Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘದಿಂದ ಮಾದರಿ ಮದುವೆ : ಶತದಿನ ಅಭಿಯಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘದಿಂದ ಮಾದರಿ ಮದುವೆ : ಶತದಿನ ಅಭಿಯಾನ*

ನವೆಂಬರ್ 7, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.7 NEWS DESK : ಮುಸ್ಲಿಂ ಸಮುದಾಯದ ವಿವಾಹ ಸಮಾರಂಭಗಳಲ್ಲಿ ನುಸುಳಿರುವ ಅನಗತ್ಯ ಆಚರಣೆಗಳನ್ನು ತೊಡೆದು, ಆರ್ಥಿಕ ಭಾರವನ್ನು ನಿವಾರಿಸಿಕೊಳ್ಳುವ ಅಗತ್ಯತೆಯ ಬಗ್ಗೆ ಸಮುದಾಯ ಬಾಂಧವರಲ್ಲಿ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ(ಎಸ್‍ವೈಎಸ್) ‘ಮಾದರಿ ಮದುವೆ:ಶತದಿನ ಅಭಿಯಾನ’ ಎನ್ನುವ ವಿಶಿಷ್ಟ ಕಾರ್ಯಕ್ರಮವನನ್ನು ಹಮ್ಮಿಕೊಂಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಎಸ್‍ವೈಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ.ಅಬೂಬಕರ್ ಸಿದ್ದೀಖ್ ಅವರು ಈ ಬಗ್ಗೆ ಮಾಹಿತಿ ನೀಡಿ, ನೂರು ದಿನಗಳ ಈ ಅಭಿಯಾನಕ್ಕೆ ನ.8  ರಂದು ಎಮ್ಮೆಮಾಡಿನ ಪ್ರಸಿದ್ಧ ದರ್ಗಾದಲ್ಲಿ ವಿದ್ಯುಕ್ತ ಚಾಲನೆಯನ್ನು ನೀಡಲಾಗುತ್ತದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‍ವೈಎಸ್ ರಾಜ್ಯಾಧ್ಯಕ್ಷರಾದ ಬಶೀರ್ ಸಅದಿ ಅವರು ವಹಿಸಲಿದ್ದಾರೆ ಮತ್ತು ಹಲ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಈ ವಿನೂತನ ಅಭಿಯಾನ 2026ರ ಫೆ.15 ರಂದು ಸಮಾರೋಪಗೊಳ್ಳಲಿದೆಯೆಂದು ತಿಳಿಸಿದರು. ಇಸ್ಲಾಂ ಧರ್ಮದಲ್ಲಿ ‘ವಿವಾಹ’ ಎನ್ನುವುದು ಶ್ರೇಷ್ಠ ಸತ್ಕರ್ಮವಾಗಿರುವುದಲ್ಲದೆ, ಇದೊಂದು ವೈಯಕ್ತಿಕ, ಕೌಟುಂಬಿಕ, ಸಾಮಾಜಿಕ ಮತ್ತು ಧಾರ್ಮಿಕ ಜವಾಬ್ದಾರಿಯೂ ಆಗಿದೆ. ಹೀಗಿದ್ದೂ ಪ್ರಸ್ತುತ ವಿವಾಹವೆನ್ನುವುದು ಅನಗತ್ಯ ಆಚರಣೆಗಳ ಆಡುಂಬೊಲವಾಗಿ, ಮಾರ್ಪಟ್ಟಿದೆ.ಎಸ್‍ವೈಎಸ್ ಹೋರಾಟಗಳಿಂದ ಪ್ರಸ್ತುತ ಮುಸ್ಲಿಂ ಸಮುದಾಯದಲ್ಲಿ ಹೆಣ್ಣು ಮಕ್ಕಳ ವಿವಾಹಕ್ಕೆ ಅಡ್ಡಿಯಾಗಿದ್ದ ವರದಕ್ಷಿಣೆಯ ಪಿಡುಗು ಸಾಕಷ್ಟು ಪ್ರಮಾಣದಲ್ಲಿ ಕಡಿಮೆಯಾಗಿದೆ. ಆದರೆ, ವಿವಾಹದ ನೆಪದಲ್ಲಿ ನಡೆಯುತ್ತಿರುವ ಎಂಗೇಜ್‍ಮೆಂಟ್, ಮೆಹಂದಿ, ಹಳದಿ, ಅರೇಬಿಯನ್ ನೈಟ್, ತಾಳ ಮತ್ತಿತರ ಅನಗತ್ಯ ಆಚರಣೆಗಳು ಯುವಕರನ್ನು ಆರ್ಥಿಕವಾಗಿ ಹಿಂಡಿ ಹಿಪ್ಪೆ ಮಾಡುತ್ತಿರುವುದಾಗಿ ಬೇಸರ ವ್ಯಕ್ತಪಡಿಸಿದರು. ಇಸ್ಲಾಮಿನಲ್ಲಿ ವಿವಾಹವೆನ್ನುವುದು ಅತ್ಯಂತ ಸರಳವಾದ ಸುಂದರ ಸಮಾರಂಭ. ಆದರೆ, ಇಂದು ವಿವಾಹವೆನ್ನುವುದು ಆರ್ಥಿಕವಾದ ದೊಡ್ಡ ಹೊರೆಯಾಗಿ ಪರಿಣಮಿಸಿದ್ದು, ಬಡ ಯುವಕರು ವಿವಾಹವಾಗಲು ಹಿಂದೇಟು ಹಾಕುವ ಪರಿಸ್ಥಿತಿಗಳಿದೆ. ಇಂತಹ ವ್ಯವಸ್ಥೆಯನ್ನು ಬದಲಿಸುವ ಸುಧಾರಣಾ ಚಳವಳಿಯಾಗಿ ಶತದಿನ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ವಿಶಿಷ್ಟ ಕಾರ್ಯಕ್ರಮದ ಯಶಸ್ಸಿಗಾಗಿ ಪ್ರತಿ ಗ್ರಾಮ ಮಟ್ಟದಲ್ಲಿ ಅಲ್ಲಿನ ಜಮಾಅತ್ ಕ್ರಿಯಾ ಸಮಿತಿಗಳನ್ನು ಮಾಡಿಕೊಂಡು, ಅದರ ವ್ಯಾಪ್ತಿಯಲ್ಲಿನ ಸಮುದಾಯ ಬಾಂಧವರನ್ನು ಭೇಟಿಯಾಗಿ ಸರಳ ವಿವಾಹದ ಮಹತ್ವವನ್ನು ತಿಳಿಸುವ, ಮನಃಪರಿವರ್ತನೆ ಮಾಡುವ ಉದಾತ್ತ ಚಿಂತನೆ ಸಂಘಟನೆಯದ್ದಾಗಿದೆಯೆಂದು ಹೇಳಿದರು. :: ಬಡ ರೋಗಿಗಳಿಗೆ ನೆರವು :: ಎಸ್‍ವೈಎಸ್ ಸಂಘಟನೆ ‘ಹೃದಯ ಹೃದಯಗಳನ್ನು ಬೆಸೆಯೋಣ’ ಎನ್ನುವ ಧ್ಯೇಯ ವಾಕ್ಯದೊಂದಿಗೆ ಎರಡು ತಿಂಗಳ ಹಿಂದೆ ‘ಕರಾವಳಿ ಮಣ್ಣಿನಲ್ಲಿ ಸ್ನೇಹ ಸಂಚಾರ’ ಯಾತ್ರೆ ಬಹುಧರ್ಮೀಯರ ಸಂಗಮವಾಗಿ ಯಶಸ್ಸನ್ನು ಕಂಡಿತ್ತು, ಇದರೊಂದಿಗೆ ದೀರ್ಘಕಾಲೀನ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಔಷಧಿಗಳಿಗಾಗಿ ಮೆಡಿಕಲ್ ಕಾರ್ಡ್ ನೀಡಲಾಗುತ್ತಿದೆ. ಇದಕ್ಕೆ ಸಂಪನ್ಮೂಲ ಕ್ರೋಢೀಕರಿಸಲು ‘ಸೇವೆಗಾಗಿ ನಿರುಪಯುಕ್ತ ವಸ್ತುಗಳ ಸಂಗ್ರಹಣೆ’ ಮಾಡಲಾಗುತ್ತಿದೆ. ಮನೆ ಮನೆಗಳಿಂದ ಸಂಗ್ರಹಿಸುವ ನಿರುಪಯುಕ್ತ ವಸ್ತುಗಳ ಮಾರಾಟದಿಂದ ದೊರಕುವ ಹಣವನ್ನು ಬಡರೋಗಿಗಳ ಔಷಧಿಗೆ ವಿನಿಯೋಗಿಸಲಾಗುತ್ತದೆಯೆಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಎಸ್‍ವೈಎಸ್ ರಾಜ್ಯಾಧ್ಯಕ್ಷ ಬಶೀರ್ ಸಅದಿ, ರಾಜ್ಯ ಕೋಶಾಧಿಕಾರಿ ಮನ್ಸೂರ್ ಅಲಿ ತೀಥಹಳ್ಳಿ., ಮಾಜಿ ರಾಜ್ಯಾಧ್ಯಕ್ಷ ಅಬ್ದುಲ್ ಹಫೀಳ್ ಸಅದಿ, ಸದಸ್ಯರಾದ ಬಿ.ಯು.ಅಶ್ರಫ್ ಎಮ್ಮೆಮಾಡು, ಜಿಲ್ಲಾಧ್ಯಕ್ಷ ಮನೀರ್ ಮಹ್‍ಳರಿ ಉಪಸ್ಥಿತರಿದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.