Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವೃದ್ಧಾಶ್ರಮದಲ್ಲಿ ಶಾಸಕ ಡಾ.ಮಂತರ್ ಗೌಡ ಅವರ ಜನ್ಮದಿನ ಆಚರಿಸಿದ ದಲಿತ ಸಂಘರ್ಷ ಸಮಿತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವೃದ್ಧಾಶ್ರಮದಲ್ಲಿ ಶಾಸಕ ಡಾ.ಮಂತರ್ ಗೌಡ ಅವರ ಜನ್ಮದಿನ ಆಚರಿಸಿದ ದಲಿತ ಸಂಘರ್ಷ ಸಮಿತಿ*

ನವೆಂಬರ್ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.8 NEWS DESK : ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ಶ್ರೀ ಶಕ್ತಿ ವೃದ್ಧಾಶ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಯೋವೃದ್ಧರ ಯೋಗ ಕ್ಷೇಮ ವಿಚಾರಿಸಿದ ಸಮಿತಿಯ ಪ್ರಮುಖರು ಕೇಕ್ ಕತ್ತರಿಸಿ ಸಿಹಿ ಹಂಚಿ, ಊಟದ ವ್ಯವಸ್ಥೆಯನ್ನು ಕಲ್ಪಿಸಿ ಸಂಭ್ರಮಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವೈದ್ಯ ಹಾಗೂ ಸಮಾಜ ಸೇವಕ ಡಾ.ಹೆಚ್.ವಿ.ದೇವದಾಸ್ ಅವರು, ದಲಿತ ಸಂಘರ್ಷ ಸಮಿತಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಬಹಳ ವರ್ಷಗಳಿಂದ ತಾವು ವೃದ್ಧಾಶ್ರಮದ ನಿವಾಸಿಗಳೊಂದಿಗೆ ಓಡನಾಟ ಹೊಂದಿದ್ದು, ಮುಂದಿನ ದಿನಗಳಲ್ಲಿಯೂ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ವಯೋವೃದ್ಧರು ತಂಬಾಕು, ಧೂಮಪಾನದಂತಹ ದುಶ್ಚಟಗಳಿಂದ ದೂರವಿರಬೇಕು. ಆಗ ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು. ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಅವರು ಮಾತನಾಡಿ, ಕೊಡಗಿನಲ್ಲಿ ಕಳೆದ 20 ವರ್ಷಗಳಿಂದ ಕಾಣದಿರುವ ಅಭಿವೃದ್ಧಿ ಕಾರ್ಯಗಳು ಶಾಸಕದ್ವಯರಿಂದ ನಡೆಯುತ್ತಿದೆ. ಎಲ್ಲಾ ಸಮುದಾಯದವರನ್ನು ಸಮಾನವಾಗಿ ಕಾಣುತ್ತಿರುವ ಇಬ್ಬರು ಶಾಸಕರ ಗೆಲುವಿಗಾಗಿ ದಲಿತ ಸಂಘರ್ಷ ಸಮಿತಿ ಅವಿರತ ಪ್ರಯತ್ನ ನಡೆಸಿತ್ತು. ಇಂದು ಅವರ ಗೆಲುವು ಸಾರ್ಥಕತೆ ತಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಪಡೆದು ಉತ್ತಮ ಕಾರ್ಯಗಳನ್ನು ನಿಭಾಯಿಸುವ ಮೂಲಕ ಶಾಸಕದ್ವಯರು ರಾಜ್ಯಕ್ಕೆ ಮಾದರಿಯಾಗಬೇಕು. ಹಿರಿಯರ ಆಶೀರ್ವಾದ ಶಾಸಕರ ಮೇಲಿರಲಿ ಎನ್ನುವ ಉದ್ದೇಶದಿಂದ ಅವರ ಜನ್ಮದಿನವನ್ನು ಹಿರಿಯರೊಂದಿಗೆ ಆಚರಿಸಲಾಗುತ್ತಿದೆ ಎಂದು ಹೇಳಿದರು. ಶಿಕ್ಷಕರು ಮತ್ತು ವೃದ್ಧರು ದೇವರಿದ್ದಂತೆ, ಇದೇ ಕಾರಣಕ್ಕೆ ದಲಿತ ಸಂಘರ್ಷ ಸಮಿತಿಯು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಹಿರಿಯರನ್ನು ಗೌರವಿಸುತ್ತಾ ಬಂದಿದೆ. ವಯೋವೃದ್ಧರಿಗೆ ಶ್ವೆಟರ್, ಕಂಬಳಿ ಮತ್ತಿತರ ಸೌಲಭ್ಯಗಳನ್ನು ಒದಗಿಸುತ್ತಾ ಬಂದಿದೆ ಎಂದು ತಿಳಿಸಿದರು. ಪಕ್ಷದ ಕಾರ್ಯಕರ್ತರು ಹಾಗೂ ಸಂಘಟನೆಗಳು ಶಾಸಕರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಮನೆ ಮನೆಗಳಿಗೆ ತಿಳಿಸಿ ಅವರ ಯಶಸ್ಸಿಗೆ ಪ್ರಯತ್ನಿಸಬೇಕು. ಇಬ್ಬರು ಶಾಸಕÀರಿಗೆ ‘ಕೊಡಗು ರತ್ನ’ ಪ್ರಶಸ್ತಿ ನೀಡಲು ದಲಿತ ಸಂಘರ್ಷ ಸಮಿತಿ ಚಿಂತನೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಸಮಾವೇಶ ನಡೆಸಿ ಗೌರವಿಸುವ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು. ನಿವೃತ್ತ ಶಿಕ್ಷಕಿ ಪ್ರೇಮಾ ಕೃಷ್ಣಪ್ಪ ಅವರು ಮಾತನಾಡಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಶಿಕ್ಷಣ, ಸಂಘಟನೆ, ಹೋರಾಟದ ಧ್ಯೇಯವನ್ನಿಟ್ಟುಕೊಂಡು ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಉತ್ತಮ ಕಾರ್ಯಗಳನ್ನು ಮಾಡುತ್ತ ಬಂದಿದೆ. ವಯೋವೃದ್ಧರ ಬಗ್ಗೆ ಕಾಳಜಿಯನ್ನೂ ಹೊಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಮಿತಿಯ ಸದಸ್ಯೆ ಮಾಲತಿ ಹಾಗೂ ಆಶ್ರಮದ ಸಿಬ್ಬಂದಿಗಳು ಉಪಸ್ಥಿತರಿದ್ದರು. ವೃದ್ಧಾಶ್ರಮದ ವ್ಯವಸ್ಥಾಪಕ ಹೆಚ್.ಆರ್.ಸತೀಶ್ ಅವರು ಸ್ವಾಗತಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.