Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಿಳಿ ಫಲಕದ ವಾಹನಗಳಿಂದ ಹಳದಿ ಫಲಕದ ವಾಹನಗಳಿಗೆ ನಷ್ಟ : ಸೂಕ್ತ ಕ್ರಮಕ್ಕೆ ಆಗ್ರಹ*
  • *ಶಾಂತಿನಿಕೇತನ ಯುವಕ ಸಂಘದಿoದ ಯಶಸ್ವೀ ರಕ್ತದಾನ ಶಿಬಿರ*
  • *ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*
  • *ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*
  • *ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*
  • *ವಾಲಿಬಾಲ್ ಪಂದ್ಯಾವಳಿ : ಸರ್ವದೈವತ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಕಾಂತಪ್ಪಗೆ ಪಿಎಚ್‍ಡಿ ಪದವಿ*
  • *ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*
  • *ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*
  • *ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾ ಕೂಟ : ದೈಹಿಕ ಮತ್ತು ಮಾನಸಿಕ ಸ್ಥಿರತೆಗೆ ಕ್ರೀಡೆ ಸಹಕಾರಿ : ಶ್ರೀ ನಿವಾಸ ಗೌಡ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾ ಕೂಟ : ದೈಹಿಕ ಮತ್ತು ಮಾನಸಿಕ ಸ್ಥಿರತೆಗೆ ಕ್ರೀಡೆ ಸಹಕಾರಿ : ಶ್ರೀ ನಿವಾಸ ಗೌಡ*

ನವೆಂಬರ್ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪುತ್ತೂರು ನ.10 NEWS DESK : ಕ್ರೀಡೆ ಎಂದರೆ ಅದು ಕೇವಲ ಸ್ಪರ್ಧೆಯಲ್ಲ ಅದೊಂದು ಶಿಸ್ತು, ಅದೊಂದು ಶಕ್ತಿ ಅದೊಂದು ಸಮನ್ವಯ ಹೀಗಾಗಿ ನಿಜವಾದ ಕ್ರೀಡಾ ಮನೋಭಾವದಿಂದ ಸ್ಪರ್ಧಿಸಿದರೆ ಅವನು ದೇಶದ ಸಂಪತ್ತಾಗುವುದರಲ್ಲಿ ಸಂದೇಹವಿಲ್ಲ ಎಂದು ವಿಟ್ಲದ ವಿಠ್ಠಲ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ ಗೌಡ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಾರ್ಷಿಕ ಕ್ರೀಡಾ ಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತಾಡಿದರು. ದೈಹಿಕ ಮತ್ತು ಮಾನಸಿಕ ಸ್ಥಿರತೆಗೆ ಸಹಕಾರಿಯಾದ ಕ್ರೀಡೆಯಲ್ಲಿ ಗೆದ್ದಾಗ ಸಂಭ್ರಮಿಸುತ್ತಾ, ಸೋತಾಗ ಸೋಲಿನ ಕಾರಣದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುತ್ತಾ ಹೊಸತನವನ್ನು ರೂಢಿಸಿಕೊಳ್ಳಬೇಕು ಎಂದರು. ಗೌರವ ಅತಿಥಿಗಳಾಗಿದ್ದ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಪ್ರತಿಭಾವಂತ ಕ್ರೀಡಾಪಟು ಆದರ್ಶ್ ಎಸ್ ಪಿ ಮಾತನಾಡಿ ಕ್ರೀಡಾಪಟುಗಳ ಜೀವನ ಸುಲಭದ್ದಲ್ಲ. ಅವರ ಸಾಧನೆಯ ಹಿಂದೆ ಅಪಾರವಾದ ಪರಿಶ್ರಮವಿರುತ್ತದೆ ಅನೇಕ ಸಿಹಿ-ಕಹಿ ಘಟನೆಗಳಿರುತ್ತವೆ. ಸಾಧನಾ ಪಥದಲ್ಲಿ ಎದುರಾಗುವ ಎಡರು-ತೊಡರುಗಳನ್ನು ಮೆಟ್ಟಿ ನಿಲ್ಲುವುದು ನಿಜವಾದ ಸವಾಲಾಗಿರುತ್ತದೆ ಎಂದರು.ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಮಾತನಾಡಿ ಎಷ್ಟೇ ಹಣವಿದ್ದರೂ ಅದರಿಂದ ಆರೋಗ್ಯವನ್ನು ಕೊಂಡುಕೊಳ್ಳುವುದಕ್ಕೆ ಸಾಧ್ಯವಿಲ್ಲ. ಆರೋಗ್ಯವಿಲ್ಲದಿದ್ದರೆ ಜೀವನ ವ್ಯರ್ಥ. ಕ್ರೀಡೆಗಳಿಂದ ಮತ್ತು ಸೂಕ್ತ ಶಾರೀರಿಕ ಚಟುವಟಿಕೆಗಳಿಂದ ಉತ್ತಮ ಅರೋಗ್ಯವನ್ನು ಹೊಂದುವುದು ಸಾಧ್ಯ ಎಂದರು. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ.ಮನುಜೇಶ್.ಬಿ.ಜೆ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಸತ್ಯನಾರಾಯಣ ಭಟ್ ಮಾತನಾಡಿ ಎಲ್ಲಾ ಕ್ರೀಡಾಪಟುಗಳಲ್ಲಿ ಕ್ರೀಡಾ ಮನೋಭಾವವಿರಬೇಕು. ಸೋಲು ಗೆಲುವುಗಳನ್ನು ಸಮಚಿತ್ತದಿಂದ ಸ್ವೀಕರಿಸಬೇಕು ಎಂದರು. ವಿವಿಧ ಭಾಗಗಳ ವಿವಿಧ ಜನರೊಡನೆ ಬೆರೆಯುವ ಅವಕಾಶವನ್ನು ನೀಡುವ ಕ್ರೀಡಾಕೂಟಗಳು ಬಾಂಧವ್ಯ ವೃದ್ಧಿಗೆ ಸಹಕಾರಿಯಾಗಿವೆ ಎಂದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಆಕರ್ಷಕ ಪಥ ಸಂಚಲನವನ್ನು ಮಾಡಿದ ತಂಡಗಳನ್ನು ಗುರುತಿಸಿ ಗೌರವಿಸಲಾಯಿತು. ಇದರಲ್ಲಿ ಎಂಬಿಎ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಹಾಗೂ ಎಂಸಿಎ ವಿಭಾಗದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದುಕೊಂಡರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕದ ಸಾಧನೆಯನ್ನು ಮಾಡಿದ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನು ಮುಖ್ಯ ಅತಿಥಿಗಳಿಗೆ ಹಸ್ತಾಂತರಿಸಿ ಜ್ಯೊತಿಯನ್ನು ಬೆಳಗಿದರು. ಸುಮಂತ್ ಸ್ವಾಗತಿಸಿ, ಅನೂಷಾ.ಎ ವಂದಿಸಿದರು. ಎಂಸಿಎ ವಿಭಾಗದ ಡಾ.ರಾಜೇಶ್ವರಿ.ಎಂ ಹಾಗೂ ಪ್ರೊ.ನೀಮಾ.ಎಚ್ ಕಾರ್ಯಕ್ರಮ ನಿರ್ವಹಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಿಳಿ ಫಲಕದ ವಾಹನಗಳಿಂದ ಹಳದಿ ಫಲಕದ ವಾಹನಗಳಿಗೆ ನಷ್ಟ : ಸೂಕ್ತ ಕ್ರಮಕ್ಕೆ ಆಗ್ರಹ*

ಸೆಪ್ಟೆಂಬರ್ 22, 2026

*ಶಾಂತಿನಿಕೇತನ ಯುವಕ ಸಂಘದಿoದ ಯಶಸ್ವೀ ರಕ್ತದಾನ ಶಿಬಿರ*

ಸೆಪ್ಟೆಂಬರ್ 22, 2026

*ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*

ಸೆಪ್ಟೆಂಬರ್ 21, 2026

*ಶಾಂತಿನಿಕೇತನ ಯುವಕ ಸಂಘದಿoದ ಯಶಸ್ವೀ ರಕ್ತದಾನ ಶಿಬಿರ*

ಸೆಪ್ಟೆಂಬರ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.22 : ಶಾಂತಿನಿಕೇತನ ಯುವಕ ಸಂಘದ ವತಿಯಿಂದ 48ನೇ ವರ್ಷದ ಅದ್ದೂರಿ ಗಣೇಶೋತ್ಸವದ ಅಂಗವಾಗಿ ಬೃಹತ್…

*ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*

ಸೆಪ್ಟೆಂಬರ್ 21, 2026

*ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*

ಸೆಪ್ಟೆಂಬರ್ 21, 2026

*ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*

ಸೆಪ್ಟೆಂಬರ್ 21, 2026

*ವಾಲಿಬಾಲ್ ಪಂದ್ಯಾವಳಿ : ಸರ್ವದೈವತ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 21, 2026

*ಕಾಂತಪ್ಪಗೆ ಪಿಎಚ್‍ಡಿ ಪದವಿ*

ಸೆಪ್ಟೆಂಬರ್ 21, 2026

*ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*

ಸೆಪ್ಟೆಂಬರ್ 21, 2026

*ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*

ಸೆಪ್ಟೆಂಬರ್ 21, 2026

*ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*

ಸೆಪ್ಟೆಂಬರ್ 21, 2026

*ಸೋಮವಾರಪೇಟೆಯಲ್ಲಿ ಓಣಂ ಉತ್ಸವ ಹಾಗೂ ಹಿಂದೂ ಮಲಯಾಳ ಸಮಾಜದ ದಶಮಾನೋತ್ಸವ*

ಸೆಪ್ಟೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.