Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್‌ಗೆ ‘ಗೃಹಶೋಭಾ ಇನ್‌ ಸ್ಪೈರ್ ಪ್ರಶಸ್ತಿ’ಯ ಗರಿ’*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್‌ಗೆ ‘ಗೃಹಶೋಭಾ ಇನ್‌ ಸ್ಪೈರ್ ಪ್ರಶಸ್ತಿ’ಯ ಗರಿ’*

ನವೆಂಬರ್ 6, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ನ.6 : ಚಲನಚಿತ್ರ ರಂಗದಲ್ಲಿ ಅಮೋಘ ಸಾಧನೆ ಮಾಡುತ್ತಿರುವ ಕೊಡಗಿನ ಮೊದಲ ಮಹಿಳಾ ನಿರ್ದೇಶಕಿ ಹಾಗೂ ರಾಷ್ಟ್ರೀಯ ಪ್ರಶಸ್ತಿ ವಿಜೇತೆ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ‘ಗೃಹಶೋಭಾ ಇನ್‌ ಇನ್‌ ಸ್ಪೈರ್ ಪ್ರಶಸ್ತಿ’ ಗೆ ಭಾಜನರಾಗಿದ್ದಾರೆ. ಬೆಂಗಳೂರಿನ ಇಂಟರ್ ನ್ಯಾಷನಲ್ ಸೆಂಟರ್ ಸಭಾಂಗಣದಲ್ಲಿ ನಡೆದ ‘ಗೃಹಶೋಭಾ ಇನ್‌ ಇನ್‌ ಸ್ಪೈರ್ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಯಶೋಧ ಪ್ರಕಾಶ್ ಅವರಿಗೆ ಮನೋರಂಜನೆಯ ಮೂಲಕ ಮಹಿಳಾ ಸಬಲೀಕರಣ ಮತ್ತು ಸಿನಿಮಾ ರಂಗದ ತಾಂತ್ರಿಕ ವಿಭಾಗದ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಡೆಲ್ಲಿ ಪ್ರೆಸ್ ನ ಪ್ರಧಾನ ಸಂಪಾದಕ ಪರೇಶ್‌ನಾಥ್ ಮಾತನಾಡಿ ಮಹಿಳಾ ಸಾಧಕರನ್ನು ಪ್ರೋತ್ಸಾಹಿಸಲು ಮತ್ತು ಮುಂದಿನ ಸಾಧನೆಗೆ ಸ್ಫೂರ್ತಿ ತುಂಬಲು ಪ್ರತಿ ವರ್ಷ ‘ಗೃಹಶೋಭಾ ಇನ್‌ ಇನ್‌ ಸ್ಪೈರ್ ಪ್ರಶಸ್ತಿ’ ಯನ್ನು ನೀಡಲಾಗುತ್ತಿದೆ ಎಂದರು. ಡೆಲ್ಲಿ ಪ್ರೆಸ್ ನ ಪ್ರಕಾಶಕ ಅನಂತ್ ನಾಥ್ ಮಾತನಾಡಿ ಮಹಿಳಾ ಪ್ರಧಾನವಾಗಿರುವ ಗೃಹಶೋಭಾ ಪುಸ್ತಕ 8 ಭಾಷೆಗಳಲ್ಲಿ ಪ್ರಕಟಗೊಳ್ಳುತ್ತಿದೆ. ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಿದೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಪ್ರಶಸ್ತಿ ವಿಜೇತ ನೃತ್ಯ ಕಲಾವಿದೆ ಮಧು ನಟರಾಜ್ ಅವರು ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ‘ಕಂದೀಲು’ ಕನ್ನಡ ಚಿತ್ರದ ಮೂಲಕ ರಾಷ್ಟ್ರೀಯ ಪ್ರಶಸ್ತಿ ಗೆದ್ದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ‘ಗೃಹಶೋಭಾ ಇನ್‌ ಇನ್‌ ಸ್ಪೈರ್ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ಈ ಪ್ರಶಸ್ತಿ ಅನಿರೀಕ್ಷಿತವಾಗಿದೆ, ನನ್ನ ಸಾಧನೆಯ ಬಗ್ಗೆ ನನ್ನಿಂದ ಯಾವುದೇ ಮಾಹಿತಿಯನ್ನು ಪಡೆದಿಲ್ಲ. ಆದರೆ ಎಲ್ಲಿಂದಲೋ ಮಾಹಿತಿ ಸಂಗ್ರಹಿಸಿ ನನಗೆ ಪ್ರಶಸ್ತಿ ಘೋಷಣೆ ಮಾಡಿದ್ದಾರೆ. ಈ ಪ್ರಶಸ್ತಿ ನನ್ನ ಸಿನಿ ಸೇವೆಗೆ ಮತ್ತಷ್ಟು ಉತ್ತೇಜನ ನೀಡಿದೆ. ಇದು ಅತ್ಯಂತ ಸಂತಸದ ಕ್ಷಣ ಎಂದು ಹರ್ಷ ವ್ಯಕ್ತಪಡಿಸಿದರು. ನನ್ನ ನಿರ್ದೇಶನದ ‘ಕಂದೀಲು’ ಕನ್ನಡ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ದೊರೆತ್ತಿದೆ, ಇದೀಗ ‘ಕೌಮುದಿ’ ಎಂಬ ಚಿತ್ರವನ್ನು ಪೂರ್ಣಗೊಳಿಸಿದ್ದು, ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಳ್ಳುತ್ತಿದೆ. ಈ ಚಿತ್ರ ಮೂಢನಂಬಿಕೆಗಳ ವಿರುದ್ಧ ಬೆಳಕು ಚೆಲ್ಲಿದೆ ಎಂದರು.
*ಮೊದಲ ನಿರ್ದೇಶಕಿ*
ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ರಾಷ್ಟç ಪ್ರಶಸ್ತಿ ಪಡೆದ ಕೊಡಗಿನ ಮೊದಲ ಮಹಿಳಾ ನಿರ್ದೇಶಕಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೊಲ್ಕತ್ತ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದ “ಕಂದೀಲು” ಚಲನಚಿತ್ರ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕನ್ನಡ ಸಿನಿಮಾದ ಸ್ಪರ್ಧಾತ್ಮಕ ವಿಭಾಗದಲ್ಲಿ “2ನೇ ಅತ್ಯುತ್ತಮ ಚಿತ್ರ ಪ್ರಶಸ್ತಿ” ಯನ್ನು ತನ್ನದಾಗಿಸಿಕೊಂಡಿತ್ತು. ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದ ಈ ಚಿತ್ರ ವಿಶ್ವ ವಿಖ್ಯಾತ ಮೈಸೂರು ದಸರಾ ಚಲನಚಿತ್ರೋತ್ಸವದಲ್ಲಿ ಇನಾಕ್ಸ್ ಚಿತ್ರಮಂದಿರದಲ್ಲಿ ಪ್ರದರ್ಶನಗೊಂಡು ಜನಮೆಚ್ಚುಗೆ ಪಡೆದುಕೊಂಡಿತ್ತು. ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಯಶೋಧ ಪ್ರಕಾಶ್ ನಿರ್ಮಾಣ ಮತ್ತು ನಿರ್ದೇಶನದಲ್ಲಿ ‘ಕಂದೀಲು’ ಚಿತ್ರ ಮೂಡಿ ಬಂದಿದೆ. ಇವರ ಪತಿ ಕೊಟ್ಟುಕತೀರ ಪ್ರಕಾಶ್ ಕಾರ್ಯಪ್ಪ ಅವರು ಕೂಡ ನಿರ್ಮಾಪಕ, ನಿರ್ದೇಶಕ ಹಾಗೂ ನಟರಾಗಿ ಖ್ಯಾತಿ ಗಳಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.