Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ಐತಿಹಾಸಿಕ ಶ್ರೀ ಗಣಪತಿ ರಥೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ಐತಿಹಾಸಿಕ ಶ್ರೀ ಗಣಪತಿ ರಥೋತ್ಸವ*

ನವೆಂಬರ್ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ನ.8 NEWS DESK : ಕುಶಾಲನಗರ ಐತಿಹಾಸಿಕ ಶ್ರೀ ಗಣಪತಿ ದೇವಾಲಯ ರಥೋತ್ಸವ ವಿಶೇಷ ಪೂಜಾ ವಿಧಿ ವಿಧಾನಗಳೊಂದಿಗೆ ಸಾವಿರಾರು ಸಂಖ್ಯೆಯ ಭಕ್ತಾದಿಗಳ ಉಪಸ್ಥಿತಿಯಲ್ಲಿ ಭಕ್ತಿ ಭಾವದಿಂದ ಜರುಗಿತು. ಕಾರ್ತಿಕ ಮಾಸ ಕೃಷ್ಣ ಪಕ್ಷದಲ್ಲಿ ನಡೆಯುವ ದೇವಾಲಯದ ರಥೋತ್ಸವ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಬೆಳಗಿನಿಂದಲೇ ದೇವರಿಗೆ ಪಂಚಾಮೃತ ಅಭಿಷೇಕ, ಏಕವಾರ, ರುದ್ರಾಭಿಷೇಕ ಪುಷ್ಪಾಲಂಕಾರ ರಥ ಪೂಜೆ ರಥ ಬಲಿ ನಂತರ ಗಣಪತಿ ದೇವರನ್ನು ರಥದಲ್ಲಿ ಪ್ರತಿಷ್ಠಾಪಿಸಿ ಭಕ್ತಾದಿಗಳು ರಥ ಬೀದಿಯ ಮೂಲಕ ಆಂಜನೇಯ ದೇವಾಲಯ ತನಕ ಘೋಷಣೆಗಳೊಂದಿಗೆ ಭಕ್ತಿಭಾವದಿಂದ ಎಳೆದರು. ದೇವಾಲಯದ ಪ್ರಧಾನ ಅರ್ಚಕರಾದ ಆರ್ ಕೆ ನಾಗೇಂದ್ರ ಬಾಬು ನೇತೃತ್ವದಲ್ಲಿ ರಾಘವೇಂದ್ರ ಭಟ್ ಮತ್ತು ಅರ್ಚಕರ ತಂಡದಿಂದ ಸಾಂಪ್ರದಾಯಿಕ ಪೂಜಾ ವಿಧಿ ವಿಧಾನಗಳು ಜರುಗಿದವು. ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯ ಸಾವಿರಾರು ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡಿದ್ದರು. ಜಾತ್ರೋತ್ಸವ ಅಂಗವಾಗಿ ದೇವಾಲಯದ ಒಳ ಆವರಣವನ್ನು ವಿಶೇಷವಾಗಿ ಹೂಗಳಿಂದ ಸಿಂಗರಿಸಲಾಗಿತ್ತು.
ರಥ ತೆರಳುವ ರಸ್ತೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ನೂರಾರು ಸಂಖ್ಯೆಯ ಮಕ್ಕಳು ಮಹಿಳೆಯರಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು. ಅಯ್ಯಪ್ಪ ಸ್ವಾಮಿ ದೇವರ ಮಾಲಾಧಾರಿಗಳು ರಥದ ಮುಂದೆ ಕರ್ಪೂರ ಆರತಿ ಬೆಳಗಿ ಅಯ್ಯಪ್ಪ ಸ್ವಾಮಿ ಘೋಷಣೆ ಕೂಗಿದರು. ಕೆಲವು ಭಕ್ತರು ಹರಕೆಯ ಹೆಸರಿನಲ್ಲಿ ತಮಗಿಷ್ಟ ಬಂದಷ್ಟು ಈಡುಗಾಯಿಯನ್ನು ರಥದ ಮುಂದೆ ಒಡೆಯುತ್ತಿದ್ದ ದೃಶ್ಯ ಕಂಡು ಬಂತು. ಕೊಡ್ಲಿಪೇಟೆ ಕಿರಿ ಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಅವರು ದೇವಾಲಯಕ್ಕೆ ಆಗಮಿಸಿ ಪೂಜೆಯಲ್ಲಿ ಪಾಲ್ಗೊಂಡು ರಥೋತ್ಸವ ಮತ್ತು ಉತ್ಸವವಾದಿಗಳಿಗೆ ಶುಭ ಹಾರೈಸಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ ಮಂತರ್ ಗೌಡ, ಮಾಜಿ ಸಚಿವರಾದ ಎಂ ಪಿ ಅಪ್ಪಚ್ಚು ರಂಜನ್ ಅವರು ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿದರು. ಈ ಸಂದರ್ಭ ಕ್ಷೇತ್ರ ಶಾಸಕ ಡಾ ಮಂತರ್ ಗೌಡ ಗೌಡ ಅವರು ರಥೋತ್ಸವಕ್ಕೆ ಶುಭ ಕೋರಿದರು. ಶ್ರೀ ಗಣಪತಿ ದೇವಾಲಯ ಸಮಿತಿ ಅಧ್ಯಕ್ಷರಾದ ಎಂ ಕೆ ದಿನೇಶ್ ಮಾತನಾಡಿ, ರಥೋತ್ಸವ ಅದ್ದೂರಿಯಾಗಿ ನಡೆದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು. ರಥೋತ್ಸವದ ಅಂಗವಾಗಿ ಅನ್ನದಾನ ಸಮಿತಿ ಮೂಲಕ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಸಲಾಗಿದೆ ಎಂದು ಹೇಳಿದರು. ಗೋ ಜಾತ್ರೆ ಡಿಸೆಂಬರ್ 12ರಿಂದ 2 ದಿನಗಳ ಕಾಲ ನಡೆಯುತ್ತದೆ ಎಂದು ಹೇಳಿದರು. ಪ್ರಧಾನ ಅರ್ಚಕರಾದ ಆರ್ ಕೆ ನಾಗೇಂದ್ರ ಬಾಬು ಅವರು ಮಾತನಾಡಿ, ಈ ತಿಂಗಳ 14 ರ ತನಕ ದೇವಾಲಯದಲ್ಲಿ ಪ್ರತಿದಿನ ಉತ್ಸವವಾದಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಗುಂಡೂರಾವ್ ಜಾತ್ರಾ ಮೈದಾನದಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ, ನವೆಂಬರ್ 19ರ ತನಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜಾತ್ರಾ ಮೈದಾನದಲ್ಲಿ ನಡೆಯಲಿದೆ ಎಂದು ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ವಿ.ಪಿ.ಶಶಿಧರ್ ತಿಳಿಸಿದರು. ಕುಶಾಲನಗರ ಡಿ ವೈ ಎಸ್ ಪಿ ಚಂದ್ರಶೇಖರ್ ಮತ್ತು ಕುಶಾಲನಗರ ಪೊಲೀಸ್ ವೃತ್ತ ನಿರೀಕ್ಷಕ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ನೂರಕ್ಕೂ ಅಧಿಕ ಪೊಲೀಸರು ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು. ರಥೋತ್ಸವ ವೇಳೆ ಜೇಬು ಕಳ್ಳತನ ಮತ್ತಿತರ ಅಪರಾಧ ಸಂಬಂಧ ಮುನ್ನೆಚ್ಚರಿಕೆ ಕ್ರಮವಾಗಿ ಅಪರಾಧ ವಿಭಾಗದ ಪೊಲೀಸರು ಅಪರಿಚಿತ ಮತ್ತು ಸಂಶಯಾಸ್ಪದ ವ್ಯಕ್ತಿಗಳನ್ನು ಪತ್ತೆ ಹಚ್ಚಲು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರು. ದೇವಾಲಯ ಸೇವಾ ಸಮಿತಿಯ ಕಾರ್ಯಕಾರಿ ಮಂಡಳಿ ಅಧ್ಯಕ್ಷ ಎಂ ಕೆ ದಿನೇಶ್, ಉಪಾಧ್ಯಕ್ಷರಾದ ಆರ್ ಬಾಬು, ಗೌರವಾಧ್ಯಕ್ಷ ವಿ ಎನ್ ವಸಂತಕುಮಾರ್, ಕಾರ್ಯದರ್ಶಿ ಬಿ ಕೆ ಮುತ್ತಣ್ಣ, ಖಜಾಂಚಿ ಎಸ್ ಕೆ ಸತೀಶ್, ಸಹ ಕಾರ್ಯದರ್ಶಿ ಕೆ ಎನ್ ದೇವರಾಜ್, ನಿರ್ದೇಶಕರಾದ ವಿ ಡಿ ಪುಂಡರಿಕಾಕ್ಷ, ಹೆಚ್.ಎಂ.ಚಂದ್ರು, ಟಿ.ಆರ್.ಶರವಣಕುಮಾರ್ ಮತ್ತು ವಿಶೇಷ ಆಹ್ವಾನಿತರಾದ ಹೆಚ್.ಎನ್.ರಾಮಚಂದ್ರ, ಡಿ.ಅಪ್ಪಣ್ಣ, ಡಿ.ಸಿ.ಜಗದೀಶ್, ಕೆ.ಎನ್.ಸುರೇಶ್, ಕೆ.ಸಿ.ನಂಜುಂಡಸ್ವಾಮಿ, ಎಂ.ಮುನಿಸ್ವಾಮಿ, ವ್ಯವಸ್ಥಾಪಕರಾದ ಎಸ್.ಕೆ.ಶ್ರೀನಿವಾಸ್ ರಾವ್ ಇದ್ದರು. ರಥೋತ್ಸವ ಹಿನ್ನೆಲೆಯಲ್ಲಿ ಸ್ಥಳೀಯ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಸಾವಿರಾರು ಸಂಖ್ಯೆಯ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು. ದೇವಾಲಯ ರಥೋತ್ಸವ ಅಂಗವಾಗಿ ಕುಶಾಲನಗರ ಗುಂಡೂರಾವ್ ಬಡಾವಣೆಯ ಜಾತ್ರಾ ಮೈದಾನದಲ್ಲಿ ಮನರಂಜನೆ ಪಾರ್ಕ್ ಗೆ ಕ್ಷೇತ್ರ ಶಾಸಕರಾದ ಡಾ ಮಂತರ್ ಗೌಡ ಅವರು ಚಾಲನೆ ನೀಡಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15 : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ…

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.