ ತತ್ವಗಳನ್ನು ನಾವು ಅಳವಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಿಸಲು ಸಾಧ್ಯವಾಗುತ್ತದೆ ಎಂದರು. ಯಾರು ಅಹಂಕಾರವನ್ನು ತೊರೆದು ತನು ,ಮನ, ಧನವನ್ನು ಸಮಾಜಕ್ಕೆ ಸಮರ್ಪಿಸುವನೋ ಅವರೇ ನಿಜವಾದ ಶರಣರು.
ಬಸವಾದಿ ಶರಣರ ಬದುಕು ಸಮಾಜದ ಮೇಲೆ ಅಪಾರವಾದ ಪರಿಣಾಮವನ್ನು ಬೀರಿವೆ. ಅಂತಹ ಅಂಶಗಳೆಂದರೆ ಕಾಯಕ ತತ್ವ, ದಾಸೋಹ ,ಜಾತಿ ವ್ಯವಸ್ಥೆ, ಸಮಾನತೆ ಇತ್ಯಾದಿ. ತಮ್ಮ ವೃತ್ತಿಯಲ್ಲಿ ದೈಹಿಕ ಶ್ರಮದ ಜತೆಗೆ ನಿಷ್ಠೆ ,ಭಕ್ತಿ ಮತ್ತು ಸಮರ್ಪಣಾ ಭಾವದಿಂದ ಮಾಡುವ ಒಂದು ಆಧ್ಯಾತ್ಮಿಕ ಕ್ರಿಯೆಯೇ ಕಾಯಕ ಎಂದು ಕಾಂತರಾಜು ಹೇಳಿದರು.  ಸಾನಿಧ್ಯ ವಹಿಸಿದ್ದ ತೊರೆನೂರು ವಿರಕ್ತ ಮಠದ ಮಲ್ಲೇಶ ಸ್ವಾಮೀಜಿ ಮಾತನಾಡಿ, ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಬಸವಾದಿ ಶರಣರ ಕೊಡುಗೆಗಳು ಅಪಾರವಾಗಿವೆ .ಅವುಗಳನ್ನು ನಾವು ಪರಿಪಾಲಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಬೇಕು ಎಂದರು. ವೀರಶೈವ- ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಚ್.ವಿ.ಶಿವಪ್ಪ ಮಾತನಾಡಿ ಬಸವಾದಿ ಶರಣ ಶರಣೆಯರ ಪ್ರತಿಯೊಂದು ವಚನಗಳಲ್ಲಿ ಜೀವನ ಮೌಲ್ಯಗಳ ತುಡಿತ ಅಡಗಿದೆ. ಶರಣರ ವಚನಗಳ ಮಹತ್ವ ಹಾಗೂ ಶರಣರ ಮೌಲ್ಯಗಳ ಬಗ್ಗೆ ಸಮಾಜಕ್ಕೆ ಅರಿವು ಮೂಡಿಸಲು ಇಂತಹ ಶಿವಾನುಭವ ಗೋಷ್ಠಿಗಳ ಮೂಲಕ ವಿಚಾರಗೋಷ್ಠಿಗಳನ್ನು ಸಂಘಟಿಸಲಾಗುತ್ತಿದೆ ಎಂದರು. :: ಸನ್ಮಾನ :: ಇದೇ ವೇಳೆ
ವಿವಿಧ ಕ್ಷೇತ್ರದ ವ್ಯಕ್ತಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರಾಗಿ ನೂತನವಾಗಿ ಆಯ್ಕೆಗೊಂಡಿರುವ ತೊರೆನೂರು ಗ್ರಾಮದ ಎಚ್.ಬಿ.ಚಂದ್ರಪ್ಪ, ಗುಡ್ಡೆಹೊಸೂರು ಗ್ರಾಮದ ಬಿ.ಸಿ.ಮಲ್ಲಿಕಾರ್ಜುನ, ಜಿಲ್ಲೆಯಲ್ಲಿ ತಮ್ಮನ್ನು ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಪರಿಸರ ಪ್ರಶಸ್ತಿ ಪುರಸ್ಕೃತರಾದ ಪರಿಸರ ಪ್ರೇಮಿ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಹಾಗೂ ಅರಣ್ಯ ಶಾಸ್ತ್ರ ಪದವಿಯಲ್ಲಿ ರ್‍ಯಾಂಕ್ ಗಳಿಸಿದ್ದು, ಇದೀಗ ಐಡಿಬಿಐ ಬ್ಯಾಂಕ್ ನ ಕಿರಿಯ ಸಹಾಯಕ ವ್ಯವಸ್ಥಾಪಕಿಯಾಗಿರುವ ಹೆಬ್ಬಾಲೆ ಮರೂರಿನ ಕುಮಾರಿ ಸುಪ್ರೀತ ಮಹದೇವ್ ಅವರನ್ನು ಮಹಾಸಭಾದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲಾ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಟಿ.ಎಸ್.ಶಾಂಭಶಿವಮೂರ್ತಿ, ಕೋಶಾಧಿಕಾರಿ ಎಚ್.ಪಿ.ಉದಯ್ ಕುಮಾರ್, ನಿರ್ದೇಶಕ ಎಂ.ಎಸ್.ಗಣೇಶ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಕೋಶಾಧಿಕಾರಿ ನಟರಾಜ್, ಸ್ಥಳೀಯರಾದ ಟಿ.ಎಸ್.ಚಂದ್ರಶೇಖರ್, ಟಿ.ಎನ್.ಶಿವಾನಂದ, ಟಿ.ಜಿ.ರಮೇಶ್, ಟಿ.ಸಿ.ಸುರೇಶ್, ಮಣಜೂರು ಗುರುಲಿಂಗಪ್ಪ ಇತರರು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.